September 14, 2026

ನಾನು ಕೇಸರಿ ಶಾಲು ಹಾಕುವುದಿಲ್ಲ, ಕುಮಾರಸ್ವಾಮಿ ಹಾಕಿದ್ದನ್ನು ಪರೋಕ್ಷವಾಗಿ ಖಂಡಿಸಿದ ದೇವೇಗೌಡ

ನವದೆಹಲಿ/ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡ ಗ್ರಾಮದ ಹನುಮ ಧ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿದಕ್ಕೆ ಸ್ವತಃ ಹೆಚ್​ಡಿ ದೇವೇಗೌಡ ಖಂಡಿಸಿದ್ದಾರೆ.ಈ ಬಗ್ಗೆ ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ದೇವೇಗೌಡ, ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು, ನಮ್ಮ ಪಕ್ಷದ ಶಾಲು ಹಾಕಬಹುದಿತ್ತು ಎಂದು ಹೇಳಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಕೇಸರಿ ಶಾಲು ಹಾಕಿರುವುದನ್ನು ಪರೋಕ್ಷವಾಗಿ ಖಂಡಿಸಿದ್ದಾರೆ. ನಾಳೆ ನರೇಂದ್ರ ಮೋದಿ ಜೊತೆಗೆ ಹೋದಾಗಲೂ ನನ್ನ ಪಕ್ಷದ ಶಾಲು […]

ಫೆ.6ರಂದು ರಾಜ್ಯ ಕಾಂಗ್ರೆಸ್​ನಿಂದ ದೆಹಲಿ ಚಲೋ:​ ಪ್ರತಿಭಟನೆ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್​

ಬೆಂಗಳೂರು: ಕೇಂದ್ರದ ತಾರತಮ್ಯ ನೀತಿ ವಿರೋಧಿಸಿ ಫೆ.6ರಂದು ದೆಹಲಿ ಚಲೋ ನಡೆಸುತ್ತೇವೆ. ಫೆಬ್ರವರಿ 7ರಂದು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಸಮ್ಮೇಳ ಸಭಾಂಗಣದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು, ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಎಲ್ಲರೂ ಸೇರಿ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಅವರು ಎಲ್ಲಿ ಜಾಗ ಕೊಡುತ್ತಾರೆ ನೋಡುತ್ತೇವೆ. ನಮ್ಮ ಹಕ್ಕನ್ನ ಕೇಳಲು ಹೋರಾಟ ಮಾಡುತ್ತೇವೆ. ಕೇಂದ್ರ ಸರ್ಕಾರ ವಿರುದ್ಧ ರಾಜ್ಯ ಕಾಂಗ್ರೆಸ್​ನಿಂದ ದೆಹಲಿ […]

ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ, ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ

ವಿಜಯ್ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ ಅವರ ಪಕ್ಷವು 2026ರ ತಮಿಳುನಾಡು ಚುನಾವಣೆಯಲ್ಲಿ ಸ್ರ‍್ಧಿಸಲಿದೆ. ನಟ ವಿಜಯ್ ಅವರು ಅವರನ್ನು ತಮ್ಮ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿದ್ದಾರೆ. ಮಾರು 200 ಸದಸ್ಯರು ಪಾಲ್ಗೊಂಡಿದ್ದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನಟ ವಿಜಯ್ ತಮಿಳುನಾಡು ಮತ್ತು ಕೇರಳದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಮತ್ತು ಹಲವಾರು ಸರ‍್ವಜನಿಕ ಕಲ್ಯಾಣ […]

ಸುಮಲತಾರಿಂದ ಅಂತರ ಕಾಯ್ದುಕೊಂಡ್ರಾ ಆಪ್ತ ಸಚ್ಚಿದಾನಂದ?

