September 14, 2026

ನಮ್ಮ ಗ್ಯಾರಂಟಿಗಳನ್ನು ನೋಡಿಕೊಂಡು ಬಿಜೆಪಿಮೋದಿ ಗ್ಯಾರಂಟಿ ಅಂತಾರೆ

ಬೆಂಗಳೂರುಬಿಜೆಪಿ ಅವರು ನಮ್ಮ ಸರ್ಕಾರದ ಗ್ಯಾರಂಟಿಗಳನ್ನು ಮೊದಲು ಟೀಕೆ ಮಾಡಿ ಈಗ ನಮ್ಮ ಗ್ಯಾರಂಟಿ ನೋಡಿಕೊಂಡು ಮೋದಿ ಗ್ಯಾರಂಟಿ, ಮೋದಿ ಗ್ಯಾರಂಟಿ ಎಂದು ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ ನಲ್ಲಿ ನಡೆದ 100 ಅಶ್ವಮೇಧ ಕ್ಲಾಸಿಕ್ ಬಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.ನಾವು ಚುನಾವಣೆ ಪೂರ್ವದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ್ದೆವು. ಜೂನ್ 11ಕ್ಕೆ ಇದೇ ಜಾಗದಲ್ಲಿ ಉಚಿತ […]

ನಿಗಮ-ಮಂಡಳಿ ನಿರೀಕ್ಷೆಯಲ್ಲಿದ್ದ ಕಾರ್ಯಕರ್ತರಿಗೆ ಈಗ ಡವಡವ

ಬೆಂಗಳೂರು:ತೀವ್ರ ಒತ್ತಡದ ಹಿನ್ನೆಲೆಯಲ್ಲಿ ೩೪ ಮಂದಿ ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವ ರಾಜ್ಯ ಸರ್ಕಾರವು ಕಾರ್ಯಕರ್ತರಿಗೆ ನಿಗಮ-ಮಂಡಳಿ ಹುದ್ದೆ ಹಂಚುವ ಪ್ರಕ್ರಿಯೆಗೆ ವೇಗ ನೀಡುತ್ತಿಲ್ಲ. ಕಳೆದ 8-10 ದಿನಗಳಿಂದ ನೇಮಕ ಪ್ರಕ್ರಿಯೆ ಬಗ್ಗೆ ಸುಳಿವೇ ಇಲ್ಲದಿರುವುದರಿಂದ ಆಕಾಂಕ್ಷಿ ಕಾರ್ಯಕರ್ತರಲ್ಲಿ ತೀವ್ರ ಆತಂಕ ಮನೆ ಮಾಡಿದೆ.ಶಾಸಕರಿಗೆ ಜ.26 ರಂದೇ ನಿಗಮ-ಮಂಡಳಿ ಹಂಚಿಕೆಯಾಗಿದೆ. ಕಾರ್ಯಕರ್ತರ ಪೈಕಿ 34 ಮಂದಿ ಕಾರ್ಯಕರ್ತರ ಪಟ್ಟಿ ಸಿದ್ಧವಾಗಿದ್ದರೂ ನಿಗಮ-ಮಂಡಳಿ ಹಂಚಿಕೆಯಾಗಿಲ್ಲ. ಈ ಬಗ್ಗೆ ಒಂದೆರಡು ಸಭೆ ನಡೆಯಿತಾದರೂ ಕಳೆದ 8-10 ದಿನಗಳಿಂದ ಈ […]

ಮುನಿಸು ಮರೆತ ವಿಜಯೇಂದ್ರ, ಅರುಣ್ ಸೋಮಣ್ಣ

ಬೆಂಗಳೂರು:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಮುನಿಸು ಮರೆತು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ತಂದೆಗೆ ಪಕ್ಷದಲ್ಲಿ ಗೌರವ ಸಿಗುತ್ತಿದ್ದಂತೆ ಅರುಣ್ ಸೋಮಣ್ಣ, ವಿಜಯೇಂದ್ರ ಜೊತೆ ವೇದಿಕೆ ಹಂಚಿಕೊAಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ವಿಜಯೇಂದ್ರ ಜೊತೆ ಅರುಣ್ ಸೋಮಣ್ಣ ಭಾಗಿಯಾಗಿದ್ದರು. ಈ ಹಿಂದೆ ವಿಜಯೇಂದ್ರರಿAದ ಕಡೆಗಣನೆ ಎಂದು ಅರುಣ್ ಸೋಮಣ್ಣ ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ವಿಜಯೇಂದ್ರ ವಿರುದ್ಧ ಮಾಜಿ ಸಚಿವ ವಿ.ಸೋಮಣ್ಣ ಆಕ್ರೋಶಗೊಂಡಿದ್ದರು.ಇದೀಗ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಬಗ್ಗೆ […]

ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ

ನವದೆಹಲಿ:ಮಥುರಾದಲ್ಲಿ ಕೃಷ್ಣ ದೇವಸ್ಥಾನವನ್ನು ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮಾಹಿತಿ ನೀಡಿದೆ.ಪ್ರಶ್ನೆ ಏನಿತ್ತು?1670ರಲ್ಲಿ ಕೇಶವದೇವ ದೇವಸ್ಥಾನವನ್ನು ಕೆಡವಿ ಶಾಹಿ ಈದ್ಗಾ ನಿರ್ಮಾಣವಾದ ಬಗ್ಗೆ 1920ರ ನವೆಂಬರ್‌ನಲ್ಲಿ ಬ್ರಿಟಿಷರು ನಡೆಸಿದ ಸರ್ವೆ ಮಾಹಿತಿ ನೀಡುವಂತೆ ಪ್ರಶ್ನೆ ಕೇಳಲಾಗಿತ್ತು.ಎಎಸ್‌ಐ ಉತ್ತರ ಏನಿತ್ತು?1920 ರಲ್ಲಿ ಅಲಹಾಬಾದ್‌ನಿಂದ ಬ್ರಿಟಿಷರು ಪ್ರಕಟಿಸಿದ ಗೆಜೆಟ್‌ನಲ್ಲಿ (ರಾಜ್ಯಪತ್ರ) ಲೋಕೋಪಯೋಗಿ ಇಲಾಖೆಯು ಉತ್ತರ ಪ್ರದೇಶದ ವಿವಿಧೆಡೆ 39 ಸ್ಮಾರಕಗಳ ಪಟ್ಟಿಯನ್ನು ನೀಡಿದೆ. ಈ ಪಟ್ಟಿಯಲ್ಲಿ ಕತ್ರಾ ಕೇಶವ ದೇವ್ ಭೂಮಿಯಲ್ಲಿರುವ ಶ್ರೀ […]

ಕಲಬುರಗಿ ಗೆಲ್ಲಲು ಕಾಂಗ್ರೆಸ್, ಬಿಜೆಪಿ ಕಸರತ್ತು,ನಿತಿನ್ ಗುತ್ತೆದಾರ್ ಸೆಳೆಯಲು ‘ಕೈ’ ತಂತ್ರ

ಕಲಬುರಗಿ:ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಕಾಂಗ್ರೆಸ್, ಬಿಜೆಪಿ ತಂತ್ರಗಾರಿಕೆ ಚುರುಕುಗೊಳಿಸಿವೆ. ಪ್ರಭಾವಿ ನಾಯಕರನ್ನು ಪಕ್ಷಕ್ಕೆ ಸೆಳೆಯುವ ಕಸರತ್ತುಗಳನ್ನೂ ಆರಂಭಿಸಿವೆ. ಕಲಬುರಗಿ ಲೋಕಸಭಾ ಕ್ಷೇತ್ರ ಗೆಲ್ಲಲು ಕೈ, ಕಮಲ ಪಕ್ಷಗಳು ಭಾರಿ ಕಸರತ್ತು ನಡೆಸುತ್ತಿದ್ದು, ನಿತಿನ್ ಗುತ್ತೇದಾರ್ ಬೆನ್ನುಬಿದ್ದಿವೆ. ನಿತಿನ್‌ರನ್ನು ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್, ಬಿಜೆಪಿ ನಾಯಕರು ಕಸರತ್ತು ಆರಂಭಿಸಿದ್ದಾರೆ.ಈ ಬೆಳವಣಿಗೆಗಳ ಮಧ್ಯೆ ನಿತಿನ್ ಗುತ್ತೇದಾರ್ ಅವರನ್ನು ಕಾಂಗ್ರೆಸ್ ನಾಯಕ ರೇವು ನಾಯಕ್ ಬೆಳಮಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಿತಿನ್ ಗುತ್ತೇದಾರ್ ಮನೆಗೆ ಭೇಟಿ ನೀಡಿ ತಾಸುಗಟ್ಟಲೆ ರಹಸ್ಯ ಮಾತುಕತೆ […]

