September 14, 2026

ಮಶಾಕ್ ದರ್ಗಾದಲ್ಲಿ ಶಿವರಾತ್ರಿಯಂದು ಗುದ್ದಲಿ ಪೂಜೆ ಮಾಡ್ತೀವಿ: ಮುತಾಲಿಕ್

ಕಲಬುರಗಿ: ಜಿಲ್ಲೆಯ ಆಳಂದ  ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ರಾಘವ ಚೈತನ್ಯರು ಪ್ರತಿಷಠಾಪನೆ ಮಾಡಿದ ಈಶ್ವರ ಲಿಂಗವಿದೆ. ಈ ಹಿಂದೆ ಕೋರ್ಟ್ ಇಲ್ಲಿ ಪೂಜೆಗೆ ಅನುಮತಿ ನೀಡಿದೆ. ಈ ಜಾಗದಲ್ಲಿ ನಾವು ಶಿವರಾತ್ರಿ ದಿನ ಗುದ್ದಲಿ ಪೂಜೆ ಮಾಡುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನಮ್ಮದೇ ಸ್ಥಾನ, ಮುಸ್ಲಿಂ ಸಮುದಾಯ ಅತಿಕ್ರಮಣ ಮಾಡಿಕೊಂಡು, ದರ್ಗಾ ಮಾಡಿ ಉರುಸ್ ನಡೆಸುತ್ತಿದ್ದಾರೆ. ಈ ಜಾಗದಲ್ಲಿ ಪೂಜೆಗೆ ಕೋರ್ಟ್ ಅನುಮತಿ ಕೊಟ್ಟಿದೆ. ನಾವು ಶಿವರಾತ್ರಿ ದಿನ ಇಲ್ಲಿ ಗುದ್ದಲಿ ಪೂಜೆ ನೆರವೇರಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಸಂಸದ ಡಿ.ಕೆ ಸುರೇಶ್ ಅವರ ದೇಶ ವಿಭಜನೆ ಹೇಳಿಕೆ ವಿಚಾರವಾಗಿ, ದೇಶ ತುಂಡು ಮಾಡೋದು ದೇಶ ದ್ರೋಹದ ಹೇಳಿಕೆಯಾಗಿದೆ. ದೇಶ ತುಂಡು ಮಾಡೋಕೆ ನಿಮಗೆ ಯಾರು ಹಕ್ಕು ಕೊಟ್ಟಿದ್ದಾರೆ? ಆರ್ಥಿಕತೆ ಹೆಸರಲ್ಲಿ ದೇಶ ತುಂಡು ಮಾಡೋದಾದ್ರೆ, ಸ್ವಾತಂತ್ರ್ಯ ಹೋರಾಟ ಯಾಕೆ ಮಾಡಬೇಕಾಗಿತ್ತು? ನೀವು ಕಾಂಗ್ರೆಸ್‍ನವರು ಆಗ ಹೋರಾಟ ಮಾಡಿರೋದು, ಇವಾಗ ದೇಶ ಒಡೆಯೋದಕ್ಕಾ ಹೇಗೆ ಎಂದು ಪ್ರಶ್ನಿಸಿದರು. ಈಗ ದಕ್ಷಿಣ ಭಾರತ ಒಡೆಯೋದು ಎಂದರೆ ಏನು? ಆ ಹಿನ್ನೆಲೆಯಲ್ಲಿ ಈಶ್ವರಪ್ಪ ಒಬ್ಬ ದೇಶಭಕ್ತನಾಗಿ ನೋವು ತಡೆಯಲಾರದೆ ಹೇಳಿದ್ದಾರೆ. ನಾನು ಈಶ್ವರಪ್ಪ ವಿಚಾರ ಬೆಂಬಲಿಸುತ್ತಿದ್ದೇನೆ. ರಾಜಕಾರಣಿಗಳಿಗೆ ಒಂದೇ ಅಸ್ತ್ರ ಇರೋದು, ಪೊಲೀಸ್ ಠಾಣೆ, ಹೆದರಿಸೋದು ಬೇದರಿಸೋದು ಇದೇ ಉದ್ಯೋಗವಾಗಿದೆ. ನೈತಿಕವಾಗಿ, ಬೌದ್ಧಿಕವಾಗಿ ಚರ್ಚೆ ಮಾಡುವ ತಾಕತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಹಿಂದೂಗಳ ತೆರಿಗೆ ಹಿಂದೂಗಳಿಗೆ ಎಂಬ ಶಾಸಕ ಹರಿಶ್ ಪುಂಜಾ ಹೇಳಿಕೆ ವಿಚಾರವಾಗಿ, ಹಿಂದೂಗಳ ತೆರಿಗೆ ಹಿಂದೂಗಳಿಗೆ, ಮುಸ್ಲಿಮರ ತೆರಿಗೆ ಮುಸ್ಲಿಮರಿಗೆ ಎನ್ನುವುದು ಸರಿಯಲ್ಲ. ಮೋದಿಯವರು ರಾಷ್ಟ್ರವನ್ನು ಸಮಾನತೆಯಿಂದ ನೋಡಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ. ಸಮಾನತೆಯಿಂದ ಯಾವ ಬೇಧ-ಭಾವ ಇಲ್ಲದೇ 10 ವರ್ಷ ನಡೆಸಿಕೊಂಡು ಬಂದಿದ್ದಾರೆ. ಹೀಗೆ ಪ್ರತಿಯೊಬ್ಬರೂ ತಮ್ಮ ಟ್ಯಾಕ್ಸ್ ಮೂಲಕ ಜೀವನ ನಡೆಸುತ್ತೇವೆ ಎಂದರೆ ಅದು ಮೂರ್ಖತನದ ಹೇಳಿಕೆ ಎಂದಿದ್ದಾರೆ.

