ರಾಜ್ಯದ ಬಿಜೆಪಿ ಉಸ್ತುವಾರಿಗಳಾಗಿ ಇಬ್ಬರ ನೇಮಕ
ನವದೆಹಲಿ:ಲೋಕಸಭಾ ಚುನಾವಣೆಗೆ ತಯಾರಿಗಳು ಭರದಿಂದ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಇದೀಗ ರಾಜ್ಯವಾರು ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.ಈ ಸಂಬAಧ ಬಿಜೆಪಿ ಹೈಕಮಾಂಡ್ ರಾಜ್ಯಾವಾರು ಸ್ತುವಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ ಡಾ.ರಾಧ ಮೋಹನ್ ದಾಸ್ ಅಗ್ರವಾಲ್ ಮತ್ತು ಸುಧಾಕರ್ ರೆಡ್ಡಿ ಅವರನ್ನ ಉಸ್ತುವಾರಿಗಳಾಗಿ ನೇಮಕ ಮಾಡಿದೆ.ಕೇರಳಕ್ಕೆ ಪ್ರಕಾಶ್ ಜಾವ್ಡೇಕರ್, ಪುದುಚೇರಿಗೆ ನಿರ್ಮಲ್ ಕುಮಾರ್ ಸುರಾನ ಚುನಾವಣಾ ಉಸ್ತುವಾರಿಯಾಗಿ ಬಿಜೆಪಿ ಹೈಕಮಾಂಡ್ ನೇಮಿಸಿದೆ.







































































































































































































































































































































































































































































































































































































































































































































































































































































































































































































































































































































