ಅಕ್ರಮ ಹಣ ವರ್ಗಾವಣೆ ಆರೋಪಇಡಿ ಮೂರನೇ ಸಮನ್ಸ್ಗೂ ಜಗ್ಗದ ಕೇಜ್ರಿವಾಲ್
ನವದೆಹಲಿ:ದೆಹಲಿಯ ಹೊಸ ಮದ್ಯ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬAಧಿಸಿದAತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಜಾರಿ ನಿರ್ದೇಶನಾಲಯ ಮೂರನೇ ಬಾರಿಗೆ ಸಮನ್ಸ್ ನೀಡಿದ್ದು, ಈ ಬಾರಿಯೂ ವಿಚಾರಣೆಗೆ ಹಾಜರಾಗಲು ಅವರು ನಿರಾಕರಿಸಿದ್ದಾರೆ.ಇಂದು ದೆಹಲಿಯ ಇಡಿ ಕಚೇರಿಗೆ ಆಗಮಿಸಿ ಹೇಳಿಕೆ ನೀಡುವಂತೆ ಕೋರಿ ಸಮನ್ಸ್ ಜಾರಿ ಮಾಡಿತ್ತು, ಆದರೆ ವಿಚಾರಣೆಗೆ ಆಗಮಿಸಲು ಸಾಧ್ಯವಾಗುವುದಿಲ್ಲ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ಇದೇ ವೇಳೆ ನಾನು ತನಿಖೆಗೆ ಸಹಕರಿಸಲು ಸಿದ್ಧನಿದ್ದೇನೆ. ಈ ಸಮನ್ಸ್ ಕಾನೂನುಬಾಹಿರ ಎಂದು ಅವರು […]







































































































































































































































































































































































































































































































































































































































































































































































































































































































































































































































































































































