September 12, 2026
#ಬೆಂಗಳೂರು

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಮಂಗನ ಕಾಯಿಲೆ ಆತಂಕ!

ಬೆAಗಳೂರು:
ರಾಜ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಾಗುತ್ತಿರುವ ಕಾರಣ, ಆರೋಗ್ಯ ಇಲಾಖೆ ಹೆಚ್ಚು ನಿಗಾ ವಹಿಸಿದೆ. ನವೆಂಬರ್‌ನಿAದ ಮೇ ತಿಂಗಳ ಅವಧಿಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಳ್ಳುತ್ತೆ. ಹಠಾತ್ ಜ್ವರ, ಶರೀರದಲ್ಲಿ ತೀವ್ರ ಸ್ನಾಯುಗಳ ನೋವು, ತಲೆ ನೋವು ಇತ್ಯಾದಿ ರೋಗ ಲಕ್ಷಣಗಳು ಕಂಡು ಬಂದ್ರೆ ಕೂಡಲೆ ಆಸ್ಪತ್ರೆಗೆ ಹೋಗಿ. ರಾಜ್ಯದಲ್ಲಿ ಒಟ್ಟು 49 ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗಿವೆ.
ಇಬ್ಬರು ಸಾವು
ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ ಒಂದರAತೆ ಇಬ್ಬರು ಸಾವನ್ನಪ್ಪಿದ್ದಾರೆ. ಜನವರಿ 1 ರಿಂದ ಫೆಬ್ರವರಿ 2 ರವರೆಗೆ ರಾಜ್ಯದಲ್ಲಿ 258 ಕೆ.ಎಫ್.ಡಿ. (ಎಂಡಮಿಕ್) ಪರೀಕ್ಷೆ ನಡೆಸಿದ ಆರೋಗ್ಯ ಇಲಾಖೆ. ಈ ವೇಳೆ ಮೂರು ಜಿಲ್ಲೆಗಳಿಂದ ಒಟ್ಟು ೪೯ ಪ್ರಕರಣಗಳು ವರದಿಯಾಗಿವೆ. ಶಿವಮೊಗ್ಗ , ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಪ್ರಕರಣ ಪತ್ತೆಯಾಗಿವೆ. ರೋಗ ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
ಉಚಿತವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಕೆಎಫ್‌ಡಿಗೆ ಸಂಬAಧಪಟ್ಟAತೆ ಮಾರ್ಗಸೂಚಿ ನೀಡಲಾಗಿದೆ. ಮಂಗನ ಕಾಯಿಲೆ ನಿಯಂತ್ರಣಕ್ಕೆ ಎಲ್ಲ ಕ್ರಮವಹಿಸಲಾಗಿದೆ.ನಾನು ಶಿವಮೊಗ್ಗಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಈ ವರ್ಷ ನಮ್ಮ ಬಳಿ ವ್ಯಾಕ್ಸಿನ್ ಇಲ್ಲ. ಹೀಗಾಗಿ ಈ ವರ್ಷ ವ್ಯಾಕ್ಸಿನ್ ಇಲ್ಲದೇ ನಿಭಾಯಿಸಬೇಕು.ಎಲ್ಲ ಮುಜಾಗ್ರತಾ ಕ್ರಮ ವಹಿಸಲಾಗಿದೆ. ಏಈಆ ಗೆ ಉಚಿತವಾಗಿ ನಮ್ಮ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಹೇಳಿದ್ದಾರೆ.
ರಾಜ್ಯದಲ್ಲಿ 10 ರಿಂದ 12 ಜಿಲ್ಲೆಗಳಲ್ಲಿ ಇದು ಕಂಡು ಬಂದಿದೆ. ಪ್ರಮುಖ ಮೂರು ಜಿಲ್ಲೆಗಳಲ್ಲಿ ಕಟ್ಟು ನಿಟ್ಟ ಕ್ರಮವಹಿಸಲಾಗಿದೆ. ರೋಗ ಲಕ್ಷಣ ಕಂಡು ಬಂದ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ. ಕಾಡಿಗೆ ಹೋಗುವ ಮುನ್ನ ಇಲಾಖೆ ಉಚಿತವಾಗಿ ನೀಡುವ ಆಇPಂ ತೈಲವನ್ನು ಲೇಪಿಸಿಕೊಂಡು ಹೋಗುವಂತೆ ಸೂಚನೆ ನೀಡಿದ್ದೇವೆ. ಆಇPಂ ತೈಲವನ್ನು ಉಚಿತವಾಗಿ ಎಲ್ಲ ಕುಟುಂಬಗಳಿಗೆ ನೀಡಲಾಗಿದೆ ಎಂದು ರಂದೀಪ್ ಹೇಳಿದ್ದಾರೆ.

Leave a comment

Your email address will not be published. Required fields are marked *