September 14, 2026

ಪೀಣ್ಯ ಫ್ಲೈಓವರ್‌ನಲ್ಲಿ ಹೆವಿ ವೆಹಿಕಲ್ ಸಂಚಾರಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಿAದ ರಾಜ್ಯದ 22 ಜಿಲ್ಲೆಗಳು ಸೇರಿದಂತೆ ಗೋವಾ, ಮಹಾರಾಷ್ಟ್ರಕ್ಕೆ ಸಂಪರ್ಕಿಸುವ ಪೀಣ್ಯ ಫ್ಲೈಓವರ್ ಮೇಲೆ ಸಂಚರಿಸುವ ವಾಹನ ಸವಾರರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಹೆವಿ ವಾಹನಗಳ ಸಂಚಾರಕ್ಕೆ ಫ್ಲೈಓವರ್ ಫಿಟ್ ಆಗಿರುವ ಬಗ್ಗೆ ಐಐಎಸ್‌ಸಿ ತಜ್ಞರ ವರದಿ ಎನ್‌ಹೆಚ್‌ಎಐ ಕೈ ಸೇರಿದೆ.ಬೆಂಗಳೂರಿನಿAದ ರಾಜ್ಯದ ಶೇ.80ರಷ್ಟು ಜಿಲ್ಲೆಗಳಿಗೆ ಸಂಪರ್ಕಿಸುವ ಪೀಣ್ಯ ಫ್ಲೈಓವರ್‌ಗೆ ಹಿಡಿದಿದ್ದ ಗ್ರಹಣ ದೂರಾಗುವ ಸಂದರ್ಭ ಬಂದಿದೆ. ಇದೇ ಫೆಬ್ರವರಿ ಮೊದಲ ವಾರದಿಂದಲೇ ಹೆವಿ ವೆಹಿಕಲ್ ಓಡಾಟಕ್ಕೆ ಸಂಚಾರ ಮುಕ್ತವಾಗುವ ಸಾಧ್ಯತೆ ಇದೆ. ಫ್ಲೈಓವರ್ ಲೋಡ್ […]

ಹಲವು ಕ್ಷೇತ್ರಗಳಲ್ಲಿ ಹೊಸಬರಿಗೆ ಟಿಕೆಟ್ ಫಿಕ್ಸ್

ಬೆಂಗಳೂರು:ಈ ಬಾರಿಯೂ 25 ಅಥವಾ ಅಧಿಕ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯನ್ನು ಹೊಂದಿರುವ ರಾಜ್ಯ ಬಿಜೆಪಿ ಎರಡು ಸಮೀಕ್ಷೆಗಳನ್ನು ನಡೆಸಿದೆ. ಎರಡೂ ಸರ್ವೇ ಆಧಾರದ ಮೇಲೆ ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. ಈ ಪೈಕಿ 10 ರಿಂದ 15 ಕ್ಷೇತ್ರಗಳಲ್ಲಿ ಹೊಸಬರಿಗೆ ಟಿಕೆಟ್ ನೀಡೋದು ಬಹುತೇಕ ಖಚಿತ ಎಂಬ ಸುದ್ದಿ ಹರಿದಾಡುತ್ತಿದೆ. ಇನ್ನುಳಿದ ಕ್ಷೇತ್ರದ ಬಗ್ಗೆ ಅಂತಿಮವಾಗಬೇಕಿದೆ. 13 ಕ್ಷೇತ್ರಗಳಿಗಾಗಿ ಕೊನೆಯ ಸಮೀಕ್ಷೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.ಲೋಕಸಭಾ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ […]

ಜೆಡಿಎಸ್-ಬಿಜೆಪಿ ರಾಜಕೀಯ ಲಾಭದ ಲೆಕ್ಕಚಾರಕ್ಕೆಕಾಂಗ್ರೆಸ್ ಪ್ರತ್ಯಾಸ್ತ್ರ!

