September 15, 2026

ರಾಮನ ಹೆಸರು ಇಟ್ಟುಕೊಂಡಿರೋ ಸಿದ್ದರಾಮಯ್ಯಗೆ ಒಳ್ಳೆಯದಾಗಲಿ

ರಾಯಚೂರು:ರಾಮನ ಹೋಲಿಕೆಯನ್ನು ಇನ್ನೊಬ್ಬರಿಗೆ ಹೋಲಿಸುವಂತದ್ದಲ್ಲಾ, ರಾಮನ ಹೆಸರನ್ನ ಸಿದ್ದರಾಮಯ್ಯ ಇಟ್ಟುಕೊಂಡಿದ್ದಾರೆ. ಆದ್ದರಿಂದ ರಾಮನ ಆದರ್ಶ ಹಾಗೂ ರಾಮನ ಜನಾನುರಾಗ ಸಿದ್ದರಾಮಯ್ಯನು ಸಹ ಪಡೆಯಲಿ. ಅವರಿಗೂ ನಾವು ಅಭಿನಂದಿಸೋಣ ಅಂತ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥಸ್ವಾಮಿ ಹೇಳಿದ್ದಾರೆ.ರಾಯಚೂರಿನಲ್ಲಿ ಮಾತನಾಡಿದ ಮಂತ್ರಾಲಯ ಶ್ರೀಗಳು, ಸಿಎಂ ಸಿದ್ದರಾಮಯ್ಯರನ್ನ ರಾಮನಿಗೆ ಹೋಲಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಯಾರು ಯಾವ ಹೇಳಿಕೆ ಕೊಟ್ಟಿದ್ದಾರೆ ನಾನು ಗಮನಿಸಿಲ್ಲ. ರಾಮ ಎಲ್ಲ ರೀತಿಯಿಂದಲೂ ಅನುಕರಣೀಯ ಹಾಗೂ ಆದರ್ಶ ವ್ಯಕ್ತಿ. ನೀನು ಹೇಗಿರಬೇಕು ಅಂತ ಹೇಳುವಾಗ ರಾಮನಂತೆ ನೀನು […]

ಮದ್ಯ ಪ್ರಿಯರಿಗೆ ಶಾಕ್; ಬಡವರ ಫೇವರಿಟ್ ಬ್ರ‍್ಯಾಂಡ್‌ಗಳ ದರ ಹೆಚ್ಚಳ

ಬೆಂಗಳೂರು:ಹೊಸ ವರ್ಷದಂದು ಬರೋಬ್ಬರಿ ೧೯೩ ಕೋಟಿ ಆದಾಯ ಗಳಿಸಿ ಮಂದಹಾಸ ಬೀರಿದ್ದ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದೆ. ಇಂದಿನಿAದ ಬಡವರು ಕುಡಿಯುವ ಮದ್ಯದ ದರದಲ್ಲಿ ಏರಿಕೆಯಾಗಿದೆ. ಅಬಕಾರಿ ಇಲಾಖೆ ಬಡವರ ನೆಚ್ಚಿನ ಕೆಲ ಬ್ರ‍್ಯಾಂಡ್‌ಗಳ ದರ ಹೆಚ್ಚಿಸಿದೆ. ಈ ಮೂಲಕ ಮಧ್ಯಮ ವರ್ಗದ ಮದ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ಕೊಟ್ಟಿದೆ. ಹೊಸ ವರ್ಷಕ್ಕೆ ಕಂಠ ಪೂರ್ತಿ ಕುಡಿದು ಕುಪ್ಪಳಿಸಿದ್ದ ಬಡವರು ಈಗ ಎಣ್ಣೆ ಖರೀದಿಸಲು ಯೋಚಿಸುವಂತಾಗಿದೆ.ಈಗಾಗಲೇ ೧೭% ರಷ್ಟು ಓವರ್ ಆಲ್ ಮಧ್ಯದ […]

