ಕರಸೇವಕರ ಅರೆಸ್ಟ್ ಮಾಡಿದ್ದ ಇನ್ಸ್ಪೆಕ್ಟರ್‌ಗೆ ಕಡ್ಡಾಯ ರಜೆ
ಹುಬ್ಬಳ್ಳಿ:ಕರಸೇವಕರ ಬಂಧನ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ಸರ್ಕಾರ ಈಗ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದ ಶಹರ ಠಾಣೆಯ ಇನ್ಸ್ಪೆಕ್ಟರ್ ಅವರನ್ನು ಕಡ್ಡಾಯ ರಜೆಯ ಮೇಲೆ ಸರ್ಕಾರ ಕಳುಹಿಸಿದೆ.ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದ ಮಹಮದ್ ರಫೀಕ್ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಅವರ ಜಾಗಕ್ಕೆ ಪ್ರಭಾರಿ ಇನ್ಸ್ಪೆಕ್ಟರ್ ಆಗಿ ಬಿಎ ಜಾಧವ್ ಅವರನ್ನು ನೇಮಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಬಿಎ ಜಾಧವ್‌ಗೆ ಪ್ರಭಾರಿ ಠಾಣಾಧಿಕಾರಿಯಾಗಿ […]







































































































































































































































































































































































































































































































































































































































































































































































































































































































































































































































































































































