September 13, 2026
#ಚಲನಚಿತ್ರ

ರಶ್ಮಿಕಾ ಡೀಪ್‌ಫೇಕ್ ವಿಡಿಯೋ: ಶಂಕಿತರ ವಿಚಾರಣೆ

ಶ್ಮಿಕಾ ಮಂದಣ್ಣ ಎರಡೆರಡು ಬಾರಿ ಡೀಪ್‌ಫೇಕ್ ಹಾವಳಿಗೆ ತುತ್ತಾಗಿದ್ದಾರೆ. ಡೀಪ್‌ಫೇಕ್  ಮಾಡಿರೋ ದುರುಳರನ್ನು ಹುಡುಕುವುದಕ್ಕಾಗಿ ಪೊಲೀಸ್ ಇಲಾಖೆ ಗಂಭೀರವಾಗಿ ಕಾರ್ಯಚರಣೆ ನಡೆಸಿತ್ತು. ಇದೀಗ ನಾಲ್ವರ ಶಂಕಿತರನ್ನು ಪೊಲೀಸರು ಠಾಣೆಗೆ ಕರೆಯಿಸಿಕೊಂಡಿದ್ದು, ಅವರನ್ನು ತೀವ್ರ ವಿಚಾರಣೆಗೆ ಗುರಿ ಪಡಿಸಲಾಗಿದೆ. ತಾವು ವಿಡಿಯೋ ಡೀಪ್‌ಫೇಕ್ ಮಾಡಿಲ್ಲ. ಕೇವಲ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದೆವು ಎಂದು ಹೇಳಿದ ಹಿನ್ನೆಲೆಯಲ್ಲಿ ಬಿಟ್ಟು ಕಳುಹಿಸಿದ್ದಾರೆ ಎನ್ನಲಾಗುತ್ತಿದೆ

https://imasdk.googleapis.com/js/core/bridge3.609.1_en.html#goog_1793284402

ಮೊನ್ನೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ತಿಂಗಳ ಹಿಂದೆಯಷ್ಟೇ ಇವರ ಡೀಪ್‌ಫೇಕ್ ವಿಡಿಯೋ ಸಾಕಷ್ಟು ಸದ್ದು ಮಾಡಿತ್ತು. ಸರಕಾರದ ಮಟ್ಟದಲ್ಲಿ ಚರ್ಚೆಗೂ ಕಾರಣವಾಗಿತ್ತು. ಆದರೂ, ಅದನ್ನು ತಡೆಯಲು ಸಾಧ್ಯವಾಗಿಲ್ಲ ಎನ್ನುವುದಕ್ಕೆ ಹರಿಬಿಟ್ಟ ಮತ್ತೊಂದು ವಿಡಿಯೋ ಸಾಕ್ಷಿಯಾಗಿತ್ತು.

ತಿಂಗಳ ಹಿಂದೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ರಶ್ಮಿಕಾ ಪರ ಅನೇಕರು ಮಾತನಾಡಿದ್ದರು. ದುರುಳರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಕೇಂದ್ರ ಸರಕಾರ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಹೇಳಿತ್ತು. ಆದರೂ, ಡೀಪ್‌ಫೇಕ್ ಕಾಟ ಮುಂದುವರೆದಿತ್ತು.

ಡೀಪ್‌ನೆಕ್ ಬ್ಲಾಕ್ ಡ್ರೆಸ್‌ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ಥೇಟ್ ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಸೃಷ್ಟಿಸಿದ್ದರು. ವಿಡಿಯೋದಲ್ಲಿರುವುದು ರಶ್ಮಿಕಾ ಅಲ್ಲ, ಜರಾ ಪಟೇಲ್ ಎನ್ನುವುದು ಗೊತ್ತಾಗಿತ್ತು. ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹಾಗಾಗಿ ಪೊಲೀಸರು ಕಿಡಿಗೇಡಿಗಳ ಬೆನ್ನು ಬಿದ್ದಿದ್ದರು.

ಸೂಪರ್ ಸ್ಟಾರ್, ನಟ ಅಮಿತಾಬ್ ಕೂಡ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು. ಈ ಬೆನ್ನಲ್ಲೇ ಈ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿತ್ತು. ಇದೊಂದು ಅತ್ಯಂತ ಅಪಾಯಕಾರಿ ಕೃತ್ಯ. ಇಂತಹ ಮಾರ್ಫಿಂಗ್ ವಿಡಿಯೋಗಳ ನಿಯಂತ್ರಣ ಸಾಮಾಜಿಕ ಜಾಲತಾಣಗಳ ಹೊಣೆ. ಅಪ್‌ಲೋಡ್ ಆದ 36 ಗಂಟೆಗಳಲ್ಲಿ ಇವುಗಳನ್ನು ತೊಲಗಿಸದಿದ್ದರೆ ಅಂತಹ ಸಾಮಾಜಿಕ ಜಾಲತಾಣವನ್ನು ಕೋರ್ಟ್‌ಗೆ ಎಳೆಯಬಹುದು ಎಂದು ಸ್ಪಷ್ಟಪಡಿಸಿತ್ತು.

Leave a comment

Your email address will not be published. Required fields are marked *