November 3, 2026

ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು ನಮ್ಗೆ ಹೇಳಿಕೊಡಬೇಕಿಲ್ಲ

ಹುಬ್ಬಳ್ಳಿ: ಕಾಂಗ್ರೆಸ್‌ ಟಿಪ್ಪು ಸುಲ್ತಾನ್‌ ಪಾರ್ಟಿ ಅಲ್ಲ. ನಾವು ಬ್ರಿಟಿಷರ ವಿರುದ್ದ ಹೋರಾಟ ಮಾಡಿದವರ ಪರ ಇರುವವರು. ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು ನಮಗೆ ಹೇಳಿಕೊಡಬೇಕಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್‌ ಟಿಪ್ಪು ಸುಲ್ತಾನ್‌ ಪರ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದವರಲ್ಲಿ ಬಿಜೆಪಿ ತಮ್ಮ ಪಕ್ಷದ ಒಬ್ಬರ ಹೆಸರು ಹೇಳಲಿ, ಖಂಡಿತ ಸಿಗೋದಿಲ್ಲ. ನಾವು ಬ್ರಿಟಿಷರ ವಿರುದ್ದ ಹೋರಾಟ ಮಾಡಿದವರ ಪರ ಇದ್ದೇವೆ ಎಂದು […]

ಆ ಪ್ರಶ್ನೆ ಬಿಟ್ಟು ಬೇರೆ ಏನಾದರೂ ಇದ್ದರೆ ಕೇಳಿ: ಪ್ರತಾಪ್‌ ಸಿಂಹ

ಮೈಸೂರು: ಲೋಕಸಭೆಯ ಒಳಗಡೆ ಹೊಗೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳು ಕೇಳಿದ್ದಕ್ಕೆ ಆ ಪ್ರಶ್ನೆ ಬಿಟ್ಟು ಬೇರೆ ಏನಾದರೂ ಇದ್ದರೆ ಕೇಳಿ ಎಂದು ಮೂರು ಮೂರು ಬಾರಿ ಹೇಳಿ, ಆ ವಿಚಾರದಲ್ಲಿ ಯಾವುದೇ ವಿವರಣೆ ಕೊಡುವುದಿಲ್ಲ ಎಂದು ಉತ್ತರಿಸಿದರು.    ಪ್ರತಾಪ್ ಸಿಂಹ ದೇಶದ್ರೋಹಿನಾ ದೇಶಪ್ರೇಮಿನಾ ಅಂತಾ ಬೆಟ್ಟದ ಚಾಮುಂಡಿ ತಾಯಿ, ಕೊಡಗಿನ ಕಾವೇರಿ ತಾಯಿ. ನನ್ನ ಓದುಗರು, ಮೈಸೂರಿನ ಕೊಡಗು ಜನ ತೀರ್ಪು ನೀಡುತ್ತಾರೆ. ಮುಂಬರುವ ಚುನಾವಣೆಯಲ್ಲಿ […]

ರಾಜ್ಯದಲ್ಲಿ ಮತ್ತೆ ಕೊರೊನಾ ಸ್ಫೋಟ – ಒಂದೇ ದಿನದಲ್ಲಿ 104 ಕೇಸ್‌ ದೃಢ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-‌19 ಪ್ರಕರಣಗಳು ಮತ್ತೆ ಹೆಚ್ಚುತ್ತಿವೆ. ಇಂದು (ಶನಿವಾರ) ಒಂದೇ ದಿನ 104 ಪಾಸಿಟಿವ್‌ ಕೇಸ್‌ ವರದಿಯಾಗಿವೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಶನಿವಾರ 8 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271 ಕ್ಕೆ ಏರಿಕೆ ಕಂಡಿದೆ. ಕೊರೊನಾ ಪಾಸಿಟಿವಿಟಿ ದರ 5.93% ಇದೆ.  ಸಿಲಿಕಾನ್‌ ಸಿಟಿ ಬೆಂಗಳೂರು ಕೊರೊನಾ ಹಾಟ್‌ಸ್ಪಾಟ್‌ ಆಗುತ್ತಿದೆ. ನಗರದಲ್ಲಿ ಕೋವಿಡ್‌ ಪ್ರಕರಣ ದಿನೇ ದಿನೇ ಏರಿಕೆ ಕಂಡಿದ್ದು, ಭೀತಿ ಮೂಡಿಸಿದೆ. ಇಂದು ಬೆಂಗಳೂರಿನಲ್ಲಿ 85 […]