ಕೇಂದ್ರದಿಂದ ರಾಜ್ಯಕ್ಕೆ ನೀಡಿದ 20 ವರ್ಷದ ಅನುದಾನದ ಬಗ್ಗೆ ಶ್ವೇತಪತ್ರ ಹೊರಡಿಸಲಿ: ಆರ್.ಅಶೋಕ್

ಬೆಂಗಳೂರು: ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ಕಾಂಗ್ರೆಸ್ ನಾಯಕರು ದೆಹಲಿ ಚಲೋಗೆ ಮುಂದಾಗಿದ್ದಾರೆ. ಹಾಗಾದರೆ ಕಳೆದ 20 ವರ್ಷದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಂದ ಅನುದಾನದ ಬಗ್ಗೆ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, 2004ರಿಂದ 2014ರವರೆಗೆ ಕರ್ನಾಟಕಕ್ಕೆ ಎಷ್ಟು ಹಣ ಬಂದಿದೆ. ಯುಪಿಎ ಸರ್ಕಾರದಲ್ಲಿ ಎಷ್ಟು ಹಣ ಬಂದಿದೆ ಎಂಬುದನ್ನು ಶ್ವೇತಪತ್ರ ಹೊರಡಿಸಿ. ಈಗ ಮೋದಿ ಅವರ ಅವಧಿಯಲ್ಲಿ 2014ರಿಂದ 2024 ರವರೆಗೆ ಎಷ್ಟು […]

ಪೂನಂ ಅರೆಸ್ಟ್ ಮಾಡಿ: ‘ಬಾಯ್ಕಟ್ ಪಾಂಡೆ’ ಟ್ರೆಂಡ್ ಶುರು

ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ ಪೂನಂ ಪಾಂಡೆಯನ್ನು ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.  ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಟ್ ಪೂನಂ ಪಾಂಡೆ’ ಟ್ರೆಂಡ್ ಶುರು ಮಾಡಿದ್ದಾರೆ. ಗರ್ಭಕಂಠದ ಕ್ಯಾನ್ಸರ್ ನಿಂದಾಗಿ ಪೂನಂ ಪಾಂಡೆ ನಿಧನರಾಗಿದ್ದಾರೆ ಎಂದು ಈ ನಟಿಯ ಮ್ಯಾನೇಜರ್ ನಿನ್ನೆಯಷ್ಟೇ ಪೂನಂ ಅವರ ಅಧಿಕೃತ ಇನ್ಸ್ಟಾ ಪೇಜ್‍ ನಲ್ಲಿ ಹಾಕಲಾಗಿತ್ತು. ಈ ಸುದ್ದಿ ಓದಿ  ಅನೇಕರು ಶಾಕ್ ಆಗಿದ್ದರು. ಅದರಲ್ಲೂ ಈ […]