ಅಂಧ ಭಕ್ತರು ಹೆಚ್ಚಿರುವ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡಿ ಮತಬ್ಯಾಂಕ್ ಗಟ್ಟಿ ಮಾಡಿಕೊಳ್ಳುವ ಹುನ್ನಾರ

ನವದೆಹಲಿ: ಅಂಧ ಭಕ್ತರು ಹೆಚ್ಚಿರುವ ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡಿ ಮತಬ್ಯಾಂಕ್ ಗಟ್ಟಿ ಮಾಡಿಕೊಳ್ಳುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. ದಕ್ಷಿಣ ಭಾರತದವರು ಅಂಧ ಭಕ್ತರು ಅಲ್ಲ ಎನ್ನುವ ಕಾರಣಕ್ಕೆ ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆರೋಪಿಸಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು, ಡಿ.ಕೆ ಸುರೇಶ್ ಹೇಳಿಕೆ ಬಹಳಷ್ಟು ಚರ್ಚೆಯಾಗುತ್ತಿದೆ. ತೆರಿಗೆ ರೂಪದಲ್ಲಿ ಬರುವ ಹಣ ಹೇಗೆ ವಿಕೇಂದ್ರಿಕರಣಗೊಳ್ಳಬೇಕು ಎಂದು ಫೈನಾನ್ಸ್ ಕಮಿಷನ್ ನಿರ್ಧರಿಸುತ್ತದೆ. ಈಶಾನ್ಯ ರಾಜ್ಯಗಳಿಗೆ […]

ಲೋಕಸಭೆಗೆ ಅಲ್ಲ, ರಾಜ್ಯಸಭೆಗೆ ದೆಹಲಿಯಲ್ಲಿ ವಿ.ಸೋಮಣ್ಣ ಲಾಬಿ!

ನವದೆಹಲಿ:ರಾಜ್ಯಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಾಬಿ ಶುರುವಾಗಿದ್ದು ಮಾಜಿ ಸಚಿವ ವಿ.ಸೋಮಣ್ಣ ವರಿಷ್ಠರ ಭೇಟಿಗೆ ಪ್ರಯತ್ನ ಆರಂಭಿಸಿದ್ದಾರೆ. ಭಾನುವಾರವ ರಾತ್ರಿಯೇ ದೆಹಲಿಗೆ ಆಗಮಿಸಿರುವ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಪ್ರಮುಖ ನಾಯಕರ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ.ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೂರು ಸ್ಥಾನ ಕಾಂಗ್ರೆಸ್‌ಗೆ ಲಭ್ಯವಾಗಲಿದೆ. ಉಳಿದ ಬಾಕಿ ಒಂದು ಸ್ಥಾನ ಆಯ್ಕೆ ಮಾಡಿಕೊಳ್ಳಲು ಬಿಜೆಪಿಗೆ ಅವಕಾಶವಿರುತ್ತದೆ. ಈ ಹಿನ್ನಲೆಯಲ್ಲಿ ದೆಹಲಿಯಲ್ಲಿ ಠಿಕಾಣಿ ಹೂಡಿರುವ ಅವರು ಲೋಕಸಭೆ ಬದಲಿಗೆ […]