ಮಂಡ್ಯ:ನಿನ್ನೆ ಕೆರಗೋಡು ಗ್ರಾಮದಿಂದ ಮಂಡ್ಯದ ಜಿಲ್ಲಾಧಿಕಾರಿ ಕಚೇರಿವರೆಗೂ ಪಾದಯಾತ್ರೆ ನಡೆಸಲಾಯ್ತು. ಮಂಡ್ಯದ ಮಹಾವೀರ ಸರ್ಕಲ್‌ನಲ್ಲಿ ಲಘು ಲಾಠಿ ಪ್ರಹಾರ ನಡೆಸಲಾಯ್ತು.ಇನ್ನು ಈ ಪ್ರತಿಭಟನೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮೈತ್ರಿ ಗೆಳೆಯರಾದ ಜೆಡಿಎಸ್-ಬಿಜೆಪಿ ಈ ವಿಷಯವನ್ನು ಲೋಕಸಮರದವರೆಗೂ ಜೀವಂತವಾಗಿರಿಸಲು ಪ್ಲಾನ್ ಮಾಡಿಕೊಂಡಿವೆ ಎಂದು ತಿಳಿದು ಬಂದಿದೆ.ಇದೀಗ ಬಿಜೆಪಿ ಮತ್ತು ಜೆಡಿಎಸ್ ಧ್ವಜ ವಿವಾದಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ಹೊಸ ಪ್ಲಾನ್ ಮಾಡಿಕೊಂಡಿದೆ. ಇದೇ ವಿಷಯವನ್ನು ಅಸ್ತ್ರವಾಗಿ […]

ಅಂಬೇಡ್ಕರ್ ನಾಮಫಲಕ ವಿಚಾರಎರಡು ಗುಂಪುಗಳ ನಡುವೆ ಘರ್ಷಣೆ

ಮೈಸೂರು:ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.ಮನೆಗಳಿಗೆ ಕಲ್ಲು ತೂರಾಟ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಜಖಂ ಆಗಿದೆ. ಕೆಲ ಕಿಡಿಗೇಡಿಗಳಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು, ಎಸ್‌ಪಿ ಸೀಮಾ ಲಾಟ್ಕರ್ ದೌಡಾಯಿಸಿದ್ದಾರೆ. ಘಟನೆ ಸಂಬAಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡೂ ಸಮುದಾಯದ ಬೀದಿಯಲ್ಲೂ ಕಲ್ಲು ತೂರಾಟ […]

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ

ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ ಮಾಡಿದ್ದು, ಓರ್ವ ಡಿವೈಎಸ್‌ಪಿ ವರ್ಗಾವಣೆ ರದ್ದು ಮಾಡಿ 33 ಡಿವೈಎಸ್ಪಿಗಳು, 132 ಇನ್ಸ್ ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದೆ. ಜೊತೆಗೆ ಹೊಸದಾಗಿ ಸೃಷ್ಟಿಯಾದ ಹುದ್ದೆಗಳಿಗೂ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಯು.ಡಿ.ಕೃಷ್ಣಕುಮಾರ್-ಡಿವೈಎಸ್‌ಪಿ, ಬಿಡಿಎ, ಬೆಂಗಳೂರು. ಟಿ.ಎಂ.ಶಿವಕುಮಾರ್-ಎಸಿಪಿ, ಮಡಿವಾಳ ಉಪವಿಭಾಗ. ಹೆಚ್.ಬಿ.ರಮೇಶ್ ಕುಮಾರ್-ಎಸಿಪಿ ವಿವಿ ಪುರಂ ಉಪವಿಭಾಗ. ಎಂ.ಎನ್.ನಾಗರಾಜ್-ಎಸಿಪಿ, ಸಿಸಿಬಿ ಬೆಂಗಳೂರು. ಅನುಷಾರಾಣಿ-ಎಸಿಪಿ, ಡಿಸಿಆರ್‌ಇ, ಮೈಸೂರು ಸೇರಿದಂತೆ ಒಟ್ಟು 33 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಸಂಪAಗಿರಾಮನಗರ ಪೊಲೀಸ್ ಠಾಣೆ […]

