ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ
ಬೆಂಗಳೂರು:ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪುನರುಚ್ಚರಿಸಿದ್ದಾರೆ.ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆಗೆ ನಾನು ಸ್ಪರ್ಧಿಸುವುದಿಲ್ಲ. ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿ ಸಹ ಅಲ್ಲ. ನನ್ನ ಅಭಿಪ್ರಾಯ ಈಗಾಗಲೇ ಸ್ಪಷ್ಟವಾಗಿ ಸಾಕಷ್ಟು ಬಾರಿ ಹೇಳಿದ್ದೇನೆ. ಹೇಳಿಕೆಯನ್ನು ಬದಲಾಯಿಸುವ ವ್ಯಕ್ತಿ ನಾನಲ್ಲ ಎಂದಿದ್ದಾರೆ.ಮಂಡ್ಯ ಜಿಲ್ಲೆಯಿಂದಲೂ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ ಅಲ್ಲ. ಈ ವಿಚಾರವಾಗಿ ಗುರುವಾರ ಮಂಡ್ಯ ಜಿಲ್ಲೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ನಮ್ಮ ನಾಯಕರು, […]







































































































































































































































































































































































































































































































































































































































































































































































































































































































































































































































































































