ಕೋಳಿ ತೂಕದಲ್ಲಿ ಮೋಸ:ವಂಚನೆಗೈದವರನ್ನು ಮರಕ್ಕೆ ಕಟ್ಟಿ ಹಾಕಿದ ರೈತ

ಮಂಡ್ಯ:ಮಾಂಸದ ಕೋಳಿ ತುಂಬುವಾಗ ತೂಕದಲ್ಲಿ ವಂಚನೆಗೈದವರನ್ನು ರೈತರೊಬ್ಬರು ಮರಕ್ಕೆ ಕಟ್ಟಿ ಹಾಕಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಬ್ಯಾಡರಹಳ್ಳಿ ಗ್ರಾಮದಲ್ಲಿ ಜರುಗಿದೆ.ಚಿಕ್ಕಬ್ಯಾಡರಹಳ್ಳಿ ಗ್ರಾಮದ ರೈತ ಹನುಮಂತೇಗೌಡ ಅವರು ಕೋಳಿಫಾರಂ ನಡೆಸುತ್ತಿದ್ದು, ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ದರು. ಕೋಳಿ ಖರೀದಿಸಲು ಬರುತ್ತಿದ್ದ ಮೈಸೂರು ಮೂಲದ ಎನ್‌ಆರ್ ಚಿಕನ್ ಕಂಪನಿಯ ಸಿಬ್ಬಂದಿ ಕಳೆದ ಮೂರ್ನಾಲ್ಕು ತಿಂಗಳಿನಿAದ ಈ ರೈತನಿಗೆ ಕೋಳಿ ತುಂಬುವಾಗ ತೂಕದಲ್ಲಿ ಮೋಸ ಮಾಡುತ್ತಿದ್ದರು.ಅನುಮಾನಗೊಂಡ ರೈತ ಬೇರೆ ತೂಕದ ಯಂತ್ರ ತರಿಸಿ ತೂಕ ಹಾಕಿಸಿದಾಗ ವಂಚನೆ ಬೆಳಕಿಗೆ ಬೆಳಕಿಗೆ […]

ಅಪಘಾತ – ನಾಲ್ವರ ದುರ್ಮರಣ

ಮೈಸೂರು:ಕೆಎಸ್‌ಆರ್‌ಟಿಸಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ನಡೆದ ಪರಿಣಾಮ ಚಾಲಕ ಸೇರಿ ಒಟ್ಟು ನಾಲ್ವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದಲ್ಲಿ ನಡೆದಿದೆ.ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ ಘಟನೆ ಸಂಭವಿಸಿದ್ದು, ಚಾಲಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೀಪ್ ಹೆಚ್‌ಡಿ ಕೋಟೆಯಿಂದ ಬರುತ್ತಿದ್ದ ಸಂದರ್ಭ ಅಪಘಾತ ನಡೆದಿದೆ. ಘಟನೆಯಲ್ಲಿ ಸಾವನ್ನಪ್ಪಿದವರು ಕೂಲಿ ಕಾರ್ಮಿಕರು ಎಂಬ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅದೇ ರೀತಿ ಮೈಸೂರಿನಲ್ಲಿ ಮತ್ತೊಂದು […]

ಕಾಂಗ್ರೆಸ್ ನಿಂದ ರಿವೇಂಜ್ ಪಾಲಿಟಿಕ್ಸ್

ವಿಜಯಪುರ:ಹುಬ್ಬಳ್ಳಿಯಲ್ಲಿ ಪೊಲೀಸರು 72 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸರು ದ್ವೇಷ ಭಾವನೆಯಿಂದ ವರ್ತಿಸಿದ್ದಾರೆ. ರಾಮಮಂದಿರದ ರಿವೇಂಜ್ ತೀರಿಸಿಕೊಳ್ಳಲಾಗುತ್ತಿದೆ. ಹೊಟ್ಟೆ ಕಿಚ್ಚಿನಿಂದ ಈ ರೀತಿ ಕಾಂಗ್ರೆಸ್ ವರ್ತಿಸುತ್ತಿದೆ. ಹುಬ್ಬಳ್ಳಿ ವಿಚಾರವಾಗಿ ಕಾನೂನು, ರಾಜಕೀಯ, ಸಾಮಾಜಿಕ ಹೋರಾಟ ಮಾಡುತ್ತೇವೆ. ಡಿಜೆ ಹಳ್ಳಿ ಕೆಜಿ ಹಳ್ಳಿ ಹಾಗೂ ಹುಬ್ಬಳ್ಳಿ ಪೊಲೀಸ್ ಠಾಣೆ ದ್ವಂಸ ಕೇಸ್‌ನಲ್ಲಿದ್ದವರನ್ನು ಬಿಡಲು ಪತ್ರ ಬರೆಯುತ್ತೀರಿ. ಸಿದ್ದರಾಮಯ್ಯ ಏನು ಮಾಡುತ್ತಿದ್ದಿರಾ? ಐಸಿಸ್ ಸರ್ಕಾರ ಮಾಡಲು ಹೊರಟಿದ್ದೀರಾ? ನೀವು ಮೊಘಲ್ ಸರ್ಕಾರ, ಇಸ್ಲಾಮಿಕ್ ಸರ್ಕಾರ, ಐಸಿಸ್ ಸರ್ಕಾರ ನಡೆಸುತ್ತಿದ್ದೀರಾ ಎಂದು […]

