September 14, 2026

ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರ ನಿರಾಕರಣೆ;ಪ್ರೇಮಿಗಳಿಬ್ಬರು ನೇಣಿಗೆ ಶರಣು

ಕಲಬುರಗಿ:ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ.ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು. ಅದರಿಂದ ಎರಡೂ ಮನೆಯವರು ಅಣ್ಣ-ತಂಗಿ ಪ್ರೀತಿಗೆ ನಿರಾಕರಿಸಿದ್ದಾರೆಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಅದರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಗ್ರಾಮದ ಯುವಕನ ಜೊತೆ ನಿಶ್ಚಿತಾರ್ಥ ಮಾಡಿಸಿದ್ದರು. ಮುಂದಿನ […]

ಎಲ್‌ಕೆ ಅಡ್ವಾಣಿಗೆ ಭಾರತ ರತ್ನ: ಕರ್ನಾಟಕ ಬಿಜೆಪಿ ನಾಯಕರ ಹರ್ಷ

ಬೆಂಗಳೂರು:ಬಿಜೆಪಿಯ ಭೀಷ್ಮ ಎಲ್‌ಕೆ ಅಡ್ವಾಣಿಗೆ ಭಾರತ ರತ್ನ ಘೋಷಣೆಯಾಗಿರುವ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಕರ್ಣಾಟಕದ ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದಾರೆ. ಉಪಪ್ರಧಾನಿಗಳಾಗಿ ಅಡ್ವಾಣಿ ಅವರ ಕೊಡುಗೆಯನ್ನು ದೇಶ ಎಂದಿಗೂ ಮರೆಯಲಾಗದು ಎಂದು ಬಿಎಸ್ ಯಡಿಯೂರಪ್ಪ ಸಾಮಾಜಿಕ ಮಾಧ್ಯಮ ಎಕ್ಸ್ ಸಂದೇಶದಲ್ಲಿ ಬಣ್ಣಿಸಿದ್ದಾರೆ.‘ಹಿರಿಯ ನೇತಾರ, ಧೀಮಂತ ನಾಯಕ ಆದರಣೀಯ ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿಯಿಂದ ಗೌರವಿಸಲಾಗುತ್ತಿರುವುದು ಅತ್ಯಂತ ಹೆಮ್ಮೆಯ ಮತ್ತು ಅಭಿನಂದನೀಯ ಸಂಗತಿ. ದೇಶದ ಅಭಿವೃದ್ಧಿ ನಿಟ್ಟಿನಲ್ಲಿ ಅವರ ಪ್ರಯತ್ನ […]

ಜಾತಿ ಕಾರಣಕ್ಕೆ ನಮ್ಮನ್ನ ಚನ್ನಕೇಶವ ದೇಗುಲದ ಗರ್ಭಗುಡಿಗೆ ಬಿಟ್ಟಿರಲಿಲ್ಲ

ಚಿತ್ರದುರ್ಗ:ಜಾತಿ ಕಾರಣಕ್ಕೆ ಬಾಗೂರು ಗ್ರಾಮದ ಚನ್ನಕೇಶವ ದೇಗುಲದಲ್ಲಿ ನಮಗೂ ಗರ್ಭಗುಡಿ ಪ್ರವೇಶಕ್ಕೆ ಬಿಡಲಿಲ್ಲ. ನಾವು ದೇಗುಲಕ್ಕೆ ಹೋಗಿದ್ದೆವೆಂಬ ಕಾರಣಕ್ಕೆ ದೇವಾಲಯ ಸ್ವಚ್ಛಗೊಳಿಸಿದ್ದಾರೆ ಎಂದು ಸಾಣೇಹಳ್ಳಿಯಲ್ಲಿ ಕನಕ ಪೀಠದ ಈಶ್ವರಾನಂದಪುರಿ ಶ್ರೀ ಬೇಸರ ವ್ಯಕ್ತಪಡಿಸಿದ್ದಾರೆ.ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಅಂತರ್ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಶುಕ್ರವಾರ ನಡೆದ ಪರಿವರ್ತನೆಯ ಹಾದಿಯಲ್ಲಿ ಮಠಗಳು ಗೋಷ್ಠಿಯಲ್ಲಿ ಈಶ್ವರಾನಂದಪುರಿ ಶ್ರೀ ಬೇಸರ ವ್ಯಕ್ತಪಡಿಸಿದ್ದಾರೆ.ಕುರುಬರ ಸ್ವಾಮೀಜಿ ಒಳಗೆ ಬಂದರೆAಬ ಕಾರಣಕ್ಕೆ ಸ್ವಚ್ಛತೆ ಮಾಡಿದ್ದಾರೆ. […]