ಶಕ್ತಿ ಯೋಜನೆಯಿಂದ ಕರ್ನಾಟಕದ ಮುಜರಾಯಿ ದೇಗುಲಗಳ ಆದಾಯ ದ್ವಿಗುಣ

ರಾಜ್ಯದ ಮುಜುರಾಯಿ ಇಲಾಖೆಗೆ ಒಳಪಟ್ಟಿರುವ ಅತ್ಯಂತ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ಕುಕ್ಕೆ ಸುಬ್ರಮ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಈ ವರ್ಷ ಬರೋಬ್ಬರಿ 123 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ಇನ್ನು ಈ ದೇವಸ್ಥಾನಕ್ಕೆ ಕಳೆದ ವರ್ಷ 74 ಕೋಟಿ ರೂ. ಆದಾಯ ಬಂದಿತ್ತುದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲೂರು ಮೂಕಂಬಿಕಾ ದೇವಸ್ಥಾನಕ್ಕೆ ಈ ವರ್ಷ 59.47 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ಕಳೆದ ವರ್ಷ 31.36 ಕೋಟಿ ರೂ. ಆದಾಯ ಸಂಗ್ರಹವಾಗಿತ್ತು.ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಕೆಳೆದ ವರ್ಷ […]

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಮಂಗನ ಕಾಯಿಲೆ ಆತಂಕ!

ಬೆAಗಳೂರು:ರಾಜ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಾಗುತ್ತಿರುವ ಕಾರಣ, ಆರೋಗ್ಯ ಇಲಾಖೆ ಹೆಚ್ಚು ನಿಗಾ ವಹಿಸಿದೆ. ನವೆಂಬರ್‌ನಿAದ ಮೇ ತಿಂಗಳ ಅವಧಿಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಳ್ಳುತ್ತೆ. ಹಠಾತ್ ಜ್ವರ, ಶರೀರದಲ್ಲಿ ತೀವ್ರ ಸ್ನಾಯುಗಳ ನೋವು, ತಲೆ ನೋವು ಇತ್ಯಾದಿ ರೋಗ ಲಕ್ಷಣಗಳು ಕಂಡು ಬಂದ್ರೆ ಕೂಡಲೆ ಆಸ್ಪತ್ರೆಗೆ ಹೋಗಿ. ರಾಜ್ಯದಲ್ಲಿ ಒಟ್ಟು 49 ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗಿವೆ.ಇಬ್ಬರು ಸಾವುಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ ಒಂದರAತೆ ಇಬ್ಬರು ಸಾವನ್ನಪ್ಪಿದ್ದಾರೆ. ಜನವರಿ 1 ರಿಂದ ಫೆಬ್ರವರಿ 2 ರವರೆಗೆ ರಾಜ್ಯದಲ್ಲಿ […]

ನನ್ನ ಸೋಲಿಗೆ ನಮ್ಮೊಳಗಿನ ಪಿತೂರಿಯೇ ಕಾರಣಭಾವುಕರಾದ ಬಿಜೆಪಿ ಮಾಜಿ ಶಾಸಕಿ

ತುಮಕೂರು:ವಿಧಾನಸಭಾ ಚುನಾವಣೆ ನಡೆದು ಏಳು ತಿಂಗಳು ಕಳೆದರೂ ಸಹ ಇನ್ನೂ ಕೂಡ ಪರಾಜಿತ ಅಭ್ಯರ್ಥಿಗಳ ಹೊಟ್ಟೆಯೊಳಗಿನ ನೋವು ಕಡಿಮೆಯಾಗಿಲ್ಲ. ಇದಕ್ಕೆ ಸಾಕ್ಷಿ ಬಿಜೆಪಿ ಮಾಜಿ ಶಾಸಕಿ ರೂಪಾಲಿ ನಾಯಕ್ ಆಡಿರುವ ಮಾತು.ಹೌದು.. ಬಿಜೆಪಿ ಪಕ್ಷದ ಮಾಜಿ ಶಾಸಕಿ ರೂಪಾಲಿ ನಾಯಕ್ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮೊಳಗಿನ ಪಿತೂರಿಯಿಂದಲೇ ನಾನು ಸೋಲು ಅನುಭವಿಸಿದೆ ಎಂದು ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕಿ ರೂಪಾಲಿ ನಾಯಕ್, ನಮ್ಮ ಬೆಳವಣಿಗೆಯನ್ನು ಸಹಿಸದ ಕಾರಣ ನಾನು […]

