October 28, 2026
#ಬೆಂಗಳೂರು

ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲು ಕೊಪ್ಪಳಕ್ಕೆ ಬಂದರೆ ರೆಡ್ ಕಾರ್ಪೆಟ್ ಸ್ವಾಗತ

ಬೆಂಗಳೂರು: ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿಯವರು ಸ್ಪರ್ಧೆ ಮಾಡಲು ಮುಂದಾದರೆ ರೆಡ್ ಕಾರ್ಪೆಟ್ ಹಾಕಿ ಸ್ವಾಗತ ಮಾಡುತ್ತೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.

https://imasdk.googleapis.com/js/core/bridge3.612.0_en.html#goog_1463191945

ಪ್ರಿಯಾಂಕಾ ಗಾಂಧಿಯವರು ಕೊಪ್ಪಳದಿಂದ ಸ್ಪರ್ಧೆ ಮಾಡುವ ಸುದ್ದಿ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿಯವರು ಕೊಪ್ಪಳಕ್ಕೆ ಬರುವುದಾದರೆ ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸುತ್ತೇವೆ. ಇಲ್ಲಿಂದ ಅವರು ಸ್ಪರ್ಧಿಸಿದರೆ ಹೆಚ್ಚು ಅಂತರದಿಂದ ಗೆಲ್ಲಿಸುತ್ತೇವೆ ಎಂದಿದ್ದಾರೆ. 

ಸಹೋದರ ಹಾಗೂ ಕಳೆದ ಬಾರಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದ ರಾಜಶೇಖರ್ ಹಿಟ್ನಾಳ್ ಜೊತೆ ಬಂದು ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಬಾರಿಯೂ ಸಹೋದರ ರಾಜಶೇಖರ್ ಹಿಟ್ನಾಳ್‍ಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ನನ್ನ ಸಹೋದರನಿಗೂ ಟಿಕೆಟ್ ಕೇಳಿದ್ದೇನೆ. ಈ ಬಗ್ಗೆ ಹೈಕಮಾಂಡ್ ತೀರ್ಮಾನದಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ.

Leave a comment

Your email address will not be published. Required fields are marked *