September 15, 2026

ಒಬ್ಬ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು

ಬೆಂಗಳೂರು:ಕರಸೇವಕನ ಬಂಧನ ಖಂಡಿಸಿ ಬಿಜೆಪಿ ನಡೆಸಿರುವ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮAಡಲರಾಗಿದ್ದಾರೆ. ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧ ಬೇಕಾದ್ರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.ಜೈಲಲ್ಲಿ ಹಿಂದೂಗಳೇ ಹೆಚ್ಚಿದ್ದಾರೆ. […]

ಕರಸೇವಕರ ಅರೆಸ್ಟ್ ಮಾಡಿದ್ದ ಇನ್ಸ್ಪೆಕ್ಟರ್‌ಗೆ ಕಡ್ಡಾಯ ರಜೆ

ಹುಬ್ಬಳ್ಳಿ:ಕರಸೇವಕರ ಬಂಧನ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ಸರ್ಕಾರ ಈಗ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದ ಶಹರ ಠಾಣೆಯ ಇನ್ಸ್ಪೆಕ್ಟರ್ ಅವರನ್ನು ಕಡ್ಡಾಯ ರಜೆಯ ಮೇಲೆ ಸರ್ಕಾರ ಕಳುಹಿಸಿದೆ.ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದ ಮಹಮದ್ ರಫೀಕ್ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಅವರ ಜಾಗಕ್ಕೆ ಪ್ರಭಾರಿ ಇನ್ಸ್ಪೆಕ್ಟರ್ ಆಗಿ ಬಿಎ ಜಾಧವ್ ಅವರನ್ನು ನೇಮಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಬಿಎ ಜಾಧವ್‌ಗೆ ಪ್ರಭಾರಿ ಠಾಣಾಧಿಕಾರಿಯಾಗಿ […]

ಮಸ್ಕ್ನ ಸ್ಪೇಸ್‌ಎಕ್ಸ್ ರಾಕೆಟ್‌ನಲ್ಲಿ ಶೀಘ್ರ ಇಸ್ರೋ ಉಪಗ್ರಹ ಉಡಾವಣೆ

ನವದೆಹಲಿ:ಭಾರತದ ಸಂಪರ್ಕ ಉಪಗ್ರಹ ಜಿಸ್ಯಾಟ್-20 ಉಪಗ್ರಹದ ಉಡಾವಣೆಗಾಗಿ ಮೊದಲ ಬಾರಿಗೆ ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – ೯ ರಾಕೆಟ್ ಬಳಕೆ ಮಾಡಿಕೊಳ್ಳಲು ಇಸ್ರೋ ಒಪ್ಪಂದ ಮಾಡಿಕೊಂಡಿದೆ.ಸುಮಾರು 230ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ಭೂ ಸ್ಥಿರ ಕಕ್ಷೆಗೆ ತಲುಪಿಸಿರುವ ಹೆಗ್ಗಳಿಕೆ ಫಾಲ್ಕನ್-9 ರಾಕೆಟ್‌ನದ್ದಾಗಿದೆ. ಸೂಕ್ತ ಸಮಯದಲ್ಲಿ ಬೇರೆ ರಾಕೆಟ್‌ಗಳು ಲಭ್ಯವಿಲ್ಲದೇ ಇರುವುದರಿಂದ ಸ್ಪೇಸ್ ಎಕ್ಸ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ರಾಕೆಟ್ ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದ್ದಾರೆ. […]

ಸ್ವಯಂಪ್ರೇರಿತ ನಂಜನಗೂಡು ಬಂದ್‌ಗೆ ಭರ್ಜರಿ ಪ್ರತಿಕ್ರಿಯೆ

ಮೈಸೂರು:ನಂಜನಗೂಡು ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಳನ್ನು ಬಂಧಿಸುವAತೆ ಆಗ್ರಹಿಸಿ ಇಂದು ಕರೆ ನೀಡಿದ ಸ್ವಯಂಪ್ರೇರಿತ ನಂಜನಗೂಡು ಬಂದ್‌ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೆಡಿಕಲ್ ಅಂಗಡಿ ಹೊರತು ಪಡಿಸಿ ಎಲ್ಲಾ ವ್ಯಾಪಾರ ಬಂದ್ ಮಾಡಿ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ,ದೇವಸ್ಥಾನದ ಸುತ್ತಮುತ್ತಲಿನ ಬೀದಿಗಳಲ್ಲಿ ವ್ಯಾಪಾರ ವಹಿವಾಟು ಆರಂಭವಾಗಿಲ್ಲ. ಬಂದ್‌ಗೆ ಬೆಂಬಲ ಕೊಡುವಂತೆ ನಂಜನಗೂಡಿನಲ್ಲಿ ನಂಜುAಡೇಶ್ವರನ ಭಕ್ತರು ಕರ ಪತ್ರ ಹಂಚುತ್ತಿದ್ದಾರೆ.ಈ ಪ್ರಕರಣದ ಕುರಿತು ದೇವಾಲಯದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್, ದೇವರಿಗೆ ಎರಚಿರುವುದು ಶುದ್ಧ […]