ಹಿಂದೆಯೇ ಅಡ್ವಾಣಿಗೆ ಭಾರತ ರತ್ನ ಕೊಡಬೇಕಿತ್ತು

ಬೆಳಗಾವಿ:ಲಾಲ್ ಕೃಷ್ಣ ಅಡ್ವಾಣಿ ಅವರು ಭಾರತ ರತ್ನ ಗೌರವಕ್ಕೆ ಭಾಜನರಾಗಿರುವದಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಂತಸ ವ್ಯಕ್ತಪಡಿಸಿದ್ದಾರೆ.ಹುಕ್ಕೇರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ ಅವರು ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿದರೆ ಒಳ್ಳೆಯದು. ಬಹಳ ದಿನಗಳ ಹಿಂದೆಯೇ ಅವರಿಗೆ ಭಾರತ ರತ್ನ ಕೊಡಬೇಕಿತ್ತು. ಭಾರತ ರತ್ನಕ್ಕೆ ಅವರು ಅರ್ಹರಿದ್ದಾರೆ. ಅವರೊಬ್ಬರು ಒಳ್ಳೆಯ ರಾಜಕಾರಣಿ ಎಂದು ಅಡ್ವಾಣಿ ಅವರನ್ನು ಹಾಡಿ ಹೊಗಳಿದರು.ಕನಕ ಪೀಠದ ಸ್ವಾಮೀಜಿಗಳಿಗೆ ದೇವಸ್ಥಾನ ಗರ್ಭಗುಡಿ ಪ್ರವೇಶಕ್ಕೆ ನಿರ್ಬಂಧ ವಿಚಾರಕ್ಕೆ ಪ್ರತಿಕ್ರಿಯಿಸಿದ […]

ಅಕ್ರಮ ಚಟುವಟಿಕೆ ತಾಣವಾದ ಕೋಟಿ ವೆಚ್ಚದ ಕಟ್ಟಡ

ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನ ಪುಲಕೇಶಿನಗರದ ಕಾಕ್ಸ್ ಟೌನ್ ಸರ್ಕಲ್ ಬಳಿ ಬಿಬಿಎಂಪಿ ನಿರ್ಮಿಸುತ್ತಿರೋ ಸಮುದಾಯ ಭವನದ ದುಸ್ಥಿತಿ ಹೇಳತೀರದ್ದು. ಅರೆಬರೆ ಕಾಮಗಾರಿಯ ಮಧ್ಯೆ ಅಲ್ಲಲ್ಲಿ ಬಟ್ಟೆಗಳು ನೇತಾಡ್ತಿವೆ. ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಆಲ್ಕೋಹಾಲ್ ಬಾಟಲ್ ಗಳು ಬಿದ್ದಿವೆ. ಪಾಳು ಕಟ್ಟಡ ಎಂಬAತಿದೆ ಬಿಬಿಎಂಪಿ ಸಮುದಾಯ ಭವನ.ಕಳೆದ ಎರಡು ವರ್ಷಗಳ ಹಿಂದೆ ಇದೇ ಜಾಗದಲ್ಲಿದ್ದ ಹಳೇ ಸಮುದಾಯ ಭವನ ಬೀಳಿಸಿ ಸುಮಾರು ೨೦೦ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಬಿಬಿಎಂಪಿ ಮುಂದಾಗಿತ್ತು, ಆದ್ರೆ ಶೇಕಡ ೫೦ ರಷ್ಟು ಕಾಮಗಾರಿ ಮಾತ್ರ […]

ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗೆ ‘ಭಾರತ ರತ್ನ’ ಯಾಕಿಲ್ಲ

ದಾವಣಗೆರೆ:ಎಲ್.ಕೆ.ಅಡ್ವಾಣಿ ಅವರಿಗೆ ‘ಭಾರತ ರತ್ನ’ ಕೊಡಲಿ ಬಿಡಿ, ಪಾಪ ಬೇಡ ಎಂದವರು ಯಾರು? ನಾವು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಿ ಎಂದು ಪತ್ರ ಬರೆದಿದ್ದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.ದಾವಣಗೆರೆಯಲ್ಲಿ ನಡೆಯುತ್ತಿರುವ ೩೮ನೇ ಪತ್ರಕರ್ತರ ಸಮ್ಮೇಳನದಲ್ಲಿ ಸಿಎಂ ಭಾಗಿಯಾಗಿದ್ದಾರೆ. ಇದಕ್ಕೂ ಮುನ್ನ, ಈಶ್ವರಾನಂದಪುರಿ ಸ್ವಾಮೀಜಿಗೆ ಗರ್ಭಗುಡಿ ಪ್ರವೇಶ ನಿಷೇಧ ಕುರಿತು ಮಾತನಾಡಿದ ಅವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ನನಗೆ ಗೊತ್ತಿಲ್ಲದಿರುವುದನ್ನ ಹೇಗೆ ಹೇಳಲಿ ಎಂದು ಪ್ರಶ್ನಿಸಿದರು.ನಗರೋತ್ಥಾನದಲ್ಲಿ ಅವ್ಯವಹಾರ ಆಗಿರುವ […]