ಬೆಂಗಳೂರಿನ ಶಿವಾಜಿನಗರದಲ್ಲಿ ಹಸಿರು ಬಾವುಟ ತೆರವು
ಬೆಂಗಳೂರು:ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ಹಾಗೂ ರಾಷ್ಟ್ರ ಧ್ವಜ ವಿವಾದ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿ ಹಾರಿಸಲಾದ ಹಸಿರು ಬಾವುಟ ವೈರಲ್ ಆಗಿದ್ದು, ಹಸಿರು ಬಾವುಟ ತೆಗೆಸುವ ತಾಕತ್ ನಿಮಗೆ ಇಲ್ಲವಾ ಎಂದು ಬಿಜೆಪಿ ನಾಯಕರು ಟ್ವೀಟ್ ಮಾಡಿ ಸವಾಲು ಹಾಕಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು, ಚಾಂದಿನಿ ಚೌಕ್‌ನ ಬಿಬಿಎಂಪಿ ಧ್ವಜಸ್ತಂಭದಲ್ಲಿದ್ದ ಹಸಿರು ಬಾವುಟ ತೆರವು ಮಾಡಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ.ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿನ […]







































































































































































































































































































































































































































































































































































































































































































































































































































































































































































































































































































































