September 15, 2026

ಕಾಂಗ್ರೆಸ್ ನಿಂದ ರಾಮ ಭಕ್ತರನ್ನು ಹೆದರಿಸುವ ಕೆಲಸ

ದಾವಣಗೆರೆ:ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿರುವ ಈ ಸಂದರ್ಭದಲ್ಲಿ ರಾಮ ಭಕ್ತರನ್ನು ಹೆದರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಕರ ಸೇವಕನ ಬಂಧನ ಖಂಡಿಸಿ ಹುಬ್ಬಳಿಗೆ ಪ್ರತಿಭಟನೆಗೆ ತೆರಳುವ ಮುನ್ನ ದಾವಣಗೆರೆಯ ಜಿಎಂಐಟಿ ಗೆಸ್ಟ್ ಹೌಸ್‌ಗೆ ಭೇಟಿಕೊಟ್ಟಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಇಡೀ ದೇಶ ರಾಮ ಭಕ್ತರು ಸಂತೋಷದಿAದ ಇದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಮಭಕ್ತರನ್ನು ಬೆದರಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದ್ದು, ರಾಜ್ಯದಲ್ಲಿ ಗಲಭೆ ಸೃಷ್ಠಿಗೆ […]

ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿಮೂಗು ಕತ್ತರಿಸಿದ ಮಾಲೀಕ

ಬೆಳಗಾವಿ:ಮಕ್ಕಳು ಹೂ ಕಿತ್ತಿದ್ದಕ್ಕೆ ಗಾರ್ಡನ್‌ನ ಮಾಲೀಕ, ಅಂಗನವಾಡಿ ಸಹಾಯಕಿಯ ಮೂಗನ್ನೇ ಕತ್ತರಿಸಿರುವ ಅಮಾನವೀಯ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸ್ವಕ್ಷೇತ್ರದಲ್ಲೇ ಈ ಘಟನೆ ನಡೆದಿದೆ. ಸುಗಂಧಾ ಮೋರೆ ಸಂತ್ರಸ್ತ ಮಹಿಳೆ. ಕಲ್ಯಾಣಿ ಮೋರೆ ಹಲ್ಲೆ ನಡೆಸಿದ ಆರೋಪಿ.ಸುಗಂಧಾ ಮೋರೆ ಅವರು ಬಾಸುರ್ತಿ ಗ್ರಾಮದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಮೂರು ದಿನದ ಹಿಂದೆ ಇವರ ಮೇಲೆ ಹಲ್ಲೆ ನಡೆಸಲಾಗಿದೆ. ಮಕ್ಕಳು ಶಾಲೆಯ ಆವರಣದ ಪಕ್ಕದಲ್ಲಿರುವ ಗಾರ್ಡನ್‌ನಲ್ಲಿರುವ ಹೂ […]

ಹರಿಪ್ರಸಾದ್‌ರನ್ನು ಕೂಡಲೇ ಬಂಧಿಸಬೇಕು: ಡಿವಿಎಸ್ ಆಗ್ರಹ

ಬೆಂಗಳೂರು:ಕೂಡಲೇ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಅವರನ್ನು ಸರ್ಕಾರ ಬಂಧಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಸದಾನಂದಗೌಡ ಆಗ್ರಹಿಸಿದ್ದಾರೆ.ಹುಬ್ಬಳ್ಳಿಯಲ್ಲಿ ರಾಮ ಮಂದಿರ ನಿರ್ಮಾಣ ಹೋರಾಟದಲ್ಲಿ ಭಾಗಿಯಾಗಿದ್ದ, ೩೧ ವರ್ಷದ ಹಳೆಯ ಪ್ರಕರಣಗಳನ್ನು ಕೆದಕಿ ಶ್ರೀಕಾಂತ್ ಪೂಜಾರಿ ಸೇರಿದಂತೆ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲೂ ಪ್ರತಿಭಟನೆ ನಡೆಸುತ್ತಿದೆ.ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಮಾಧ್ಯಮಗಳ ಜೊತೆ ಮಾತನಾಡಿದ ಡಿವಿಎಸ್, ರಾಷ್ಟ್ರೀಯ ನಾಯಕರೊಬ್ಬರು ಹೀಗೆ ಮಾತನಾಡುತ್ತಾರೆ ಅಂದರೆ ದೊಡ್ಡ ಪಿತೂರಿ ಮಾಡಿದಂತೆ […]

ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದ್ರೂ ಆಗಬಹುದು

ಬೆಂಗಳೂರು:ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು ಎಂದು ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ.ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿದ್ರೆ ನಾವೆಲ್ಲರೂ ಹೋಗುತ್ತಿದ್ದೆವು. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳು. ಅದೇ ರೀತಿ ಧರ್ಮ ಗುರುಗಳು ನಡೆಸಿಕೊಟ್ಟಿದ್ದರೆ ಅದು ಧಾರ್ಮಿಕ […]

ಕಾಟಾಚಾರಕ್ಕೆ ವಾಗ್ದೇವಿ ದರ್ಶನಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು:ಕಾಟಾಚಾರಕ್ಕೆ ವಾಗ್ದೇವಿ ದರ್ಶನ ಮಾಡಿದ ಸಿಎಂ ಸಿದ್ದರಾಮಯ್ಯ ಚುನಾವಣಾ ಹಿಂದೂ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಸಿದ್ದರಾಮಯ್ಯ ಅವರು ಮಂಗಳವಾರ ವಿಜಯಪುರ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದರು. ಇದೇ ವೇಳೆ, ವಾಗ್ದೇವಿ ದೇವಸ್ಥಾನಕ್ಕೆ ತೆರಳಿದ್ದಾಗ ಒಳ ಪ್ರವೇಶಿಸಲು ನಿರಾಕರಿಸಿ ಸಚಿವ ಎಂಬಿ ಪಾಟೀಲ್ ಅವರನ್ನು ಮುಂದೆ ಕಳುಹಿಸಿದ್ದರು. ಒಳ ಬನ್ನಿ ಎಂದು ಕರೆದರೂ ಸಿದ್ದರಾಮಯ್ಯ ಹೊರಗಡೆಯಿಂದಲೇ ಕೈಮುಗಿದು ಒಳ ಪ್ರವೇಶಿಸಲು ನಿರಾಕರಿಸಿದ್ದರು. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಬಿಜೆಪಿ ಕಿಡಿಕಾರಿದೆ.‘ಅಲ್ಪಸಂಖ್ಯಾತರಿಗೆ 10 ಸಾವಿರ […]

ಕ್ಯಾಪ್ಟನ್ ಮಾತು ಕೇಳದ ಮೈಕಲ್ವೀಕೆಂಡ್‌ನಲ್ಲಿದ್ಯಾ ಮಾರಿಹಬ್ಬ?

ಬಿಗ್ ಬಾಸ್ ಮನೆಗೆ ಕಾಲಿಟ್ಟಾಗ ಮೈಕಲ್ ಅಜಯ್‌ಗೆ ಸರಿಯಾಗಿ ಕನ್ನಡ ಬರುತ್ತಿರಲಿಲ್ಲ. ದೊಡ್ಮನೆಗೆ ಬಂದ ಮೇಲೆಯೇ ಮೈಕಲ್ ಕನ್ನಡ ಕಲಿತು ಕನ್ನಡಿಗರ ಮೆಚ್ಚುಗೆಗೆ ಪಾತ್ರರಾದರು. ಮೈಕಲ್ ನಡೆಗೆ ಕನ್ನಡದ ಮಣ್ಣಿನ ಮಗ ಎಂದೇ ಹೈಲೆಟ್ ಆದರು. ಆದರೆ ಈಗ ಮೈಕಲ್ ವರ್ತನೆ ಬದಲಾಗಿದೆ. ಎಲ್ಲದ್ದಕ್ಕೂ ಡೋಂಟ್ ಕೇರ್ ಅನ್ನುವ ಗುಣ ಅವರದ್ದಾಗಿದೆ. ಬಿಗ್ ಬಾಸ್ ರೂಲ್ಸ್ ವಿರುದ್ಧ ಮೈಕಲ್ ನಡೆದುಕೊಂಡಿದ್ದಾರೆ. ಪ್ರಶ್ನಿಸಿದ ಕ್ಯಾಪ್ಟನ್ ತನಿಷಾ ಜೊತೆ ವಾಗ್ವಾದ ಮಾಡಿದ್ದಾರೆ.ಬಿಗ್ ಬಾಸ್ ರೂಲ್ಸ್ ಬ್ರೇಕ್ ಮಾಡಿದ್ದಕ್ಕೆ ಮೈಕಲ್- ವಿನಯ್‌ಗೆ […]