ವೋಟ್ ಹಾಕಿಲ್ಲ ಅಂತ ಯಾರನ್ನಾದ್ರು ಓಡಿಸ್ಕೊಂಡು ಹೋಗ್ತಾ ಇದೀವಾ

ರಾಮನಗರ:ವೋಟ್ ಹಾಕಿಲ್ಲ ಅಂತ ಯಾರನ್ನಾದರೂ ಓಡಿಸ್ಕೊಂಡು ಹೋಗುತ್ತಿದ್ದೀವಾ ಎಂದು ನಿಖಿಲ್ ಕುಮಾರಸ್ವಾಮಿ ವಿರುದ್ಧ ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಕಿಡಿಕಾರಿದ್ದಾರೆ.ತಮ್ಮ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು ನೀಡಿದ ವಿಚಾರ ಕುರಿತು ಮಾಗಡಿಯಲ್ಲಿ ಸುದ್ದಿಗಾರರ ಜೊತೆ ಪ್ರತಿಕ್ರಿಯಿಸಿ, ನಾವು ಹೇಳಿರೋದು ಜನರಿಗೆ ಗ್ಯಾರಂಟಿ ಬೇಕಾ? ಅಕ್ಷತೆ ಬೇಕಾ ಎಂದು. ನಾವು ಯಾರನ್ನ ಬ್ಲ್ಯಾಕ್ ಮೇಲ್ ಮಾಡ್ತಾ ಇದೀವಿ ಹೇಳಿ? ಯಾರನ್ನಾದರು ವೋಟ್ ಹಾಕಲಿಲ್ಲ ಅಂತ ಓಡಿಸ್ಕೊಂಡು ಹೋಗ್ತಾ ಇದೀವಾ ಎಂದು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಜೆಡಿಎಸ್ ಅವರಿಗೆ ನಾನು […]

ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಭಾರೀ ಭ್ರಷ್ಟಾಚಾರ

ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರದ ಆರೋಪಕ್ಕೆ ಸಂಬAಧಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ ರಾಜ್ಯ ಕಾಂಗ್ರೆಸ್ ಸರ್ಕಾರದ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಬ್ರ‍್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಡಾಯಿ ಕೊಚ್ಚಿಕೊಂಡವರು ಈಗ ಬಿಬಿಎಂಪಿಯನ್ನ ಬ್ರಹ್ಮಾಂಡ ಬ್ರಷ್ಟಾಚಾರದ ಕೂಪವಾಗಿಸಿದ್ದಾರೆ ಎಂದು ಟೀಕಿಸಿದ್ದಾರೆ.ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹದಲ್ಲಿ ನಡೆದಿರುವ ಅಕ್ರಮವನ್ನು ಬಯಲಿಗೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]