ಯು.ಟಿ ಖಾದರ್ ವಿರುದ್ಧ ಮುಸ್ಲಿಂ ಧಾರ್ಮಿಕ ಮುಖಂಡನ ಆಕ್ರೋಶ

ಮಂಗಳೂರು:ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ನಡೆದ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಭಾಗವಹಿಸಿ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಆಶೀರ್ವಾದ ಪಡೆದರು. ದೈವಗಳ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್ ವಿರುದ್ಧ ಮುಸ್ಲಿಂ ಮುಖಂಡನೋರ್ವ ವಿರೋಧ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬುವವರು ಯು.ಟಿ. ಖಾದರ್ ಬಗ್ಗೆ ಆಕ್ಷೇಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.‘ಕೊರಗಜ್ಜನ ಭಕ್ತ ಯು.ಟಿ ಖಾದರ್ […]

ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸೋದಿಲ್ಲ

ಬೆಂಗಳೂರು:ಶಕ್ತಿ ಯೋಜನೆಯಲ್ಲಿ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. 5 ವರ್ಷ ಯೋಜನೆ ಮುಂದುವರೆಯಲಿದೆ. ಮುಂದಿನ ಅವಧಿಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಅಗಲೂ ಶಕ್ತಿ ಯೋಜನೆ ಅನುಷ್ಠಾನ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.ಅಶ್ವಮೇಧ ಕ್ಲಾಸಿಕ್ ಬಸ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಎಸ್‌ಆರ್‌ಟಿಸಿಯಿಂದ 100 ಹೊಸ ಬಸ್ ಗೆ ಚಾಲನೆ ನೀಡ್ತಿದ್ದೇವೆ, ಏಪ್ರಿಲ್ ಹೊತ್ತಿದೆ 1000 ಬಸ್ ಬರಲಿದೆ. ಶಕ್ತಿ ಯೋಜನೆ ಬಂದಾಗಿನಿAದ 1 ಕೋಟಿ 10 ಲಕ್ಷ ಜನ ನಿತ್ಯ 4 ನಿಗಮದಿಂದ ಓಡಾಡುತ್ತಿದ್ದಾರೆ. […]

ಯುವತಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್

ನೆಲಮಂಗಲ:ಯುವತಿ ಮೇಲೆ ಅತ್ಯಾಚಾರವೆಸಗಿರುವ ಆರೋಪಿ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೀದರ್ ಮೂಲದ ಯುವಕ ಶಿವಕುಮಾರ್ ಹೊಸಳ್ಳಿ (25) ಅತ್ಯಾಚಾರವೆಸಗಿದ ಆರೋಪಿ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ ವಾಸವಾಗಿರುವ ಶಿವಕುಮಾರ್, ಆರು ವರ್ಷದ ಹಿಂದೆ (2018) ರಲ್ಲಿ ಉಡುಪಿಯಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಯುವತಿಗೆ ಪರಿಚಯವಾಗಿದ್ದಾನೆ.ಬಳಿಕ ಶಿವಕುಮಾರ್ ಯುವತಿಯ ತಾಯಿ ಬಳಿ ಸಂತ್ರಸ್ತೆಯ ಮೊಬೈಲ್ ನಂಬರ್ ತೆಗೆದುಕೊಂಡು ಮೆಸೇಜ್ ಮಾಡಲು ಆರಂಭಿಸಿದ್ದಾನೆ. 2018ರ ಮಾರ್ಚ್ನಲ್ಲಿ ನೆಲಮಂಗಲದಲ್ಲಿರುವ ಯುವತಿ ಮನೆಗೆ […]

ನಮ್ಮ ಗ್ಯಾರಂಟಿಗಳನ್ನು ನೋಡಿಕೊಂಡು ಬಿಜೆಪಿಮೋದಿ ಗ್ಯಾರಂಟಿ ಅಂತಾರೆ

ಬೆಂಗಳೂರುಬಿಜೆಪಿ ಅವರು ನಮ್ಮ ಸರ್ಕಾರದ ಗ್ಯಾರಂಟಿಗಳನ್ನು ಮೊದಲು ಟೀಕೆ ಮಾಡಿ ಈಗ ನಮ್ಮ ಗ್ಯಾರಂಟಿ ನೋಡಿಕೊಂಡು ಮೋದಿ ಗ್ಯಾರಂಟಿ, ಮೋದಿ ಗ್ಯಾರಂಟಿ ಎಂದು ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ ನಲ್ಲಿ ನಡೆದ 100 ಅಶ್ವಮೇಧ ಕ್ಲಾಸಿಕ್ ಬಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.ನಾವು ಚುನಾವಣೆ ಪೂರ್ವದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ್ದೆವು. ಜೂನ್ 11ಕ್ಕೆ ಇದೇ ಜಾಗದಲ್ಲಿ ಉಚಿತ […]