September 13, 2026
#ಬೆಂಗಳೂರು

ಕರ್ನಾಟಕ ಆಧುನಿಕ ಉದ್ಯಮದ ತೊಟ್ಟಿಲು – ರಾಜ್ಯೋತ್ಸವಕ್ಕೆ ಶುಭಕೋರಿದ ಮೋದಿ, ಸಿಎಂ

ಬೆಂಗಳೂರು: ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಕನ್ನಡ ಸಾಧಕರ ಭಾವಚಿತ್ರಗಳನ್ನಿಟ್ಟು ಹಲವು ಕನ್ನಡ ಗೀತೆಗಳನ್ನು ಮೇಳೈಸುವ ಮೂಲಕ ಜನ ಸಂಭ್ರಮಿಸುತ್ತಿದ್ದಾರೆ. ಸಂಭ್ರಮವನ್ನು ಮತ್ತಷ್ಟು ಇಮ್ಮಡಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರೂ ಕನ್ನಡದಲ್ಲೇ ಶುಭ ಹಾರೈಸಿದ್ದಾರೆ.

https://imasdk.googleapis.com/js/core/bridge3.599.0_en.html#goog_1570076773

ಟ್ವಿಟ್ಟರ್‌ ಎಕ್ಸ್‌ ಖಾತೆಯಲ್ಲಿ ಶುಭ ಹಾರೈಸಿರುವ ಮೋದಿ ಅವರು, ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಹಾರೈಸಿದ್ದಾರೆ. 

ಕನ್ನಡ ಪ್ರತಿ ಮನೆಯ ಆಡು ಭಾಷೆಯಾಗಲಿ: ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರೂ ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ. 1973ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಟ್ವಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. 

ಹೆಚ್‌.ಡಿ ಕುಮಾರಸ್ವಾಮಿ: ನಾಡಿನ ಹಾಗೂ ಜಗತ್ತಿನೆಲ್ಲೆಡೆ ನೆಲೆಸಿರುವ ಸಮಸ್ತ ಕನ್ನಡ ಬಂಧುಗಳಿಗೆ 68ನೇ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಹಾಗೆಯೇ, ‘ಕರ್ನಾಟಕ’ವೆಂದು ಹೆಸರಾಗಿ ಇಂದಿಗೆ 50 ವರ್ಷ ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆಗಳನ್ನು ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸೋಣ. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಆಶಿಸುತ್ತೇನೆ. 

Leave a comment

Your email address will not be published. Required fields are marked *