224 ಕ್ಷೇತ್ರಗಳಲ್ಲೂ ಸಿಎಂ, ಡಿಸಿಎಂ ಘೋಷಿಸಿ
ನವದೆಹಲಿ:ಸಂವಿಧಾನದ ತಿದ್ದುಪಡಿ ಮಾಡಿ 224 ಕ್ಷೇತ್ರಗಳಲ್ಲೂ ಶಾಸಕರನ್ನೂ ಸಿಎಂ ಮತ್ತು ಡಿಸಿಎಂ ಮಾಡಿ ಬಿಡಿ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಕಾಂಗ್ರೆಸ್ ನಾಯಕರಿಗೆ ವ್ಯಂಗ್ಯ ಮಾಡಿದ್ದಾರೆ.ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಹೆಚ್ಚುವರಿ ಡಿಸಿಎಂ ನೇಮಕ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್‌ನವರು ಬಹಳ ದಿನಗಳಿಂದ ಮದುವೆ ಮಾಡಿಕೊಳ್ಳಬೇಕು ಎಂದು ಯೋಚನೆ ಮಾಡುತ್ತಿದ್ದರು. ಆದರೆ ನಿರೀಕ್ಷೆಗೂ ಮೀರಿ ಅವರ ಮದುವೆ ಆಯಿತು. ಭಾರಿ ಬಹುಮತದೊಂದಿಗೆ ಅಧಿಕಾರ ಬಂತು. […]







































































































































































































































































































































































































































































































































































































































































































































































































































































































































































































































































































































