ಮುನಿಸು ಮರೆತ ವಿಜಯೇಂದ್ರ, ಅರುಣ್ ಸೋಮಣ್ಣ
ಬೆಂಗಳೂರು:
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಮುನಿಸು ಮರೆತು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ತಂದೆಗೆ ಪಕ್ಷದಲ್ಲಿ ಗೌರವ ಸಿಗುತ್ತಿದ್ದಂತೆ ಅರುಣ್ ಸೋಮಣ್ಣ, ವಿಜಯೇಂದ್ರ ಜೊತೆ ವೇದಿಕೆ ಹಂಚಿಕೊAಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ವಿಜಯೇಂದ್ರ ಜೊತೆ ಅರುಣ್ ಸೋಮಣ್ಣ ಭಾಗಿಯಾಗಿದ್ದರು. ಈ ಹಿಂದೆ ವಿಜಯೇಂದ್ರರಿAದ ಕಡೆಗಣನೆ ಎಂದು ಅರುಣ್ ಸೋಮಣ್ಣ ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ವಿಜಯೇಂದ್ರ ವಿರುದ್ಧ ಮಾಜಿ ಸಚಿವ ವಿ.ಸೋಮಣ್ಣ ಆಕ್ರೋಶಗೊಂಡಿದ್ದರು.
ಇದೀಗ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಬಗ್ಗೆ ಪ್ರಸ್ತಾಪ ಬೆನ್ನಲ್ಲೇ ವಿಜಯೇಂದ್ರ ಜೊತೆ ಸ್ನೇಹ ಬೆಳೆಸಲು ಅರುಣ್ ಸೋಮಣ್ಣ ಮುಂದಾಗಿದ್ದಾರೆ ಎನ್ನಲಾಗಿದೆ. ಮೊನ್ನೆಯಷ್ಟೇ ತುಮಕೂರಿಂದ ವಿ.ಸೋಮಣ್ಣ ಸ್ಪರ್ಧೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರಸ್ತಾಪ ಮಾಡಿದ್ದರು.
ಕಾಂಗ್ರೆಸ್‌ನಿAದ ಪ್ರತಿಭಟನೆ
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ.. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ೫ ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಕಾಂಗ್ರೆಸ್ ನಾಯಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ.
ಬಿಜೆಪಿಯಿAದ್ಲೂ ಧರಣಿ
ಇನ್ನು ಕಾಂಗ್ರೆಸ್ ದೆಹಲಿ ಪ್ರತಿಭಟನೆಗೆ ಕೌಂಟರ್ ಆಗಿ ಬೆಂಗಳೂರಿನಲ್ಲಿ ಅದೇ ದಿನ ಬಿಜೆಪಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಫೆಬ್ರವರಿ 7 ರಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಆಯೋಜಿಸಿದೆ.
ಈ ಪ್ರತಿಭಟನೆಯಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರ ಪ್ರತಿಭಟನೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ. ರೈತ ವಿರೋಧಿ ಸರ್ಕಾರ ಅಂತ ಆರೋಪಿಸಿ ಕಾಂಗ್ರೆಸ್ ಏಟಿಗೆ ಎದಿರೇಟು ನೀಡಲು ಸಜ್ಜಾಗಿದೆ.
ಪ್ರತಿಭಟನೆ ರಾಜಕೀಯ
ಈ ಮೂಲಕ ಪ್ರತಿಭಟನೆ ರಾಜಕೀಯ ಆರಂಭವಾಗಿದೆ. ರಾಜ್ಯ ಕಾಂಗ್ರೆಸ್ ದೆಹಲಿಯಲ್ಲಿ ಕರೆ ಕೊಟ್ಟಿರುವ ಪ್ರತಿಭಟನೆಗೆ ರಾಜ್ಯ ಬಿಜೆಪಿ ನಾಯಕರು ಕೌಂಟರ್ ಕೊಟ್ಟಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ನಡೆಸುವ ದಿನವೇ ವಿಧಾನಸೌಧದಲ್ಲಿ ಬಿಜೆಪಿ ಶಾಸಕರು ಪ್ರತಿಭಟನೆಗೆ ನಿರ್ಧಾರ ಮಾಡಿದ್ದಾರೆ.








































































































































































































































































































































































































































































































































































































































































































































































































































































































































































































































































































































