September 13, 2026
#ಜಿಲ್ಲೆ

ಯುವತಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್

ನೆಲಮಂಗಲ:
ಯುವತಿ ಮೇಲೆ ಅತ್ಯಾಚಾರವೆಸಗಿರುವ ಆರೋಪಿ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೀದರ್ ಮೂಲದ ಯುವಕ ಶಿವಕುಮಾರ್ ಹೊಸಳ್ಳಿ (25) ಅತ್ಯಾಚಾರವೆಸಗಿದ ಆರೋಪಿ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ ವಾಸವಾಗಿರುವ ಶಿವಕುಮಾರ್, ಆರು ವರ್ಷದ ಹಿಂದೆ (2018) ರಲ್ಲಿ ಉಡುಪಿಯಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಯುವತಿಗೆ ಪರಿಚಯವಾಗಿದ್ದಾನೆ.
ಬಳಿಕ ಶಿವಕುಮಾರ್ ಯುವತಿಯ ತಾಯಿ ಬಳಿ ಸಂತ್ರಸ್ತೆಯ ಮೊಬೈಲ್ ನಂಬರ್ ತೆಗೆದುಕೊಂಡು ಮೆಸೇಜ್ ಮಾಡಲು ಆರಂಭಿಸಿದ್ದಾನೆ. 2018ರ ಮಾರ್ಚ್ನಲ್ಲಿ ನೆಲಮಂಗಲದಲ್ಲಿರುವ ಯುವತಿ ಮನೆಗೆ ಶಿವಕುಮಾರ್ ಹೋಗಿದ್ದಾನೆ. ಈ ವೇಳೆ ಯುವತಿ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಮಯದಲ್ಲಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ವೇಳೆ ಯುವತಿಗೆ ಗೊತ್ತಿಲ್ಲದ ಹಾಗೆ ಶಿವಕುಮಾರ್ ಫೋನಿನಲ್ಲಿ ಫೋಟೋ ತೆಗೆದು, ವಿಡಿಯೋ ಮಾಡಿಕೊಂಡಿದ್ದಾನೆ. ಆಗ ಯುವತಿಗೆ 16 ವರ್ಷ.
ಈ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ, ಹಲವಾರು ಬಾರಿ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಸಂತ್ರಸ್ತೆಯಿAದ 85000 ಹಣವನ್ನು ಶಿವಕುಮಾರ್ ಪಡೆದುಕೊಂಡಿದ್ದಾನೆ. ಬಳಿಕ ಸಂತ್ರಸ್ತೆಯ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸಂತ್ರಸ್ತೆಯ ಚಿಕ್ಕಪ್ಪನ ಮಗಳ ಮೊಬೈಲ್‌ಗೆ ಕಳಿಸಿದ್ದಾನೆ.
ಜನವರಿ 30 ರಂದು ಸಂತ್ರಸ್ತೆ ಮತ್ತು ಅವರ ತಂದೆ-ತಾಯಿ ಎಲ್ಲರೂ ನೆಲಮಂಗಲದ ಗಣೇಶನ ಗುಡಿ ದೇವಸ್ಥಾನಕ್ಕೆ ಹೋದಾಗ, ಶಿವಕುಮಾರ್ ಸಂತ್ರಸ್ತೆಗೆ ಕರೆ ಮಾಡಿ ಬಾ ನಾನು ನಿನ್ನೊಂದಿಗೆ ಸಂಭೋಗ ಮಾಡಬೇಕು ಎಂದು ಬಲವಂತವಾಗಿ ಪೀಡಿಸಿದ್ದಾನೆ. ಈ ವಿಚಾರವನ್ನು ಸಂತ್ರಸ್ತೆ ತಂದೆ ತಾಯಿಗೆ ತಿಳಿಸಿದ್ದಾರೆ. ನಂತರ ಈ ಬಗ್ಗೆ ದೂರು ನೀಡುವುದು ಒಳ್ಳೆಯದೆಂದು ತೀರ್ಮಾನಿಸಿ ಸಂತ್ರಸ್ತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಿವಕುಮಾರ್ ಹೊಸಳ್ಳಿ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಸಂತ್ರಸ್ತೆ ಆಗ್ರಹಿಸಿದ್ದಾರೆ.

Leave a comment

Your email address will not be published. Required fields are marked *