ಮದುವೆಗೆ ಸಜ್ಜಾದ ಕನ್ನಡದ ‘ಗಿಲ್ಲಿ’ ನಟಿ ರಾಕುಲ್

ಕನ್ನಡದ ‘ಗಿಲ್ಲಿ’ ನಾಯಕಿ ರಾಕುಲ್ ಪ್ರೀತ್ ಸಿಂಗ್ ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಬಾಲಿವುಡ್ ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಮದುವೆಗೆ ರಾಕುಲ್ ಸಜ್ಜಾಗಿದ್ದಾರೆ. ಅದಷ್ಟೇ ಅಲ್ಲ, ಮದುವೆಗೆ ಡೇಟ್ ಕೂಡ ಫಿಕ್ಸ್ ಆಗಿದೆ.ನಟಿ ರಾಕುಲ್ ಅವರು ಬಹುಕಾಲದ ಗೆಳೆಯ ಜಾಕಿ ಭಗ್ನಾನಿ ಜೊತೆ ಫೆಬ್ರವರಿ ೨೨ರಂದು ಮದುವೆಗೆ ಪ್ಲ್ಯಾನ್ ಮಾಡಿದ್ದಾರೆ. ಗೋವಾದಲ್ಲಿ ಅದ್ದೂರಿಯಾಗಿ ಮದುವೆಯಾಗಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.ಸದ್ಯ ರಾಕುಲ್ ಅವರು ಬಾಯ್‌ಫ್ರೆಂಡ್ ಜಾಕಿ ಜೊತೆ ವಿದೇಶದಲ್ಲಿದ್ದಾರೆ ಎನ್ನಲಾಗುತ್ತಿದೆ. ಹೊಸ ವರ್ಷದ ಆಚರಣೆಯ ಸಂಭ್ರಮದಲ್ಲಿದ್ದಾರೆ.ಅAದಹಾಗೆ, ರಾಕುಲ್- ಜಾಕಿ […]

ಸೆಲೆಬ್ರೇಶನ್ ಮೂಡ್‌ನಲ್ಲಿ ಸಿಂಹಪ್ರಿಯಾ ಜೋಡಿ

ಸ್ಯಾಂಡಲ್‌ವುಡ್ ಜೋಡಿ ವಸಿಷ್ಠಸಿಂಹ- ಹರಿಪ್ರಿಯಾ ಇದೀಗ ಅಭಿಮಾನಿಗಳಿಗೆ ಹೊಸ ವರ್ಷಕ್ಕೆ ಲವ್ಲಿ ವಿಶ್ಸ್ ತಿಳಿಸಿದ್ದಾರೆ. ಹೊರದೇಶದಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡುತ್ತಿರೋ ಹರಿಪ್ರಿಯಾ ದಂಪತಿ ಚೆಂದದ ಫೋಟೋ ಶೇರ್ ಮಾಡಿ ಫ್ಯಾನ್ಸ್ಗೆ ಸ್ಪೆಷಲ್ ವಿಶ್ ಮಾಡಿದ್ದಾರೆ.ಹೊಸ ವರ್ಷ ಎಲ್ಲರಿಗೂ ಹರುಷವನ್ನು ತರಲಿ. ನಾವು ಪಾರ್ಟಿಗೆ ತಡವಾಗಿ ಬಂದಿದ್ದೇವೆ ಎಂದು ತಿಳಿದಿದೆ. ಆದರೆ ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳನ್ನು ಹೇಳಲು ತಡವಾಗಿಲ್ಲ. ಹೊಸ ಆರಂಭಕ್ಕೆ ಶುಭವಾಗಲಿ ಎಂದು ವಸಿಷ್ಠ- ಹರಿಪ್ರಿಯಾ ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ […]

