ಜೀವನದಲ್ಲಿ ಮೊದಲ ಬಾರಿಗೆ ಭಾವುಕನಾಗಿದ್ದೇನೆ – 11 ದಿನಗಳ ವ್ರತ ಆರಂಭಿಸಿದ ಮೋದಿ
ನವದೆಹಲಿ: ಜನವರಿ 22ರಂದು ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರದಲ್ಲಿ ಭಾಗಿಯಾಗಲಿರುವ ಮೋದಿ ಇಂದಿನಿಂದ 11 ದಿನಗಳ ವ್ರತ ಆರಂಭಿಸಿದ್ದಾರೆ. ಆಡಿಯೋ ಮೂಲಕ ದೇಶದ ಜನರಿಗೆ ಸಂದೇಶ ನೀಡಿದ ಮೋದಿ ಮೊದಲ ಬಾರಿಗೆ ನನ್ನ ಜೀವನದಲ್ಲಿ ಭಾವುಕನಾಗಿದ್ದೇನೆ ಎಂದು ಹೇಳಿದ್ದಾರೆ. ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆದ ರಾಮಮಂದಿರದ ಸಮಾರಂಭದಲ್ಲಿ, ಈ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ ಎಂದು ಪ್ರಧಾನಿ ಮೋದಿ ಹೇಳಿದರು. ನಾನು 11 ದಿನ ವಿಶೇಷ ವ್ರತ ಆರಂಭಿಸುತ್ತೇನೆ. ಪ್ರಭು ಶ್ರೀರಾಮನು ಕಾಲ ಕಳೆದ ಪಂಚವಟಿಯ […]







































































































































































































































































































































































































































































































































































































































































































































































































































































































































































































































































































