ಮAಡ್ಯ:ಲೋಕಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸುಮಲತಾ ಅಂಬರೀಶ್ ಅವರಿಗೆ ಇದೀಗ ಆಪ್ತ ಸಚ್ಚಿದಾನಂದ ಅವರೇ ಶಾಕ್ ನೀಡಿದ್ರಾ ಎಂಬ ಪ್ರಶ್ನೆಯೊಂದು ಎದ್ದಿದೆ.ಮಂಡ್ಯದಲ್ಲಿ ಬಿಜೆಪಿ ಮುಖಂಡ ಡಾ.ಸಿದ್ದರಾಮಯ್ಯ ಬೆಂಬಲಿಗರ ಸಭೆ ನಡೆಯಿತು. ಡಾ.ಸಿದ್ದರಾಮಯ್ಯಗೆ ಬಿಜೆಪಿ ಟಿಕೆಟ್ ನೀಡುವಂತೆ ಒತ್ತಾಯಿಸಿ ನಡೆದ ಸಭೆಯಲ್ಲಿ ಬಿಜೆಪಿಯ ಹಲವು ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು. ಆದರೆ ಸಂಸದೆ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಅವರು ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಅಚ್ಚರಿ ಸೃಷ್ಟಿಸಿದರು. ಈ ಮೂಲಕ ಸುಮಲತಾ ಜೊತೆ ಸಚ್ಚಿದಾನಂದ ಅವರು ಅಂತರ […]

ಟಿಪ್ಪು ಭಾವಚಿತ್ರಕ್ಕೆ ಅಪಮಾನ ಪ್ರಕರಣ;ಇಬ್ಬರು ಕಾನ್ಸ್ಟೇಬಲ್‌ಗಳು ಅಮಾನತು

ರಾಯಚೂರು:ಜಿಲ್ಲೆಯ ಮಾನ್ವಿ ತಾಲೂಕಿನ ಸಿರವಾರದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಕರ್ತವ್ಯ ಲೋಪದಡಿ ಇಬ್ಬರು ಕಾನ್ಸ್ಟೇಬಲ್‌ಗಳನ್ನು ಅಮಾನತುಗಳಿಸಿ ರಾಯಚೂರು ಎಸ್‌ಪಿ ಬಿ.ನಿಖಿಲ್ ಆದೇಶಿಸಿದ್ದಾರೆ. ಸಿರವಾರ ಠಾಣೆಯ ಕಾನ್ಸ್ಟೇಬಲ್‌ಗಳಾದ ಇಸ್ಮಾಯಿಲ್ ಹಾಗೂ ರೇವಣಸಿದ್ದ ಅವರು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಕರ್ತವ್ಯಲೋಪ ಹಿನ್ನಲೆ ಅಮಾನತು ಮಾಡಲಾಗಿದೆ.ಏನಿದು ಘಟನೆಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್‌ನಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ರಾತ್ರೋರಾತ್ರಿ ಕೆಲ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದರು. ಇದನ್ನು […]

ತಮಿಳುನಾಡು ಸಿಎಂ ಆಗಿ ಅಣ್ಣಾಮಲೈಪ್ರಮಾಣವಚನ ಸ್ವೀಕರಿಸ್ತಾರೆ: ವಿನಯ್ ಗುರೂಜಿ

ಚಿಕ್ಕಮಗಳೂರು:ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಣ್ಣಾಮಲೈ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ ಎಂದು ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ.ಚಿಕ್ಕಮಗಳೂರು ಕಾರಗೃಹದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣ್ಣಾಮಲೈ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವುದನ್ನು ನಾನು ನೋಡ್ತೀನಿ, ನೀವು ನೋಡ್ತೀರಾ. ಅಣ್ಣಾಮಲೈ ಎಸ್‌ಪಿ ಆಗಿದ್ದಾಗ ಬಂದಾಗಲೇ ೨ ಸೇಬು ಕೊಟ್ಟು ಹೇಳಿದ್ದೆ. ಖಾಕಿಯಿಂದ ಖಾದಿ ಉಡ್ತಾರೆ ಎಂದು ಹೇಳಿದ್ದೆ. ಅದು ನಿಜವಾಗುತ್ತದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ.ಮೊನ್ನೆಯಷ್ಟೆ ಅಯೋಧ್ಯೆಯಲ್ಲಿ ರಾಮನ ಪಟ್ಟಾಭಿಷೇಕ ಮುಗಿದಿದೆ. ಸದ್ಯದಲ್ಲೇ ಮೋದಿಯ ಪಟ್ಟಾಭಿಷೇಕವನ್ನೂ ಎಲ್ಲರೂ ನೋಡ್ತೀವಿ […]

