September 16, 2026

ಫ್ಯಾನ್‌ಗೆ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಬೆಂಗಳೂರು:ಯುವತಿಯೊಬ್ಬಳು ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಧಾಮನಗರದಲ್ಲಿ ನಡೆದಿದ್ದು, ಈ ಮೂಲಕ ವರ್ಷದ ಮೊದಲ ದಿನವೇ ಸಾವಿನ ಸುದ್ದಿ ಬರೆಯುವಂತಾಗಿದೆ.ವರ್ಷಿಣಿ ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಸುಧಾಮನಗರದಲ್ಲಿ ಕುಟುಂಬದೊAದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಾವು ಅಯೋಧ್ಯೆ ರಾಮ ಮಂದಿರದ ಪರ

ಬೆಂಗಳೂರು:ಅಯೋಧ್ಯೆ ರಾಮಮಂದಿರ ಉದ್ಘಾಟನೆ ವಿಚಾರವನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಹಲವು ವಿರೋಧ ಪಕ್ಷದ ನಾಯಕರು ಆರೋಪಿಸಿರುವ ಬೆನ್ನಲ್ಲೇ, ‘ನಮ್ಮ ಸರ್ಕಾರ ಮತ್ತು ಪಕ್ಷ ರಾಮ ಮಂದಿರದ ಪರವಾಗಿದೆ. ರಾಮ ಮಂದಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ’ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅಯೋಧ್ಯೆ ರಾಮಮಂದಿರ ವಿಚಾರಕ್ಕೆ ನಮ್ಮ ವಿರೋಧವಿಲ್ಲ. ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ನಾವು ರಾಮಮಂದಿರದ ಪರವಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ ಗಳಿಸಲು ಕೇಂದ್ರದ ಬಿಜೆಪಿ ಸರ್ಕಾರ […]

ತೋಟಕ್ಕೆ ಹೊರಟಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿಮಹಿಳೆ ಗಂಭೀರ

ರಾಮನಗರ:ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಕನಕಪುರದ ಬರಡನಹಳ್ಳಿಯಲ್ಲಿ ನಡೆದಿದೆ.ಗ್ರಾಮದ ದುಂಡಮ್ಮ ಗಾಯಗೊಂಡ ಮಹಿಳೆಯಾಗಿದ್ದಾಳೆ. ಮುಂಜಾನೆ ತೋಟಕ್ಕೆ ಹೋಗುತ್ತಿದ್ದ ವೇಳೆ ಆನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾಳೆ. ಆನೆ ದಾಳಿಯಿಂದ ಮಹಿಳೆಯ ಎಡಗೈ ಮುರಿದಿದೆ. ಕೂಡಲೇ ಗ್ರಾಮಸ್ಥರು ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಗಾಯಗೊಂಡ ಮಹಿಳೆಯ ಚಿಕಿತ್ಸಾ ವೆಚ್ಚ ಭರಿಸಿ, ಪರಿಹಾರ ನೀಡುವ […]

ನೇಪಾಳದಲ್ಲಿ ಲಘು ಭೂಕಂಪ, 4.3 ತೀವ್ರತೆ ದಾಖಲು

ಕಠ್ಮಂಡು:ನೇಪಾಳದಲ್ಲಿ 4.3 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ, ಭಾನುವಾರ ರಾತ್ರಿಯೇ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರವು ಮಾಹಿತಿ ನೀಡಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ. ಹೊಸ ವರ್ಷವನ್ನು ಸಂಭ್ರಮದಿAದ ಆಚರಿಸುತ್ತಿದ್ದ ಜನರು ಭಯಭೀತರಾದರು. ಹೊಸ ವರ್ಷ ಆಚರಿಸಲು ಜನರು ಅನೇಕ ಸ್ಥಳಗಳಲ್ಲಿ ಜಮಾಯಿಸಿದ್ದರು.ಇದಕ್ಕೂ ಮುನ್ನ ನವೆಂಬರ್‌ನಲ್ಲಿ ನೇಪಾಳದಲ್ಲಿ ಸಂಭವಿಸಿದ್ದ ಭೂಕಂಪ ಭಾರಿ ಹಾನಿಯನ್ನುಂಟು ಮಾಡಿತ್ತು. ನವೆಂಬರ್ ೩ ರಂದು ಪಶ್ಚಿಮ ನೇಪಾಳದ ಜಜರ್ಕೋಟ್ ಹಾಗೂ ರುಕುಮ್ ಪಶ್ಚಿಮ […]