ಕಲ್ಯಾಣಮಂಟಪದಲ್ಲೇ ಹೈಡ್ರಾಮಾಹಸೆಮಣೆ ಏರಬೇಕಿದ್ದ ಸರ್ಕಾರಿ ನೌಕರ ಜೈಲುಪಾಲು

ಬೆಳಗಾವಿ:ಮದುವೆ ದಿನ ಕಲ್ಯಾಣಮಂಟಪದಲ್ಲೇ ಸರ್ಕಾರಿ ನೌಕರನೊಬ್ಬ ವರದಕ್ಷಿಣೆಗೆ ಬೇಡಿಕೆಯಿಟ್ಟು ಹೈಡ್ರಾಮಾ ನಡೆಸಿ ಪೊಲೀಸರ ಅತಿಥಿಯಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಬೆಳಗಾವಿ ಡಿಸಿ ಕಚೇರಿಯಲ್ಲಿ ಎಸ್‌ಡಿಸಿ ಆಗಿರುವ ಸಚಿನ್ ಪಾಟೀಲ್ ಹೈಡ್ರಾಮಾ ನಡೆಸಿದ ವರ. ಈತ ಕಲ್ಯಾಣಮಂಟಪದಲ್ಲಿ ನಡೆಯುತ್ತಿದ್ದ ಅರಿಶಿಣ ಕಾರ್ಯಕ್ರಮದಲ್ಲಿ 200 ಗ್ರಾಂ ಚಿನ್ನಾಭರಣ, 10 ಲಕ್ಷ ನಗದು ನೀಡುವಂತೆ ವಧುವಿನ ಮನೆಯವರಿಗೆ ಡಿಮ್ಯಾಂಡ್ ಇಟ್ಟಿದ್ದಾನೆ. ವರನ ಡಿಮ್ಯಾಂಡ್‌ಗೆ ವಧುವಿನ ಸಂಬAಧಿಕರು, ಮದುವೆಯಲ್ಲಿ ಪಾಲ್ಗೊಂಡ ಜನರು ತಬ್ಬಿಬ್ಬಾಗಿದ್ದಾರೆ. ಅಲ್ಲದೇ ನಾವು ಬಡವರು ಇಷ್ಟೊಂದು ಹಣ, ಚಿನ್ನಾಭರಣ ಎಲ್ಲಿಂದ ಕೊಡೋದು […]

ರಾಮ ಮಂದಿರ ಕಟ್ಟಿದ್ದಕ್ಕೆ ಸೇಡು, ಮುಸ್ಲಿಮರ ಓಲೈಕೆಗಾಗಿ ಕರಸೇವಕರ ಬಂಧನ

ಬೆಂಗಳೂರು:ಮುಸ್ಲಿಮರ ಓಲೈಕೆಗಾಗಿ ೩೧ ವರ್ಷದ ಹಿಂದಿನ ಹುಬ್ಬಳ್ಳಿ ಪ್ರಕರಣವನ್ನು ತೆರೆಯಲಾಗಿದೆ ಎಂದು ಚಿಂತಕ ಚರ್ಕವರ್ತಿ ಸೂಲಿಬೆಲೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಮಾಧ್ಯಮದ ಜೊತೆ ಮಾತಾನಾಡಿದ ಅವರು, ಘಟನೆ ನಡೆದ ಬಳಿಕ ಹಲವು ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಆಗ ಸುಮ್ಮನ್ನಿದ್ದವರು ಈಗ ಏಕಾಏಕಿ ಬಂಧನ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆ ನಡೆದಾಗ ಅಮಾಯಕರನ್ನು ಬಿಡುಗಡೆ ಮಾಡಿ ಎಂದು ಪತ್ರ ಬರೆಯುತ್ತಾರೆ. ಈ ಗಲಭೆ ನಿಮ್ಮ ಅವಧಿಯಲ್ಲಿ ಇದ್ದಾಗಲೇ ನಡೆದಿತ್ತು. […]