ಪೂನಂ ಪಾಂಡೆ ಸಾವಿನ ಸುತ್ತ ಭಾರೀ ಅನುಮಾನದ ಹುತ್ತ

ಮುಂಬೈ:ಗರ್ಭಕಂಠದ ಕ್ಯಾನ್ಸರ್‌ನಿಂದ ಮೃತಪಟ್ಟ ಪೂನಂ ಪಾಂಡೆ ಸಾವಿನ ಸುತ್ತ ಅನುಮಾನದ ಹುತ್ತ ದಟ್ಟವಾಗಿ ಬೆಳೆಯಲು ಆರಂಭವಾಗಿದೆ.ಸಾಮಾಜಿಕ ಜಾಲತಾಣದಲ್ಲಿ ನಿಧನ ಸುದ್ದಿ ಪ್ರಕಟವಾದ ಬಳಿಕ ಇಲ್ಲಿಯವರೆಗೆ ಪೂನಂ ಪಾಂಡೆಯವರ ಯಾವುದೇ ಫೋಟೋ ಲಭ್ಯವಾಗಿಲ್ಲ. ಈ ಕಾರಣಕ್ಕೆ ಪ್ರಚಾರದ ಹುಚ್ಚಿಗೆ ಈ ಸುದ್ದಿಯನ್ನು ಹರಿಬಿಡಲಾಗಿದ್ಯಾ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.ಪೂನಂ ಪಾಂಡೆ ಅವರ ಮ್ಯಾನೇಜರ್ ಅವರನ್ನು ಕೇಳಿದರೆ ನಮಗೆ ಅವರ ಸಹೋದರಿ ಅವರಿಂದ ನಿಧನರಾದ ಸುದ್ದಿ ತಿಳಿದಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಖಚಿತ ಪಡಿಸಲು ಸಹೋದರಿ ಅವರಿಗೆ ಕರೆ […]

ಸಿಎಂ ಶಿಂಧೆ ಬಣದ ಮುಖಂಡನ ಮೇಲೆ ಗುಂಡಿನ ದಾಳಿ

ಮುಂಬೈ:ಮಹಾರಾಷ್ಟ್ರದ ಥಾಣೆಯ ಉಲ್ಲಾಸನಗರದಲ್ಲಿ ಸಿಎಂ ಶಿಂಧೆ ಬಣದ ಮುಖಂಡ ಮಹೇಶ್ ಗಾಯಕ್ವಾಡ್ ಮೇಲೆ ಗುಂಡಿನ ದಾಳಿ ನಡೆದಿದೆ. ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳು ಮಹೇಶ್ ಗಾಯಕ್ವಾಡ್‌ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹೇಶ್ ಗಾಯಕ್ವಾಡ್ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಗುಂಡಿನ ದಾಳಿ ನಡೆದಿದೆ. ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಬೆಂಬಲಿಗರು ಶಿವಸೇನಾ (ಏಕನಾಥ್ ಶಿಂಧೆ) ಬಣದ ನಾಯಕ ಮಹೇಶ್ […]

ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಅಲರ್ಟ್ ಆದ ‘ಕೈ’ ಹೈಕಮಾಂಡ್;ಲಕ್ಷ್ಮಣ ಸವದಿ ಜೊತೆ ನಿರಂತರ ಸಂಪರ್ಕ

ಬೆಳಗಾವಿ:ಮಾಜಿ ಸಿಎಂ, ಕಾಂಗ್ರೆಸ್‌ನ ಎಂಎಲ್‌ಸಿ ಆಗಿದ್ದ ಜಗದೀಶ್ ಶೆಟ್ಟರ್ ಅವರು ಕಳೆದ ವಿಧಾನಸಭಾ ಚುನಾವಣೆ ವೇಳೆ ಟಿಕೆಟ್ ಸಿಗದಿದ್ದಕ್ಕೆ ಬಿಜೆಪಿ ಹೈಕಮಾಂಡ್ ವಿರುದ್ಧ ಮುನಿಸಿಕೊಂಡು ಕಾಂಗ್ರೆಸ್ ಸೇರಿದ್ದರು. ಚುನಾವಣೆಯಲ್ಲಿ ಸೋತರೂ ಕಾಂಗ್ರೆಸ್ ಎಂಎಲ್‌ಸಿ ಸ್ಥಾನ ನೀಡಿ ಗೌರವಿಸಿತ್ತು. ಇಷ್ಟೆಲ್ಲ ಇದ್ದರೂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರಿದ್ದಾರೆ. ಇದು ಕಾಂಗ್ರೆಸ್‌ಗೆ ಭಾರೀ ಆಘಾತ ತಂದಿದೆ. ಮತ್ತೊಂದೆಡೆ ಲಕ್ಷ್ಮಣ ಸವದಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ಬಗ್ಗೆ ಮಾತುಗಳು ಹರಿದಾಡುತ್ತಿದ್ದು ಕಾಂಗ್ರೆಸ್ ಹೈಕಮಾಂಡ್ ಅಲರ್ಟ್ ಆಗಿದ್ದಾರೆ.ಮಾಜಿ ಸಿಎಂ ಜಗದೀಶ್ […]