700ಕ್ಕೂ ಹೆಚ್ಚು ಡ್ರಿಂಕ್ ಆಂಡ್ ಟ್ರೈವ್ ಪ್ರಕರಣ ದಾಖಲು

ಬೆಂಗಳೂರು:ಬೆಂಗಳೂರು ಸಂಚಾರಿ ಪೊಲೀಸರು ನಗರದಾದ್ಯಂತ ಒಟ್ಟು 717 ಡ್ರಿಂಕ್ ಆಂಡ್ ಟ್ರೈವ್ ಪ್ರಕರಣಗಳನ್ನು ದಾಖಲಿಸಿದ್ದಾರೆ. ಡಿಸೆಂಬರ್ 21 ರಿಂದ, ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ ನಡೆದ ವಾಹನ ಚಾಲಕರು ಮತ್ತು ದ್ವಿಚಕ್ರ ವಾಹನ ಚಾಲಕರ ತಪಾಸಣೆ ವೇಳೆ 717 ಡ್ರಿಂಕ್ ಆಂಡ್ ಟ್ರೈವ್ ಪ್ರಕರಣಗಳು ಪತ್ತೆಯಾಗಿವೆ.ಸಂಚಾರ ಪೊಲೀಸರು ಬೆಂಗಳೂರಿನ ನಾಲ್ಕು ವಿಭಾಗಗಳಲ್ಲಿ ತಪಾಸಣೆ ನಡೆಸಿದ್ದು ಡಿಸೆಂಬರ್ ೩೦ ರವರೆಗೆ ೨೭,೨೮೦ ಕ್ಕೂ ಹೆಚ್ಚು ವಾಹನಗಳನ್ನು ಪರಿಶೀಲಿಸಿದ್ದಾರೆ. ಮತ್ತು ಹಲವೆಡೆ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಿದ್ದು ಕಂಡು ಬಂದಿದೆ. ೩೦mg/೧೦೦mಟ […]

ಇಸ್ರೋ 2024ರ ಮೊದಲ ಎಕ್ಸ್ಪೋಸ್ಯಾಟ್ ಉಪಗ್ರಹ ಉಡಾವಣೆ ಯಶಸ್ವಿ

ಶ್ರೀಹರಿಕೋಟ:ಕಪ್ಪು ಕುಳಿಗಳ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆದ ಎಕ್ಸ್ಪೋಸ್ಯಾಟ್ ಉಪಗ್ರಹ ಉಡಾವಣೆ ಯಶಸ್ವಿಯಾಗಿದೆ.ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪಿಎಸ್‌ಎಲ್‌ವಿ ಮೂಲಕ ಈ ಉಪಗ್ರಹ ಉಡಾವಣೆ ಮಾಡಲಾಗಿದೆ. ಈ ಮೂಲಕ ದೇಶದ ಮೊದಲ ಎಕ್ಸ್-ರೇ ಪೋಲರಿಮೀಟರ್ ಉಪಗ್ರಹ ಎಕ್ಸ್ಪೋಸ್ಯಾಟ್ ಉಡಾವಣೆ ಯಶಸ್ವಿಯಾಗಿದ್ದು, ಹೊಸ ವರ್ಷದ ದಿನವೇ ಇಸ್ರೋ ಇತಿಹಾಸ ನಿರ್ಮಿಸಿದೆ. ಇದರೊಂದಿಗೆ ಪಿಎಸ್‌ಎಲ್‌ವಿ ಇತರ ಹತ್ತು ಉಪಗ್ರಹಗಳನ್ನು ಹೊತ್ತೊಯ್ದಿದೆ.ಈ ಉಪಗ್ರಹಗಳನ್ನು ಸ್ಟಾರ್ಟ್ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ನಿರ್ಮಾಣ ಮಾಡಿದ್ದು, ಪಲ್ಸಾರ, ಕಪ್ಪು ಕುಳಿ, ಎಕ್ಸ್-ರೇ ಬೈನರಿಗಳು, ಸಕ್ರಿಯ […]

ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ:ಹೊಸ ವರ್ಷದ ಮೊದಲ ದಿನವೇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಸಿಹಿ ಸುದ್ದಿ ನೀಡಿವೆ. ಜನವರಿ ೧ರಿಂದ ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ದೇಶದ ಕೆಲವು ನಗರಗಳಲ್ಲಿ ತುಸು ಕಡಿಮೆಯಾಗಿದೆ. ಆದರೆ, ಬೆಲೆ ಇಳಿಕೆ ಪ್ರಮಾಣದಲ್ಲಿ ಪ್ರಮುಖ ನಗರಗಳಿಗೆ ವ್ಯತ್ಯಾಸವಿದೆ. ದೇಶದ ಯಾವ ನಗರದಲ್ಲಿ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಎಷ್ಟು ಕಡಿಮೆಯಾಗಿದೆ ಎಂಬ ಮಾಹಿತಿ ಇಲ್ಲಿದೆ.ಬೆಲೆ ಇಳಿಕೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,755.50 […]