ಬಿಜೆಪಿ ರಾಜ್ಯ ಘಟಕಕ್ಕೆ 10 ಉಪಾಧ್ಯಕ್ಷರು; ಪದಾಧಿಕಾರಿಗಳ ತಂಡ ಪುನಾರಚನೆ – ಯಾರಿಗೆ ಯಾವ ಸ್ಥಾನ?

– ಬಿ.ಎಲ್‌.ಸಂತೋಷ್‌ ಬಣಕ್ಕೆ ಕೊಕ್‌; ವಿಜಯೇಂದ್ರ ಪಟ್ಟಿಗೆ ಗ್ರೀನ್‌ ಸಿಗ್ನಲ್‌– ವಿ.ಸೋಮಣ್ಣಗೆ ಇಲ್ಲ ಯಾವುದೇ ಸ್ಥಾನ Advertisement: 0:20Close Player ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಪದಾಧಿಕಾರಿಗಳ ತಂಡ ಪುನಾರಚನೆ ಮಾಡಲಾಗಿದೆ. ಹೊಸದಾಗಿ 10 ಮಂದಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ರಾಜ್ಯ ಬಿಜೆಪಿ ಪದಾಧಿಕಾರಿಗಳ ಘಟಕ ಪುನಾರಚಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಹೊಸದಾಗಿ 10 ಜನ ರಾಜ್ಯ ಉಪಾಧ್ಯಕ್ಷರು, 4 ಮಂದಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು, 10 ಜನ ರಾಜ್ಯ ಕಾರ್ಯದರ್ಶಿಗಳು, ಒಬ್ಬರು ಖಜಾಂಚಿ ನೇಮಕಗೊಂಡಿದ್ದಾರೆ. 7 […]

ಶಾಸಕ ಬಿ.ಆರ್ ಪಾಟೀಲ್ ಆಪ್ತ ಬಸವರಾಜ್ ಚೌಲ್ ಪುತ್ರನ ಹತ್ಯೆ

ಕಲಬುರಗಿ: ಶಾಸಕ ಬಿ.ಆರ್ ಪಾಟೀಲ್ ಆಪ್ತರೂ ಆಗಿರುವ ಕಾಂಗ್ರೆಸ್‌ ಮುಖಂಡ ಬಸವರಾಜ್ ಚೌಲ್ ಪುತ್ರನನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಆಳಂದ (Aland) ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ಘಟನೆ ನಡೆದಿದ್ದು, ಕಾಂಗ್ರೆಸ್ ಮುಖಂಡನ ಪುತ್ರ ಚಂದ್ರಶೇಖರ್ ಚೌಲ್ (21) ಹತ್ಯೆಗೀಡಾಗಿದ್ದಾನೆ.  ಚಂದ್ರಶೇಖರ್ ಚೌಲ್ ಸ್ನೇಹಿತರಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಸಾವಿಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ.  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಆಳಂದ ಪಟ್ಟಣದ ಪೊಲೀಸರು ಕೊಲೆ ಪ್ರಕರಣ […]