ನಡು ರಸ್ತೆಯಲ್ಲಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ

ಚಿಕ್ಕಬಳ್ಳಾಪುರ:ನಡು ರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಕೊಲೆ ಮಾಡಿ ಆರೋಪಿ ಪೊಲೀಸರಿಗೆ ಶರಣಾಗಿರುವ ಘಟನೆ ಚಿಂತಾಮಣಿ ನಗರದ ಟಿಪ್ಪು ಬಡಾವಣೆಯ ಅಂಗಡಿ ಮುಂದೆ ನಡೆದಿದೆ.ಜಾಬೀರ್ ಪಾಷ ಅಲಿಯಾಸ್ ನೇಪಾಳ್ (26) ಕೊಲೆಯಾದ ವ್ಯಕ್ತಿ. ಆರೋಪಿ ಮುಕ್ತಿಯಾರ್ ಪಾಷಾ ಮತ್ತು ಜಾಬೀರ್ ನಡುವೆ ಯಾವುದೋ ವೈಯಕ್ತಿಕ ದ್ವೇಷ ಇತ್ತು. ಪರಿಣಾಮ ಆತ ಮಧ್ಯರಾತ್ರಿ ನಡು ರಸ್ತೆಯಲ್ಲಿ ಜಾಬೀರ್‌ನನ್ನು ದಾರುಣವಾಗಿ ಕೊಲೆ ಮಾಡಿದ್ದಾನೆ.ಆರೋಪಿ ಕೊಲೆ ಮಾಡಿದ ಬಳಿಕ ಮಧ್ಯರಾತ್ರಿಯೇ ಪೊಲೀಸ್ ಠಾಣೆಗೆ ಹೋಗಿ ತಾನು ಕೊಲೆ ಮಾಡಿರುವುದಾಗಿ ಹೇಳಿ ಶರಣಾಗಿದ್ದಾನೆ. ಘಟನೆ […]

ಪೋಸ್ಟ್ ಮೂಲಕ ಡ್ರಗ್ಸ್ ಸರಬರಾಜುಆರೋಪಿ ಅರೆಸ್ಟ್

ಬೆಂಗಳೂರು:ಪೋಸ್ಟ್ ಮೂಲಕ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ ಪಡಿಸಿಕೊಂಡಿದ್ದಾರೆ.ರಿತಿಕ್ ರಾಜ್ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪಿ. ಜಾರ್ಖಂಡ್‌ನಿAದ ನಗರಕ್ಕೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದನು. ಪೋಸ್ಟ್ ಮೂಲಕ ನಗರದ ವಿವಿಧ ಭಾಗಗಳಿಗೆ ಡ್ರಗ್ಸ್ ಸರಬರಾಜು ಮಾಡಲಾಗುತಿತ್ತು.ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಬರುತ್ತಿದ್ದ ಪೋಸ್ಟ್ ಅನ್ನು ಟ್ರ‍್ಯಾಪ್ ಮಾಡಿದ್ದಾರೆ. ಬಳಿಕ ಪೋಸ್ಟ್ ಡೆಲಿವರಿ ಆಗುವ ಜಾಗದಲ್ಲಿ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗಿಫ್ಟ್ ಬಾಕ್ಸ್ ರೂಪದಲ್ಲಿ ನಗರಕ್ಕೆ […]