October 28, 2026
#ಬೆಂಗಳೂರು

ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ

ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

https://imasdk.googleapis.com/js/core/bridge3.609.1_en.html#goog_1123644966

ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಣಿಗೆ ಕೊಟ್ಟಿದ್ದೇನೆ. ಇದು ನನ್ನ ವೈಯಕ್ತಿಕ ವಿಚಾರ. ಎಷ್ಟು ದೇಣಿಗೆ ನೀಡಿದ್ದೇನೆ ಎಂದು ಹೇಳಿಕೊಳ್ಳಬಾರದು ಎಂದರು. 

ಅಯೋಧ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಪ್ರತ್ಯೇಕ ದಿನ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದರೆ ಅದಕ್ಕೂ ಸಿದ್ಧ. ವಿಶೇಷ ಪೂಜೆ ಸಲ್ಲಿಸುತ್ತೇವೆ. ನಾವು ಹಿಂದುಗಳಲ್ವ? ನಮ್ಮ ಪಕ್ಷದಲ್ಲಿಯೂ ಹಿಂದುಗಳಿಲ್ಲವೇ? ಅದರಲ್ಲೇನು ತಪ್ಪಿದೆ ಎಂದಿದ್ದಾರೆ.

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದೆ ಎಂದು ಕೆಲ ದಿನಗಳ ಹಿಂದೆ ವರದಿಯಾಗಿತ್ತು. 

ಇತ್ತೀಚೆಗೆ ಕಾಂಗ್ರೆಸ್‌ ಹೈಕಮಾಂಡ್‌ ದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ತನ್ನ ರಾಜ್ಯ ಘಟಕದ ನಾಯಕರೊಂದಿಗೆ ಸಭೆ ನಡೆಸಿತು. ಸಭೆಯಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದ ಕಾಂಗ್ರೆಸ್ ನಾಯಕರು ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಹಾಜರಾಗುವ ಬಗ್ಗೆ ಹೈಕಮಾಂಡ್‌ನಿಂದ ಸ್ಪಷ್ಟನೆ ಕೇಳಿದರು. ಈ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ನಾಯಕರು ಭಾಗವಹಿಸಬಹುದಾಗಿ ತಿಳಿಸಿದೆ ಎಂದು ಹೇಳಲಾಗಿದೆ.

Leave a comment

Your email address will not be published. Required fields are marked *