ಏಕಾಏಕಿ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಿದ ವ್ಯಕ್ತಿ ವಿರುದ್ಧ ಎಫ್‌ಐಆರ್

ಬೆಂಗಳೂರು:ನಗರದ ಮಾನಿಕ್ ಷಾ ಪರೇಡ್ ಮೈದಾನದಲ್ಲಿ ನಿನ್ನೆ ಗಣರಾಜ್ಯೋತ್ಸವ ಆಚರಣೆ ವೇಳೆ ಭದ್ರತೆ ಭೇದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರತ್ತ ನುಗ್ಗಲು ಯತ್ನಿಸಿದ ವ್ಯಕ್ತಿ ವಿರುದ್ಧ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸಾರ್ವಜನಿಕರಲ್ಲಿ ಆತಂಕ ಉಂಟುಮಾಡುವುದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.ಮೈಸೂರು ಮೂಲದ ಪರಶುರಾಮ್ 1883ರಲ್ಲಿ ಕೆಪಿಎಸ್‌ಸಿ ಪರೀಕ್ಷೆ ಬರೆದಿದ್ದರು. ಆದರೆ, ಪರೀಕ್ಷೆ ಫಲಿತಾಂಶವನ್ನು ಸರ್ಕಾರ ತಡೆಹಿಸಿದಿದೆ. ಇದರಿಂದ ಬೇಸತ್ತು ಮನವಿ ಕೊಡಲು ಪ್ರೆಸ್ ಪಾಸ್ ಹಿಡಿದು ಸಿದ್ದರಾಮಯ್ಯರತ್ತ ನುಗ್ಗಲು ಯತ್ನಿಸಿದ್ದರು. ಮೊದಲು […]

ಹೃದಯದಲ್ಲಿ ಟಿಪ್ಪು ಇಟ್ಟುಕೊಂಡು ಜೈ ಶ್ರೀರಾಮ್ ಅಂತಾರೆ

ಬೆAಗಳೂರು:ಕಾಂಗ್ರೆಸ್‌ನವರು ಹೃದಯದಲ್ಲಿ ಟಿಪ್ಪು ಇಟ್ಟುಕೊಂಡು ಜೈ ಶ್ರೀರಾಮ್ ಎನ್ನುತ್ತಾರೆ. ಇದೆಲ್ಲಾ ಈಗ ವರ್ಕೌಟ್ ಆಗಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಯಾವುದೇ ಕಾಮಗಾರಿ ನಡೆಯುತ್ತಿಲ್ಲ. ಹಿಂದಿನ ಎಲ್ಲಾ ಯೋಜನೆ ಸ್ಥಗಿತವಾಗಿದೆ. ಲ್ಯಾಪ್ ಟಾಪ್ ಕೂಡ ವಿದ್ಯಾರ್ಥಿಗಳಿಗೆ ನೀಡುತ್ತಿಲ್ಲ. ಕೇವಲ ಟಾಪ್‌ಗೆ ಹಣ ಸರಬರಾಜು ಅಷ್ಟೇ. ಇದರ ವಿರುದ್ಧ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಮನಮೋಹನ್ ಸಿಂಗ್ ಕಾಲದಲ್ಲಿ ಕೊಟ್ಟ ಹಣಕ್ಕಿಂತ […]

ಶಾಮನೂರು ಹೇಳಿಕೆಗೆ ಡಿಕೆ ಶಿವಕುಮಾರ್ ಸಿಡಿಮಿಡಿ

ಬೆಂಗಳೂರು:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಗೆಲ್ಲಬೇಕು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿರುವುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಿಡಿಮಿಡಿಗೊಂಡಿದ್ದಾರೆ. ಶಾಮನೂರು ಹೇಳಿಕೆಗೆ ತಿರುಗೇಟು ನೀಡಿದ ಅವರು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದ್ದಾರೆ. ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಬಸವಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ ನಂತರ ಶುಕ್ರವಾರ ಮಾತನಾಡಿದ್ದ ಶಾಮನೂರು ಶಿವಶಂಕರಪ್ಪ, ಜಿಲ್ಲೆಯ ಜನರು ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಿದೆ ಎಂದು ಸಂಸದ ರಾಘವೇಂದ್ರ […]

