ಕೇಂದ್ರದಲ್ಲಿ ಬೇರೆ ಪಕ್ಷ ಇರ್ತಿದ್ರೆ ಬಿಜೆಪಿ ಇಡೀ ದೆಹಲಿ ಬಂದ್ ಮಾಡ್ತಿತ್ತು: ಸಂಜಯ್ ರಾವತ್
ನವದೆಹಲಿ: ಒಂದು ವೇಳೆ ಕೇಂದ್ರದಲ್ಲಿ ಬೇರೆ ಪಕ್ಷ ಅಧಿಕಾರದಲ್ಲಿ ಇರುತ್ತಿದ್ದರೆ ಮೋಕ್ ಬಾಂಬ್ ಪ್ರಕರಣ ಸಂಬಂಧ ಬಿಜೆಪಿಯವರು ಇಡೀ ದೆಹಲಿಯನ್ನು ಬಂದ್ ಮಾಡಿಸುತ್ತಿದ್ದರು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನ ಭದ್ರತಾ ಉಲ್ಲಂಘನೆಯ ಘಟನೆಯ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರದಲ್ಲಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿರುತ್ತಿದ್ದರೆ, ಈ ವಿಷಯದ ಬಗ್ಗೆ ಬಿಜೆಪಿ ಇಡೀ ದೆಹಲಿಯನ್ನು ಬಂದ್ ಮಾಡುತ್ತಿತ್ತು. ಆದರೆ ಘಟನೆ ಸಂಬಂಧ ಬಿಜೆಪಿ ಸಂಸದರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು. […]







































































































































































































































































































































































































































































































































































































































































































































































































































































































































































































































































































































