September 15, 2026

ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರ ದುರ್ಮರಣ!

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಸ್ವಿಫ್ಟ್ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಹೊನಗನಳ್ಳಿ ಮೂಲದ ನಾಲ್ವರು ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಹೋಗಿ ಬರುತ್ತಿದ್ದ ವೇಳೆ ಅನಗವಾಡಿ ಗ್ರಾಮದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕಾರು ಚಾಲಕನನ್ನು ಮಲ್ಲು ಪೂಜಾರಿ ಎಂದು ಗುರುತಿಸಲಾಗಿದೆ. […]

ನನ್ನ ನಿಲುವು ಸ್ಪಷ್ಟ, ನಾನು ಬಿಜೆಪಿಗೆ ಹೋಗಲ್ಲ

ಬೆಂಗಳೂರು:ನನ್ನ ನಿಲುವು ಸ್ಪಷ್ಟ. ನಾನು ಬಿಜೆಪಿಗೆ ಹೋಗಲ್ಲ ಎಂದು ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.ಜಗದೀಶ್ ಶೆಟ್ಟರ್ ಬೆನ್ನಲ್ಲೇ ಸವದಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು, ಅವರು ಒಟ್ಟಿಗೆ ನಿರ್ಧಾರ ಮಾಡಿರಲಿಲ್ಲ. ನಾನು ಮೊದಲು ಕಾಂಗ್ರೆಸ್‌ಗೆ ಬಂದೆ. ಟಿಕೆಟ್ ಸಿಗದ ಕಾರಣ ಅವರು ನಂತರ ಬಂದರು. ಯಾಕೆ ಹೋಗಿದ್ದಾರೆ ಅಂತ ಗೊತ್ತಿಲ್ಲ, ಅವರನ್ನೇ ಕೇಳಬೇಕು. ನನ್ನನ್ನ ಬಿಜೆಪಿ ಸಂಪರ್ಕ ಮಾಡಿಲ್ಲ, ಆ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಲೋಕಸಭೆ ಅಗತ್ಯ, ಅನಿವಾರ್ಯ ಇದೆ. ಹಾಗಾಗಿ ಎಲ್ಲರನ್ನ […]

ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ: ಹೆಚ್‌ಡಿ ರೇವಣ್ಣ ಭವಿಷ್ಯ

ಹಾಸನ:ನಮ್ಮ ಕಾಲದಲ್ಲಿ ಎಂದೂ ಕರೆಂಟ್ ಬಿಲ್ ಹೆಚ್ಚಿಸಿರಲಿಲ್ಲ. ಈ ಸರ್ಕಾರ ಬಂದ ಮೇಲೆ ಬಿಲ್ ಹೆಚ್ಚಿಸಿದರು. ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ. ಆ ಮೂಲಕ ಕೆಇಬಿ ಖಾಸಗಿ ಕರಣ ಆಗುತ್ತೆ ಎಂದು ಮಾಜಿ ಸಚಿವ ಹೆಚ್‌ಡಿ ರೇವಣ್ಣ ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯ ಆಲೂರು ಪಟ್ಟಣದಲ್ಲಿ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೆಇಬಿ ಸಾಲದಲ್ಲಿದೆ. ನಾನಿದ್ದಾಗ ಮೀಸಲು ಹಣ ಇಟ್ಟಿದ್ದೆ. ಕಾಂಗ್ರೆಸ್ ಸರ್ಕಾರ ವಿದ್ಯುತ್ […]

