October 28, 2026
#ಬೆಂಗಳೂರು

ಜ.19ರಂದು ಕರ್ನಾಟಕಕ್ಕೆ ಮೋದಿ ಭೇಟಿ

ಬೆಂಗಳೂರು:
ಪ್ರಧಾನಿ ನರೇಂದ್ರ ಮೋದಿಯವರು ಜನವರಿ 19 ರಂದು ಶುಕ್ರವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.35ಕ್ಕೆ ದೆಹಲಿಯಿಂದ ಹೊರಟು ನೇರವಾಗಿ ಕಲಬುರಗಿಗೆ ತೆರಳಲಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಿಂದ 9.40ಕ್ಕೆ ಹೆಲಿಕಾಫ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಹೋಗುತ್ತಾರೆ. ಬಳಿಕ ಮಧ್ಯಾಹ್ನ 12.10ಕ್ಕೆ ಹೆಲಿಕಾಫ್ಟರ್ ಮೂಲಕ ಸೊಲ್ಲಾಪುರದಿಂದ ಪುನಃ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬರುತ್ತಾರೆ.
1.05ಕ್ಕೆ ವಿಶೇಷ ವಿಮಾನದ ಮೂಲಕ ಕಲಬುರಗಿಯಿಂದ ಹೊರಟು ಮಧ್ಯಾಹ್ನ 2.10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲಪುತ್ತಾರೆ. 2.15ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ಪ್ರಯಾಣ ಬೆಳೆಸುತ್ತಾರೆ.
2.45ಕ್ಕೆ ಭಟ್ಟರಮಾರನಹಳ್ಳಿಗೆ ತಲುಪಲಿರುವ ಪ್ರಧಾನಿ ಮೋದಿ, ಬಿಐಇಟಿಸಿ ಉದ್ಘಾಟನೆ ಮತ್ತು ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3.45ಕ್ಕೆ ಭಟ್ಟರ ಮಾರನಹಳ್ಳಿಯಿಂದ ನಿರ್ಗಮಿಸಿ, 3.55ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಸಂಜೆ 4 ಗಂಟೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚೆನ್ನೈಗೆ ತೆರಳಲಿದ್ದಾರೆ.
ಬೆಂಗಳೂರಿನಲ್ಲಿ ಮೋದಿ ರೋಡ್ ಶೋ
ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ, ರೋಡ್ ಶೋ ಕೂಡ ನಡೆಸುವ ಸಾಧ್ಯತೆ ಇದೆ. ಆದರೆ, ರೋಡ್ ಶೋ ಸಂಬAಧ ಬಿಜೆಪಿಯ ನಾಯಕರು ಅಧಿಕೃತ ಹೇಳಿಕೆ ನೀಡಿಲ್ಲ. ಪ್ರಧಾನಿಯವರು ಬೆಂಗಳೂರಿಗೆ ಭೇಟಿ ನೀಡುವ ಸಂಬAಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಸೋಮವಾರ ಸಂಜೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಧಾನಿ ಕಾರ್ಯಾಲಯದಿಂದ ಹೆಚ್ಚಿನ ಮಾಹಿತಿಯ ನಿರೀಕ್ಷೆಯಲ್ಲಿ ಬಿಜೆಪಿ ರಾಜ್ಯ ನಾಯಕರು ಇದ್ದಾರೆ ಎನ್ನಲಾಗಿದೆ.

Leave a comment

Your email address will not be published. Required fields are marked *