ಫೆ.29 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ
ಬೆಂಗಳೂರು:ಮುಖ್ಯಮAತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಜರುಗಿದ ಸಂಘಟನಾ ಸಮಿತಿ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಈ ವಿಷಯ ತಿಳಿಸಿದರು.ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯನ್ನು ಫೆಬ್ರವರಿ 29ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಏರ್ಪಡಿಸಲಾಗಿದೆ ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ […]







































































































































































































































































































































































































































































































































































































































































































































































































































































































































































































































































































