ಆಯಾ ರಾಮಾ.. ಗಯಾ ರಾಮಾ ಅಂತಾಶೆಟ್ಟರ್ ಪಕ್ಷ ಬಿಟ್ಟು ಹೋದ್ರು

ಕಲಬುರಗಿ:ಆಯಾ ರಾಮಾ.. ಗಯಾ ರಾಮಾ ಅಂತಾ ಪಕ್ಷ ಬಿಟ್ಟು ಹೋದ್ರು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಬಿಜೆಪಿ ಸೇರ್ಪಡೆ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.ಈ ಸಂಬAಧ ಕಲಬುರಗಿಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಯಾವ ಸನ್ನಿವೇಶದಲ್ಲಿ ಸೇರಿದ್ರು ಗೊತ್ತಿಲ್ಲ. ಅವರಿಗೆ ಬಿಜೆಪಿಯವರು ಕೈಕೊಟ್ಟರು, ಆಗ ನಾವು ಟಿಕೆಟ್ ಕೊಟ್ಟು ನಂತರ ಶಾಸಕ ಸಹ ಮಾಡಿದ್ವಿ. ೬ ತಿಂಗಳ ಹಿಂದೆ ಶೆಟ್ಟರ್ ಅವರಿಗೆ ಏನಾಗಿತ್ತು?. ಯಾಕೆ ಪಕ್ಷ ಬಿಟ್ರಿ ಅಂತಾ ಶೆಟ್ಟರ್ ಅವರು ಉತ್ತರ […]

ಶೆಟ್ಟರ್ ಬಿಜೆಪಿ ಸೇರ್ಪಡೆಗೆ ಡಿಕೆಶಿ ಕಿಡಿ

ನವದೆಹಲಿ:ರಾಜ್ಯ ರಾಜಕೀಯದ ಹಿರಿಯ ನಾಯಕ, ಮಾಜಿ ಸಿಎಂ, ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಪುನಃ ಬಿಜೆಪಿಗೆ ಮರಳಿದ್ದಾರೆ. ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬಳಿಕ ಬಿಜೆಪಿಗೆ ವಾಪಸ್ ಆಗುವ ನಿರ್ಧಾರ ಪ್ರಕಟಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆಯುವ ನಿರ್ಧಾರವನ್ನು ಪ್ರಕಟಿಸಿದರು.ಜಗದೀಶ್ ಶೆಟ್ಟರ್ ಏಳೇ ತಿಂಗಳಲ್ಲಿ ಕಾಂಗ್ರೆಸ್‌ಗೆ ಕೈಕೊಟ್ಟು ಪುನಃ ಬಿಜೆಪಿಗೆ ಮರಳಿದ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್, […]

ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್‌ಗೆ ಯಾವುದೇ ಅನ್ಯಾಯ ಆಗಿಲ್ಲ

ಕೊಡಗು:ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ರಾಜಕೀಯ ವಲಯದಲ್ಲಿ ಭಾರೀ ಬೆಳವಣಿಗೆಯೊಂದು ನಡೆದಿದೆ. ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಎಂಎಲ್‌ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಈ ವಿಚಾರ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಶೆಟ್ಟರ್ ಕಾಂಗ್ರೆಸ್ ತೊರೆದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಸಂಜೆ ನಾಲ್ಕು ಗಂಟೆಗೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇನ್ನು ಮತ್ತೊಂದೆಡೆ ಘಟನೆ ಸಂಬAಧ ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್‌ಗೆ ಯಾವುದೇ ಅನ್ಯಾಯ ಆಗಿಲ್ಲ ಎಂದಿದ್ದಾರೆ.ಕೊಡಗಿನಲ್ಲಿ ಮಾತನಾಡಿದ […]

ಇಲ್ಲಿಯವರೆಗೆ ಸಹಕಾರ ಕೊಟ್ಟಿದ್ದಕ್ಕೆ ಡಿಕೆಶಿ, ಸಿಎಂಗೆ ಶೆಟ್ಟರ್ ಧನ್ಯವಾದ

ನವದೆಹಲಿ:ಮಾಜಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.ಕಾಂಗ್ರೆಸ್ ಪಕ್ಷದಿಂದ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಸಂದರ್ಭದಲ್ಲಿ ಅವರು ಕೂಡ ಒಳ್ಳೆಯ ರೀತಿಯಲ್ಲಿ ಗೌರವ ಸ್ಥಾನ-ಮಾನವನ್ನು ಕೊಟ್ಟಿದ್ದಾರೆ ಎಂದರು.ಇಲ್ಲಿಯವರೆಗೆ ಸಹಕಾರ ಕೊಟ್ಟಿದಕ್ಕಾಗಿ ಡಿ.ಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಈ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಧನ್ಯವಾದಗಳನ್ನು ತಿಳಿಸಿದ್ದಾರೆ.ಬಿಜೆಪಿಯಿಂದ ಅಸಮಾಧಾನಗೊಂಡಿದ್ದ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ಗೆ ಸೇರಿದ್ದರು. ಲೋಕಸಭಾ ಚುನಾವಣೆ […]