ಕಿರುತೆರೆಗೆ ಎಂಟ್ರಿ ಕೊಟ್ಟ ‘ಕಾಂತಾರ’ ಬೆಡಗಿ ಸಪ್ತಮಿ

‘ಕಾಂತಾರ’ ಬ್ಯೂಟಿ ಸಪ್ತಮಿ ಗೌಡ ಅವರು ಟಿವಿ ಪ್ರೇಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಪ್ತಮಿ ಇದೀಗ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಹಾಗಾದ್ರೆ ಸಿನಿಮಾ ಬಿಟ್ಟು ಸೀರಿಯಲ್‌ಗೆ ಎಂಟ್ರಿ ಕೊಟ್ರಾ? ಅಂತ ನೀವು ಅಂದುಕೊAಡಿರಬಹುದು. ಆದರೆ ಅಸಲಿ ವಿಚಾರ ಬೇರೆ ಇದೆ.ರಿಷಬ್ ಶೆಟ್ಟಿ ಅವರಿಗೆ ನಾಯಕಿಯಾಗಿ ‘ಕಾಂತಾರ’ ಮೂಲಕ ಸಕ್ಸಸ್ ಕಂಡ ನಟಿ ಸಪ್ತಮಿ ಇದೀಗ ಬಹುಭಾಷೆಗಳಲ್ಲಿ ಮಿಂಚುತ್ತಿದ್ದಾರೆ. ಇದರ ನಡುವೆ ಕಿರುತೆರೆಗೆ ಸಪ್ತಮಿ ಹಾಜರಿ ಹಾಕಿದ್ದಾರೆ. ‘ಶ್ರೀರಸ್ತು ಶುಭಮಸ್ತು’ ಸೀರಿಯಲ್ ಇದೀಗ ಮಹಾ ಸಂಚಿಕೆ ನಡೆಯುತ್ತಿದೆ. ಇದರಲ್ಲಿ […]

‘ಪುಷ್ಪ ೨’ ರಿಲೀಸ್ ನಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತಿದೆ ಟೀಮ್

ಅಲ್ಲು ಅರ್ಜುನ್ ನಟನೆಯ ಪುಷ್ಪ-೨ ಬಿಡುಗಡೆ ದಿನಾಂಕ ಈ ಹಿಂದೆಯೇ ಫಿಕ್ಸ್ ಆಗಿತ್ತು. ಸ್ವಾತಂತ್ರ‍್ಯ ದಿನದಂದು ಅಂದರೆ ಆಗಸ್ಟ್ ೧೫ರಂದು ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ ಎಂದು ಸ್ಪೆಷಲ್ ಪೋಸ್ಟರ್ ಮೂಲಕ ಚಿತ್ರತಂಡ ರಿಲೀಸ್ ಡೇಟ್ ಘೋಷಿಸಿತ್ತು. ಫ್ಯಾನ್ಸ್ ಪುಷ್ಪ ಸೀಕ್ವೆಲ್ ನೋಡೋದಿಕ್ಕೆ ಎಕ್ಸೈಟ್ ಆಗಿದ್ದರು. ಇದೀಗ ರಿಲೀಸ್ ಡೇಟ್ ಮುಂದೆ ಹೋಗಿದೆ ಎಂದು ಸುದ್ದಿಯನ್ನು ಹರಿಬಿಡಲಾಗಿದೆ. ಅಂದು ಜ್ಯೂನಿಯರ್ ಎನ್.ಟಿ.ಆರ್ ನಟನೆಯ ದೇವರ ಸಿನಿಮಾ ಬರಲಿರುವ ಕಾರಣ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಗಿದೆ ಅಂತ ಸುದ್ದಿ […]