ಕಲ್ಲು ಹೊಡೆದುಕೊಂಡು ಇದ್ದೋರನ್ನ ಲೋಕಸಭೆಗೆ ಕಳುಹಿಸಿದ್ರೆ ಇನ್ನೇನಾಗುತ್ತೆ

ರಾಮನಗರ:ಕಲ್ಲು ಹೊಡೆದುಕೊಂಡು ಇದ್ದವರನ್ನ ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತೆ ಎಂದು ಸಂಸದ ಡಿ.ಕೆ.ಸುರೇಶ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.ಪ್ರತ್ಯೇಕ ರಾಷ್ಟ್ರದ ಬಗ್ಗೆ ಡಿ.ಕೆ.ಸುರೇಶ್ ಹೇಳಿಕೆ ವಿಚಾರ ಕುರಿತು ಬಿಡದಿಯಲ್ಲಿ ಸುದ್ದಿಗಾರೊಂದಿಗೆ ಪ್ರತಿಕ್ರಿಯಿಸಿದ ಅವರು, ನಿನ್ನೆಯ ದಿನ ಡಿ.ಕೆ.ಸುರೇಶ್ ದೇಶ ವಿಭಜನೆ ಬಗ್ಗೆ ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಆರ್ಥಿಕ ತಾರತಮ್ಯ, ಕರ್ನಾಟಕಕ್ಕೆ ಅನ್ಯಾಯ ಎಂಬ ಕಾರಣ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೊ ನ್ಯಾಯ ಯಾತ್ರೆ ಮಾಡಿದರು. ಈಗ ವಿಭಜನೆ ಬಗ್ಗೆ ಮಾತನಾಡುತ್ತಿದ್ದಾರೆ. ಒಂದು […]

ಪೂನಂ ಪಾಂಡೆ ನಿಧನ; ಜೈ ಶ್ರೀರಾಮ್​ ಎಂದು ಭಕ್ತಿ ಮೆರೆದಿದ್ದ ನಟಿ ಈಗ ನೆನಪು ಮಾತ್ರ

ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದ್ದ ಪೂನಂ ಪಾಂಡೆ  ಅವರು ಈಗ ನೆನಪು ಮಾತ್ರ. 32ನೇ ವಯಸ್ಸಿಗೆ ಅವರು ಕ್ಯಾನ್ಸರ್​ನಿಂದ ನಿಧನರಾಗಿದ್ದಾರೆ. ಶುಕ್ರವಾರ (ಫೆಬ್ರವರಿ 2) ಬೆಳಗ್ಗೆಯೇ ಅವರ ಅಭಿಮಾನಿಗಳಿಗೆ ನೋವಿನ ಸುದ್ದಿ ಕೇಳಿಬಂದಿದೆ. ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದ ಪೂನಂ ಪಾಂಡೆ ಅವರು ಕೊನೆಯುಸಿರು ಎಳೆದಿದ್ದಾರೆ. ಅವರ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಯಾವಾಗಲೂ ಗ್ಲಾಮರಸ್​ ಆಗಿ ಕಾಣಿಸಿಕೊಳ್ಳುತ್ತಿದ್ದ ಪೂನಂ ಪಾಂಡೆ ಅವರು ರಾಮನ ಭಕ್ತೆ ಕೂಡ ಆಗಿದ್ದರು ಎಂಬುದು ವಿಶೇಷ. ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಆಗಿದ್ದನ್ನು ಅವರು ಸಂಭ್ರಮಿಸಿದ್ದರು. […]