ಮಾಲ್‌ಗಳ ವಿರುದ್ಧ ಬಿಬಿಎಂಪಿ ಸಮರನೋಟಿಸ್ ನೀಡಿ ಬೀಗ ಹಾಕಲು ಚಿಂತನೆ

ಬೆಂಗಳೂರು:ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ ಅಂತಾ ಮಂತ್ರಿಮಾಲ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೀಗ ಹಾಕಿತ್ತು. ಬರೋಬ್ಬರಿ ೫೦ ಕೋಟಿ ಬಾಕಿ ಇದೆ ಅಂತಾ ಚಟುವಟಿಕೆಗೆ ಬ್ರೇಕ್ ಹಾಕಿತ್ತು. ಈಗ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರೋ ಬೇರೆ ಮಾಲ್‌ಗಳ ವಿರುದ್ಧವೂ ಸಮರ ಸಾರಲು ಬಿಬಿಎಂಪಿ ಅಧಿಕಾರಿಗಳು ಮುಂದಾಗಿದ್ದಾರೆ.ಖುದ್ದಾಗಿ ಮಾಲ್ ಗಳಿಗೆ ಭೇಟಿ ನೀಡಿ ಆಸ್ತಿ ತೆರಿಗೆ ವಸೂಲಿಗೆ ನೋಟಿಸ್ ನೀಡಲಿದೆಯಂತೆ. ಒಂದು ವೇಳೆ ನೋಟಿಸ್‌ಗೆ ಉತ್ತರ ಕೊಡದಿದ್ದರೆ ಚರಾಸ್ತಿ ವಶಪಡಿಸಿಕೊಳ್ಳುತ್ತೇವೆ. ಇಲ್ಲದೇ ಇದ್ದರೆ ಬೀಗ ಹಾಕುವುದಾಗಿ ಬಿಬಿಎಂಪಿ […]

ಅಸ್ವಸ್ಥಗೊಂಡಿದ್ದ ಕೈದಿ ಸಾವು

ಆನೇಕಲ್:ಡಕಾಯಿತಿ ಪ್ರಕರಣದಲ್ಲಿ ಬಂಧಿಸಿದ್ದ ಆರೋಪಿ ನಿಗೂಢ ಸಾವನ್ನಪ್ಪಿರೋ ಘಟನೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.ಮಡಿವಾಳದ ತಾವರೆಕೆರೆ ಮೂಲದ ಆರೋಪಿ ಗಣೇಶ್‌ನನ್ನ ದರೋಡೆ ಪ್ರಕರಣದಲ್ಲಿ 2023ರ ಡಿಸೆಂಬರ್ 22ರಂದು ಬಂಧಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಗಣೇಶ್ ತೀವ್ರ ನೋವಿನಿಂದ ಒದ್ದಾಡಿದ್ದ. ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.ಆರೋಪಿಯನ್ನ ಠಾಣೆಯಲ್ಲಿ ಹಲವು ದಿನ ಇಟ್ಟುಕೊಂಡಿದ್ದ ಪೊಲೀಸರು, ತೀವ್ರ ವಿಚಾರಣೆಗೆ ಒಳಪಡಿಸಿದ್ರು. ವಿಚಾರಣೆ ಮಾಡುವ ವೇಳೆ ಮರ್ಮಾಂಗಕ್ಕೆ ಗಾಯ ಆಗಿತ್ತು. ಮರ್ಮಾಂಗಕ್ಕೆ ಖಾರದಪುಡಿ ಹಾಕಿರೋದಾಗಿ ಕುಟುಂಬಸ್ಥರು ಹಾಗೂ ಸ್ನೇಹಿತರು ಎಚ್‌ಎಸ್‌ಆರ್ […]

ಚಾಕುವಿನಿಂದ ಇರಿದು ಕೊಲೆ

ಬಳ್ಳಾರಿ:ಹೊಸ ವರ್ಷದ ಸಂಭ್ರಮಾಚರಣೆಗೂ ಮುನ್ನಾ ದಿನದಂದೇ ಚಾಕು ಇರಿದು ಓರ್ವ ಕೊಲೆಯಾದ ಘಟನೆ ಗಣಿನಾಡು ಬಳ್ಳಾರಿ ನಗರದ ವಡ್ಡರಬಂಡೆಯಲ್ಲಿ ನಡೆದಿದೆ. ಹೊಸ ವರ್ಷದ ಆಚರಣೆಗಾಗಿ ಕೇಕ್ ತರಲು ಸಹೋದರರಿಬ್ಬರು ಹೋಗಿದ್ದ ವೇಳೆ ಬೇಕರಿಯೊಂದರ ಬಳಿ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಆರ್.ಕೆ.ಕಾಲೋನಿಯ ನಿವಾಸಿ ಸೈಯದುಲ್ಲಾ (24) ಮೃತಪಟ್ಟಿದ್ದು, ಮತ್ತೋರ್ವ ಬಾಪೂಜಿ ನಗರದ ನಿವಾಸಿ ರಜಾಕ್ ವಲಿ (26) ತೀವ್ರ ಗಾಯಗೊಂಡಿದ್ದು, ವಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕೇಕ್ ತರಲು ಹೋಗಿದ್ದ ವೇಳೆ ಪಾರ್ಕಿಂಗ್ ಮಾಡಿದ್ದ ಬೈಕ್ ಗೆ […]