ಅಮಿತ್ ಶಾ ಮಾತುಕತೆ ಯಶಸ್ವಿಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಖಚಿತ

ನವದೆಹಲಿ:ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆಯಲು ಆರಂಭವಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ದೆಹಲಿಯಲ್ಲಿ ಇಂದು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ.ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿ Ä ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. […]

ಅಸ್ಸಾಂನ ಆಂತರಿಕ ಸಂಘರ್ಷ ಗೊತ್ತಿದ್ದರೂರಾಹುಲ್ ಗಾಂಧಿ ಅಲ್ಲಿಗೆ ಹೋಗಿದ್ದೇಕೆ

ಹಾಸನ:ಅಸ್ಸಾಂನಲ್ಲಿ ಕೆಲವು ಆಂತರಿಕ ವಿಚಾರಗಳ ಬಗ್ಗೆ ಚರ್ಚೆ ಇದೆ, ಸಂಘರ್ಷದ ಪರಿಸ್ಥಿತಿ ಇದೆ. ಇದು ಗೊತ್ತಿದ್ದರೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಲ್ಲಿಗೆ ಹೋಗಿದ್ದೇಕೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್‌ಡಿ ದೇವೇಗೌಡರು ಪ್ರಶ್ನಿಸಿದರು.ಹಾಸನದಲ್ಲಿ ತಾಲೂಕುವಾರು ಸಭೆ ನಡೆಸಿ ಪಕ್ಷದ ಎಲ್ಲಾ ಹಂತದ ಚುನಾಯಿತ ಹಾಲಿ ಹಾಗೂ ಮಾಜಿ ಸದಸ್ಯರ ಭೇಟಿಯಾಗುತ್ತಿರುವ ಸಂದರ್ಭ ದೇವೇಗೌಡರು ಮಾತನಾಡಿದರು. ರಾಹುಲ್ ಗಾಂಧಿಯ ನ್ಯಾಯ ಯಾತ್ರೆಗೆ ಅಸ್ಸಾಂನಲ್ಲಿ ಪೊಲೀಸರು ಅಡ್ಡಿಪಡಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಲ್ಲಿನ ವಿಚಾರ ಗೊತ್ತಿದ್ದೂ ಗೊತ್ತಿದ್ದೂ ಅವರು […]

ಶ್ರೀರಾಮ ಭಕ್ತಿಗೋಸ್ಕರ ಇರಬೇಕೇ ಹೊರತು ವೋಟಿಗೋಸ್ಕರ ಅಲ್ಲ

ಬೆಂಗಳೂರು:ಶ್ರೀರಾಮ ಭಕ್ತಿಗೋಸ್ಕರ ಇರಬೇಕೇ ಹೊರತು ವೋಟಿಗೋಸ್ಕರ ಇರಬಾರದು. ಸ್ವಾರ್ಥಕ್ಕೋಸ್ಕರ ಶ್ರೀರಾಮನ ಬಳಸಬಾರದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮದ ವಿಚಾರದಲ್ಲಿ ಅನಾವಶ್ಯಕ ರಾಜಕಾರಣ ಮಾಡುವುದು ಒಳ್ಳೆಯದಲ್ಲ. ಧಾರ್ಮಿಕ ಕಾರ್ಯಕ್ರಮಗಳಿಗೆ ನಮ್ಮ ಸರ್ಕಾರ ಬಹಳ ಕೆಲಸ ಮಾಡಿದೆ. ಒಂದು ದೇವಸ್ಥಾನ ಮಾತ್ರ ಮುಖ್ಯ ಅಲ್ಲ, ಎಲ್ಲಾ ದೇವಸ್ಥಾನವೂ ಕೂಡ ಮುಖ್ಯ. ಧರ್ಮ ಎಲ್ಲರನ್ನೂ ಉಳಿಸುತ್ತಿದೆ. ಯಾರೋ ಒಬ್ಬರಿಂದ ಧರ್ಮ ಅಲ್ಲ. ಧರ್ಮ ಎಲ್ಲರನ್ನೂ ಒಳಗೊಳ್ಳಬೇಕು ಎಂದರು.ಸ್ವಾರ್ಥಕ್ಕೋಸ್ಕರ ಶ್ರೀರಾಮನ ಬಳಸಬಾರದು. ಭಕ್ತಿ, ನಂಬಿಕೆ, […]