ಅಪರಾಧಿ ಅಪರಾಧಿಯೇ ಎಂದ ಸಿದ್ದರಾಮಯ್ಯ

ವಿಜಯಪುರ: ಹುಬ್ಬಳ್ಳಿಯ ಶಹರ ಠಾಣಾ ಪೊಲೀಸರು ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತನನ್ನು ಬಂಧಿಸಿದ್ದನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ. ಪ್ರಕರಣದಲ್ಲಿ ಸಮಯ ಆದ ತಕ್ಷಣ ಅಪರಾಧವೇ ಹೋಗಿ ಬಿಡುತ್ತಾ ಎಂದು ಪ್ರಶ್ನಿಸಿದ್ದಾರೆ.ವಿಜಯಪುರದ ಬಿಎಲ್‌ಡಿಇ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಅವರು, ಯಾವತ್ತೂ ಅಪರಾಧಿ ಅಪರಾಧಿಯೇ ಆಗುತ್ತಾನೆ. ಹಳೆ ಪ್ರಕರಣವನ್ನು ಮುಗಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚಿಸಿದ್ದಾರೆ. ಹಾಗಾಗಿ ಪ್ರಕರಣವನ್ನು ರೀಓಪನ್ ಮಾಡಲಾಗಿದೆ ಎಂದರು.ಕಾAಗ್ರೆಸ್ ನೀಚ ಸರ್ಕಾರ ಎಂಬ ಪ್ರಲ್ಹಾದ್ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಅಪರಾಧಿಗಳಿಗೆ ಬೆಂಬಲ ಕೊಡುವ […]

ನಾನು ಕೂಡ ರಾಮಮಂದಿರ ನಿರ್ಮಾಣಕ್ಕೆ ೧೦ ಲಕ್ಷ ಕೊಟ್ಟಿದ್ದೆ

ಬೆಂಗಳೂರು:ನಾನು ಕೂಡ ರಾಮಮಂದಿರ ನಿರ್ಮಾಣಕ್ಕೆ ೧೦ ಲಕ್ಷ ರೂ. ಕೊಟ್ಟಿದ್ದೇನೆ ಎಂದು ಬಿಜೆಪಿಗೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಟಾಂಗ್ ಕೊಟ್ಟಿದ್ದಾರೆ.ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವರು ಭಾವನಾತ್ಮಕ ವಿಚಾರಗಳನ್ನ ಮುಂದಿಟ್ಟುಕೊAಡು ಅದಕ್ಕೆ ಬಣ್ಣ ಕಟ್ಟಿ ರಾಜಕೀಯ ಮಾಡ್ತಾರೆ. ಈಗಾಗಲೇ ಗೃಹ ಸಚಿವರು ಇದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈಗ ಇದಕ್ಕೆ ರಾಜಕೀಯ ಬಣ್ಣ ಬಳಿಯೋದು ಬೇಡ. ಹಳೆ ಕೇಸ್ ಆಗಿರುವುದರಿಂದ ಕ್ಲೋಸ್ ಮಾಡಬೇಕು ಅಂತಾ ಅದರ ಪ್ರಕ್ರಿಯೆ ಆಗ್ತಿದೆ. ಬಿಜೆಪಿ […]