ಅತಿಥಿ ಉಪನ್ಯಾಸಕರಿಗೆ ೫ ಸಾವಿರ ವೇತನ ಹೆಚ್ಚಳ
ಬೆಂಗಳೂರು:
ಕಳೆದ ಒಂದು ತಿಂಗಳಿAದಲೂ ಮುಷ್ಕರ ನಡೆಸುತ್ತಿರುವ ರಾಜ್ಯ ಅತಿಥಿ ಉಪನ್ಯಾಸಕರಿಗೆ ೫ ಸಾವಿರ ವೇತನ ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಹೊಸ ವರ್ಷದ ಗಿಫ್ಟ್ ಕೊಟ್ಟಿದೆ. ಶುಕ್ರವಾರ ವಿಕಾಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅತಿಥಿ ಉಪನ್ಯಾಸಕರ ವೇತನ ೫ ಸಾವಿರ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಒಪ್ಪಿಗೆ ನೀಡಿದ್ದಾರೆ. ಹೆಚ್ಚು ಹೆಚ್ಚು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಅತಿಥಿ ಉಪನ್ಯಾಸಕರ ಬೇಡಿಕೆಯಲ್ಲಿ ಸೇವೆ ಕಾಯಂ ಬಹುಮುಖ್ಯ ಬೇಡಿಕೆಯಾಗಿದೆ. ಆ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸುತ್ತಿದ್ದಾರೆ. ಇದರ ನಡುವೆ ಅತಿಥಿ ಉಪನ್ಯಾಸಕರಿಗೆ ವೇತನ ಸಹಿತ ತಿಂಗಳಿಗೆ ಒಂದು ರಜೆ ನೀಡಲಾಗುವುದು. ಅವರನ್ನು ಗೌರವದಿಂದ ನಡೆಸಿಕೊಳ್ಳಲಾಗುತ್ತದೆ. ೬೦ ವರ್ಷ ಪೂರೈಸಿದಂತಹ ಅತಿಥಿ ಉಪನ್ಯಾಸಕರಿಗೆ ಕೆಲಸ ಬಿಡುವಾಗ ೫ ಲಕ್ಷ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಆರೋಗ್ಯ ವಿಮಾ ಯೋಜನೆ ಕೂಡ ಜಾರಿಗೊಳಿಸಲಾಗುತ್ತಿದೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಸಂದರ್ಭದಲ್ಲಿ ೫ ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದಂತಹ ಅತಿಥಿ ಉಪನ್ಯಾಸಕರನ್ನು ಪರಿಗಣಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸೇವೆ ಕಾಯಂ, ನಿವೃತ್ತಿ ವೇತನದ ವ್ಯವಸ್ಥೆ, ಉದ್ಯೋಗ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ.









































































































































































































































































































































































































































































































































































































































































































































































































































































































































































































































































































