ಇನ್ಮುಂದೆ ರಾಜ್ಯದಲ್ಲಿ ಪದವಿ ಶಿಕ್ಷಣ ದುಬಾರಿ 10% ಶುಲ್ಕ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು:ರಾಜ್ಯ ಸರ್ಕಾರ ವಿದ್ಯುತ್ ಬಿಲ್ ಹಾಗೂ ನೀರಿನ ಬಿಲ್ ಹೆಚ್ಚಳ ಮಾಡಿದ ಬಳಿಕ ಪದವಿ ಶಿಕ್ಷಣ ಶುಲ್ಕವನ್ನು 10% ಹೆಚ್ಚಳ ಮಾಡಿ ಜನರಿಗೆ ಶಾಕ್ ನೀಡಿದೆ.ವಿಶ್ವವಿದ್ಯಾಲಯಗಳು ಸಲ್ಲಿಸಿದ್ದ ಶುಲ್ಕ ಹೆಚ್ಚಳ ಪ್ರಸ್ತಾವನೆಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ಕೊಟ್ಟಿದೆ. ಇದರಿಂದ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜ್‌ಗಳ ಶಿಕ್ಷಣ ಶುಲ್ಕವನ್ನು 10% ಹೆಚ್ಚಿಸಲು ಸರ್ಕಾರದಿಂದ ಅನುಮತಿ ಸಿಕ್ಕಂತಾಗಿದೆ. ಪ್ರಸ್ತುತ ವರ್ಷದಿಂದಲೇ ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಏಕರೂಪ ಶುಲ್ಕ ತಜ್ಞರ ಸಮಿತಿ ನೀಡಿದ್ದ ವರದಿಗೆ […]

ನಂಜುಡೇಶ್ವರನಿಗೆ ಎರಚಿರುವುದು ಎಂಜಲು ನೀರಲ್ಲ, ಶುದ್ದ ನೀರು: ಪ್ರಧಾನ ಅರ್ಚಕ

ಮೈಸೂರು: ನಂಜುಂಡೇಶ್ವರನ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದ್​ಗೆ ಕರೆ ನೀಡಲಾಗಿತ್ತು. ಇದೀಗ ಈ ಕುರಿತು ದೇವಾಲಯ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ್ದಾರೆ ಎಂದು ಕಪೋಲಕಲ್ಪಿತ ಹೇಳಿಕೆ ಹಾಗೂ ಚಿತ್ರಗಳನ್ನು ಕಿಡಿಗೇಡಿಗಳು ಹರಡುತ್ತಿದ್ದಾರೆ. ಜೊತೆಗೆ ಬಂದ್​ಗೆ ಕರೆ ನೀಡಿದವರು ಕಿಡಿಗೇಡಿಗಳು. ಇದರಿಂದ ಕ್ಷೇತ್ರದ ಪಾವಿತ್ರತೆಗೆ ದಕ್ಕೆಯುಂಟಾಗಿದೆ. ದೇವರಿಗೆ ಯಾವುದೇ ಎಂಜಲು ನೀರು ಎರಚಿಲ್ಲ. ಕಿಡಿಗೇಡಿಗಳ ವದಂತಿಗೆ ಕಿವಿಗೊಡಬೇಡಿ ಎಂದು ಪಕ್ರಟಣೆ ಹೊರಡಿಸಿದೆ. ನಂಜನಗೂಡಿನ ಶಾಂತಿ ಸಭೆ ಬಳಿಕ ನಂಜುಂಡೇಶ್ವರ […]

ಬಾಗಿಲಿಗೆ ಬಂತು ಸರ್ಕಾರ

ಬೆಂಗಳೂರು: ಇಂದಿನಿAದ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕೆ.ಆರ್.ಪುರಂನ ಐಟಿಐ ಕ್ರೀಡಾಂಗಣದಲ್ಲಿ ಬಾಗಿಲಿಗೆ ಬಂತು ಸರ್ಕಾರ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ಗೆ ಜನರಿಂದ ಎರಡು ಸಾವಿರಕ್ಕೂ ಅಧಿಕ ದೂರುಗಳು ಬಂದಿವೆ. ಸಮಸ್ಯೆಗಳ ಸರಮಾಲೆ ಹೊತ್ತು ಎರಡು ಸಾವಿರಕ್ಕೂ ಅಧಿಕ ಜನರು ಬಂದಿದ್ದರು.ಎರಡು ವಿಧಾನಸಭಾ ಕ್ಷೇತ್ರದಿಂದ ಇಲ್ಲಿಯವರೆಗೂ ಅಹವಾಲು ಸಲ್ಲಿಸಲು 2,147 ಜನರಿಂದ ನೋಂದಣಿ ಮಾಡಿಕೊಂಡಿದ್ದರು. ಟೋಕನ್ ಪಡೆದ ಒಬ್ಬೊಬ್ಬರನ್ನೇ ತಮ್ಮ ಬಳಿ ಕರೆದ ಡಿಕೆ ಶಿವಕುಮಾರ್ ಅಹವಾಲು ಆಲಿಸಿದ್ದಾರೆ.ಕೆಲ ಸಮಸ್ಯೆಗಳಿಗೆ […]

