ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಟ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ನಡೆಯುತ್ತಲೇ ಇದ್ದು, 20 ದಿನಗಳ ಅಂತರದಲ್ಲಿ ಮೂರನೇ ಪ್ರಕರಣ ನಡೆದಿದೆ. ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಬೆಂಗಳೂರು ಮೂಲದ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದರು. ಇದನ್ನು ಗಮನಿಸಿ ಜೋಡಿಯನ್ನು ತಡೆದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು, ಪೊಲೀಸರು ಜೋಡಿಯನ್ನು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ದಕ್ಷಿಣ ಕನ್ನಡ […]







































































































































































































































































































































































































































































































































































































































































































































































































































































































































































































































































































