ಸಂಸತ್ತಿನಲ್ಲಿ ಸದ್ದು ಮಾಡಿದ ಡಿಕೆ ಸುರೇಶ್ ʼಪ್ರತ್ಯೇಕ ರಾಷ್ಟ್ರʼ ಹೇಳಿಕೆ

ನವದೆಹಲಿ:ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರ ʼಪ್ರತ್ಯೇಕ ರಾಷ್ಟ್ರ ಹೇಳಿಕೆʼಯು ಇಂದು ರಾಜ್ಯಸಭೆ ತೀವ್ರ ಗದ್ದಲವೆಬ್ಬಿಸಿತು. ಈ ಸಂಬAಧ ಕಾಂಗ್ರೆಸ್ ದೇಶದ ಜನರ ಕ್ಷಮೆ ಕೇಳುವಂತೆ ಆಗ್ರಹಿಸಲಾಗಿದೆ.ಹೌದು. ಸುರೇಶ್ ಹೇಳಿಕೆ ಬಗ್ಗೆ ಸಭಾನಾಯಕ ಪಿಯೂಶ್ ಗೋಯಲ್ ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದರು. ಜೊತೆಗೆ ಕಾಂಗ್ರೆಸ್ ಪಕ್ಷ ಈ ಬಗ್ಗೆ ಕ್ಷಮೆ ಕೇಳಬೇಕು. ವಿರೋಧ ಪಕ್ಷದ ನಾಯಕರು, ಅದೇ ಪಕ್ಷದ ನಾಯಕರು ಸುರೇಶ್ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿಲ್ಲ. ಕರ್ನಾಟಕದ ಡಿಸಿಎಂ ಸಹೋದರ ಹಾಗೂ ಸಂಸದರಾಗಿರುವ ಸುರೇಶ್ ಅವರು ದೇಶ […]

ಎಚ್‌ಡಿಕೆ ಭೇಟಿ ಬೆನ್ನಲ್ಲೇ ತುಮಕೂರಿನಲ್ಲಿ ಸೋಮಣ್ಣ ಫುಲ್ ಆಕ್ಟೀವ್!

ತುಮಕೂರು:ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಚುನಾವಣೆಗೆ ಸಂಬAಧಿಸಿದAತೆ ರಾಜಕಾರಣಿಗಳು ಕಾರ್ಯತಂತ್ರ ರೂಪಿಸಲು ಶುರು ಮಾಡಿದ್ದು, ಈಗಾಗಲೇ ಆಯಾಯ ಕ್ಷೇತ್ರಗಳಿಗೆ ಸಂಬAಧಪಟ್ಟ ರಾಜಕಾರಣಿಗಳು ತಮ್ಮ ನೆಚ್ಚಿನ ಪಕ್ಷದಿಂದ ಟಿಕೆಟ್ ಗಿಟ್ಟಿಸಲು ಪ್ಲಾನ್ ಮಾಡುತ್ತಿದ್ದಾರೆ.ಈ ಮಧ್ಯೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡೆರಡು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸಿ ಸೋಲನುಭವಿಸಿದ್ದ ಮಾಜಿ ಸಚಿವ ವಿ ಸೋಮಣ್ಣ ಅವರು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಲು ಪ್ಲಾನ್ ಮಾಡಿದ್ದು, ಲೋಕಸಭೆಯಲ್ಲಿ ತಮ್ಮ ಅದೃಷ್ಠ ಪರೀಕ್ಷೆ ಮಾಡಲು ಇನ್ನಿಲ್ಲದ ಶ್ರಮ ಹಾಕುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಕಳೆದ ವಾರ ಮಾಜಿ […]