ಟಾಪ್ 10 ರೊಳಗೆ ಕಿಂಗ್ ಕೊಹ್ಲಿ೪ ಸ್ಥಾನ ಕುಸಿದ ರೋಹಿತ್..!

ಪ್ರಸ್ತುತ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಆಡುತ್ತಿದೆ. ಮೊದಲ ಟೆಸ್ಟ್ನಲ್ಲಿ ಹೀನಾಯ ಸೋಲು ಕಂಡ ರೋಹಿತ್ ಪಡೆ 2ನೇ ಟೆಸ್ಟ್ನಲ್ಲಿ ಭರ್ಜರಿ ಪುನರಾಗಮನ ಮಾಡಿದೆ. ಈ ನಡುವೆ ನೂತನ ಐಸಿಸಿ ಟೆಸ್ಟ್ ಶ್ರೇಯಾಂಕ ಬಿಡುಗಡೆಯಾಗಿದ್ದು, ಮಾಜಿ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಮುಂಬಡ್ತಿ ಪಡೆದಿದ್ದರೆ, ನಾಯಕ ರೋಹಿತ್ ಶರ್ಮಾಗೆ ಹಿನ್ನಡೆಯುಂಟಾಗಿದೆ.ನೂತನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ 864 ರೇಟಿಂಗ್‌ನೊAದಿಗೆ ಪ್ರಸ್ತುತ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿರುವ ಇಂಗ್ಲೆAಡ್ ತಂಡದ […]

ಸಿರಾಜ್ ದಾಳಿಗೆ ಶರಣಾದ ದಕ್ಷಿಣ ಆಫ್ರಿಕಾ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಡೀ ದಕ್ಷಿಣ ಆಫ್ರಿಕಾ ತಂಡ ಕೇವಲ 55 ರನ್‌ಗಳಿಗೆ ಆಲೌಟ್ ಆಗಿದೆ. ಭಾರತದ ಪರ ಮಾರಕ ಬೌಲಿಂಗ್ ಮಾಡಿದ ಸಿರಾಜ್ 6 ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದಾರೆ.ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ದಕ್ಷಿಣ ಆಫ್ರಿಕಾದ ನಾಯಕ ಡೀನ್ ಎಲ್ಗರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ ತಂಡದ ಸ್ಕೋರ್ ಕೇವಲ 5 ರನ್ ಆಗಿದ್ದಾಗ ಆಡಮ್ […]

ರಾಮಮಂದಿರ ಉದ್ಘಾಟನೆ ನಂತರ ಕೋಟ್ಯಂತರ ಭಕ್ತರಿಗೆ ಅವಕಾಶ

ಉಡುಪಿ:ದೇಶದಲ್ಲಿ ರಾಮನ ಭಕ್ತರು, ಸಂತರು-ಮಹAತರು ಬಹಳ ಇದ್ದಾರೆ. ಜನಪ್ರತಿನಿಧಿಗಳು, ದಾನಿಗಳು ರಾಮ ಮಂದಿರದ ಪ್ರಾಣ ಪ್ರತಿಷ್ಠೆಗೆ ಭಕ್ತರೆಲ್ಲಾ ಆಮಂತ್ರಿತರು. ಪ್ರಾಣಪ್ರತಿಷ್ಠೆಗೆ ಪ್ರಾತಿನಿಧ್ಯ ಇಟ್ಟುಕೊಂಡು ಆಮಂತ್ರಣ ನೀಡಲು ಆಯ್ಕೆ ಮಾಡಿ ಆಹ್ವಾನ ಕೊಡಲಾಗಿದೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.ಉಡುಪಿ ಪೇಜಾವರ ಮಠದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀಮಿತ ಸ್ಥಳ ಇರುವುದರಿಂದ ಎಲ್ಲರೂ ಭಾಗಿಯಾಗಲು ಕಷ್ಟವಾಗಲಿದೆ. ಪ್ರತಿಷ್ಠಾಪನೆಯ ನಂತರ ಕೋಟ್ಯಂತರ ಭಕ್ತರಿಗೆ ಬಾಲರಾಮನ ದರ್ಶನಕ್ಕೆ ಅವಕಾಶ ಇದೆ. ಯಾವುದೇ ಗೊಂದಲಗಳು ಆಗದಿರಲಿ […]