July 29, 2026
#ಜಿಲ್ಲೆ

ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗೆ ‘ಭಾರತ ರತ್ನ’ ಯಾಕಿಲ್ಲ

ದಾವಣಗೆರೆ:
ಎಲ್.ಕೆ.ಅಡ್ವಾಣಿ ಅವರಿಗೆ ‘ಭಾರತ ರತ್ನ’ ಕೊಡಲಿ ಬಿಡಿ, ಪಾಪ ಬೇಡ ಎಂದವರು ಯಾರು? ನಾವು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಿ ಎಂದು ಪತ್ರ ಬರೆದಿದ್ದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.
ದಾವಣಗೆರೆಯಲ್ಲಿ ನಡೆಯುತ್ತಿರುವ ೩೮ನೇ ಪತ್ರಕರ್ತರ ಸಮ್ಮೇಳನದಲ್ಲಿ ಸಿಎಂ ಭಾಗಿಯಾಗಿದ್ದಾರೆ. ಇದಕ್ಕೂ ಮುನ್ನ, ಈಶ್ವರಾನಂದಪುರಿ ಸ್ವಾಮೀಜಿಗೆ ಗರ್ಭಗುಡಿ ಪ್ರವೇಶ ನಿಷೇಧ ಕುರಿತು ಮಾತನಾಡಿದ ಅವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ನನಗೆ ಗೊತ್ತಿಲ್ಲದಿರುವುದನ್ನ ಹೇಗೆ ಹೇಳಲಿ ಎಂದು ಪ್ರಶ್ನಿಸಿದರು.
ನಗರೋತ್ಥಾನದಲ್ಲಿ ಅವ್ಯವಹಾರ ಆಗಿರುವ ಬಗ್ಗೆ ಗುತ್ತೆದಾರರು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ಯಾರೇ ಬಂದು ದೂರು ನೀಡಿದರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಹೆಬ್ಬಾಳ್ಕರ್ ಪುತ್ರನಿಗೆ ಟಿಕೆಟ್ ಕೇಳಿರೋ ವಿಚಾರವಾಗಿ ಮಾತನಾಡಿ, ಅವರು ಕೇಳಲಿ ಬಿಡಿ. ಅವರು ಆಕಾಂಕ್ಷಿ. ಕಾಂಗ್ರೆಸ್‌ನಲ್ಲಿ ಟಿಕೆಟ್ ಕೇಳುವವರ ಸಂಖ್ಯೆ ಹೆಚ್ಚಾಗಿದೆ. ಲೋಕಸಭಾ ಚುನಾವಣೆ ಕುರಿತಂತೆ ಯಾರು ಗೆಲ್ತಾರೆ ಅಂತಾ ಸರ್ವೇ ಇನ್ನೂ ಆಗ್ತಾ ಇದೆ. ಕಾಂಗ್ರೆಸ್ ಎಲ್ಲ ಮುಖಂಡರ ಅಭಿಪ್ರಾಯ ಪಡೆದು ಟಿಕೆಟ್ ಯಾರಿಗೆ ನೀಡಬೇಕು ಅಂತಾ ನಿರ್ಧಾರ ಮಾಡ್ತೀವಿ ಎಂದು ಹೇಳಿದರು.

Leave a comment

Your email address will not be published. Required fields are marked *