ರಾಜ್ಯದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭ

ಬೆಂಗಳೂರು: ಕೋವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ 2ನೇ ಲಸಿಕೆ ಪಡೆದವರಿಗೆ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ 30,000 ಡೋಸ್ ಕಾರ್ಬೆವ್ಯಾಕ್ಸ್ ಲಸಿಕೆಯನ್ನು ಸರಬರಾಜು ಮಾಡಿದೆ. ಈ ಲಸಿಕೆಯನ್ನು ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆಯಾಗಿ ನೀಡಬಹುದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು ಆರು ತಿಂಗಳು ಅಥವಾ 26 ತಿಂಗಳು ಪೂರೈಸಿದ ಬಳಿಕವೂ ಮುನ್ನೆಚ್ಚರಿಕೆ ಡೋಸ್ ಪಡೆಯದವರಿಗೆ ಈ ಲಸಿಕೆ ನೀಡಬಹುದು.  60 ವರ್ಷ ದಾಟಿದವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು […]

ನ್ಯಾಷನಲ್ ಸಂಸ್ಥೆಯ ಮೇಲೆ ಇಡಿ ದಾಳಿ

ಶಿವಮೊಗ್ಗ:ತೀರ್ಥಹಳ್ಳಿಯ ನ್ಯಾಷನಲ್ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.ಸುಲೈಮಾನ್ ಎಂಬುವರಿಗೆ ಸೇರಿದ ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ಸುಲೈಮಾನ್ ನಿವಾಸದ ಮನೆ ಮೇಲೆ ದಾಳಿಯಾಗಿದೆ.ಬೆಳ್ಳಂಬೆಳಗ್ಗೆ ೧೦ ವಾಹನಗಳಲ್ಲಿ ಇಡಿ ಅಧಿಕಾರಿಗಳು ಆಗಮಿಸಿದ್ದಾರೆ. ಇನ್ನೂ ಅಂಗಡಿ ಹಾಗೂ ಕಚೇರಿಯ ಬಾಗಿಲು ತೆರೆಯದ ಕಾರಣ ಇಡಿ ಅಧಿಕಾರಿಗಳು ಹೊರಗಡೆ ಕಾಯುತ್ತಿದ್ದಾರೆ.ಸುಲೈಮಾನ್ ಪುತ್ರ ಷರೀಫ್ ಅವರು ಕನ್‌ಸ್ಟ್ರಕ್ಷನ್ ವ್ಯವಹಾರ ಮಾಡುತ್ತಿದ್ದು, ಶಿವಮೊಗ್ಗದ ವಿಮಾನ ನಿಲ್ದಾಣ ಕಾಮಗಾರಿ ಮಾಡಿದ್ದರು.

ಮಥುರಾದಲ್ಲೂ ಶ್ರೀಕೃಷ್ಣ ದೇವಾಲಯ ಕಟ್ಟುತ್ತೇವೆ

ಶಿವಮೊಗ್ಗ:ಗುಲಾಮಗಿರಿ ಮಸೀದಿ ಒಡೆದು ರಾಮಮಂದಿರ ಕಟ್ಟಿದ್ದೇವೆ. ಮಥುರಾದಲ್ಲೂ ಶ್ರೀಕೃಷ್ಣನ ದೇವಸ್ಥಾನ ಕಟ್ಟೇ ಕಟ್ಟುತ್ತೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ಮಾತನಾಡಿದ ಅವರು, ೪೯೬ ವರ್ಷದ ಕೆಳಗೆ ಅಯೋಧ್ಯೆಯಲ್ಲಿ ರಾಮಮಂದಿರ ಧ್ವಂಸ ಮಾಡಿದ್ದರು. ಬಾಬರ್ ಮಸೀದಿ ಕಟ್ಟಿದ್ದರು. ಗುಲಾಮಗಿರಿ ಮಸೀದಿ ಹೊಡೆದು ರಾಮಮಂದಿರ ಕಟ್ಟಿದ್ದೇವೆ. ನಮ್ಮೆಲ್ಲರ ಸೌಭಾಗ್ಯ, ನಾವು ಬದುಕಿರುವ ದಿನದಲ್ಲೇ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆ ಆಗ್ತಿದೆ ಎಂದು ಹೇಳಿದ್ದಾರೆ.ಗುಲಾಮಗಿರಿ ಸಂಕೇತ ಹೋಗಿ ಸ್ವಾಭಿಮಾನ ಸಂಕೇತ ನಿರ್ಮಾಣ ಆಗಿದೆ. ಮನೆ ಮನೆಗೆ ಮಂತ್ರಾಕ್ಷತೆ […]