ಇದು ಕೆಜೆಪಿ ಪಾರ್ಟಿ 2 ಇದ್ದಂತೆ – ಕಳ್ಳರು, ಲಫಂಗರು ಹೆಚ್ಚು ಸೇರ್ತಿದ್ದಾರೆ

ವಿಜಯಪುರ: ಯಡ್ಡಿಯೂರಪ್ಪನವರದ್ದು ಕೆಜೆಪಿ 1, ಇದು ಕೆಜೆಪಿ 2, ಮೊಮ್ಮಗನದು ಕೆಜೆಪಿ 3 ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಿಜೆಪಿ ರಾಜ್ಯ ಘಟಕದ ನೂತನ ಪಟ್ಟಿಗೆ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಪಟ್ಟಿಯ ಆಯುಷ್ಯ 2024ರ ಲೋಕಸಭೆ ಚುನಾವಣೆ. 28 ಸೀಟ್ ತರುತ್ತೇನೆ ಅಂತಾ ಹೇಳಿದ್ದಾರೆ. 28 ರಲ್ಲಿ ಒಂದು ಕಡಿಮೆ ಬಿದ್ದರೂ ಚಿಕ್ಕಮಕ್ಕಳು ಹೇಗೆ ಸಿಗರೇಟ್ ಪ್ಯಾಕ್ ಮನೆ ಮಾಡಿರ್ತಾರೆ ಆ ರೀತಿಯಾಗಿ ಈ ಪಟ್ಟಿ ಹಾಗೆ ಬಿದ್ದು ಹೋಗುತ್ತದೆ […]

ʻಯುವ ನಿಧಿʼಗೆ ಡಿಸೆಂಬರ್‌ 26 ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಳಗಾವಿ: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಗೆ ಡಿಸೆಂಬರ್‌ 26 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಪದವೀಧರರು ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್‌ ತಿಳಿಸಿದ್ದಾರೆ. ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ (Belagavi) 2023ರ ವರ್ಷದಲ್ಲಿ ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರರು ಮತ್ತು ಡಿಪ್ಲೋಮಾ ಪಡೆದ ನಿರುದ್ಯೋಗಿ ವಿದ್ಯಾವಂತರಿಗೆ ಕರ್ನಾಟಕ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಾವತಿಸಲಾಗುತ್ತದೆ ಎಂದು ಹೇಳಿದ್ದಾರೆ ಡಿಸೆಂಬರ್ 26ರಿಂದ ಅರ್ಜಿ […]

ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗೆ ಹೋಗುವಂತೆ ನಾನು ಕರೆ ಕೊಡುತ್ತೇನೆ

ಬೆಂಗಳೂರು: ಹಿಜಬ್‌ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆಗೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಯತ್ನಾಳ್‌, ಸಿದ್ದರಾಮಯ್ಯನವರು ಹಿಜಬ್ ಧರಿಸಬಹುದು ಎಂದು ಹೇಳುತ್ತಾ ಯಾರು ಯಾವ ಬಟ್ಟೆಯಾದರೂ ಧರಿಸಲು ಅವಕಾಶವಿದೆ ಎಂದು ಹೇಳಿದ್ದಾರೆ. ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ನಾನು ಕರೆ ಕೊಡುತ್ತಿದ್ದೇನೆ. ಅವರಿಗಿಲ್ಲದ ಸಮವಸ್ತ್ರ ನೀತಿ ಹಿಂದೂಗಳಿಗೂ ಇಲ್ಲ ಎಂದು ಪ್ರತಿಪಾದಿಸಿದ್ದಾರೆ.  ಓಲೈಕೆ ರಾಜಕಾರಣಕ್ಕೇನಾದರೂ ಮತ್ತೊಂದು ಹೆಸರು ಇದ್ದರೇ […]

ಗಡಿಯಲ್ಲಿ ನುಸುಳಲು ಯತ್ನಿಸಿದ ಉಗ್ರನ ಹತ್ಯೆ 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ (ಐಬಿ) ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಒಳನುಸುಳಲು ಯತ್ನಿಸಿದ ಭಯೋತ್ಪಾದಕರನ್ನು ಸೇನೆ ತಡೆದಿದೆ. ಈ ವೇಳೆ ನಡೆದ ಎನ್‍ಕೌಂಟರ್‌ನಲ್ಲಿ ಓರ್ವ ಉಗ್ರ ಬಲಿಯಾಗಿದ್ದಾನೆ. ಆತನ ದೇಹವನ್ನು ಜೊತೆಗಿದ್ದ ಉಗ್ರರು ಪಾಕಿಸ್ತಾನದ ಕಡೆಗೆ ಎಳೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ವರು ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪು ಅಖ್ನೂರ್‍ನ ಖೌರ್ ಸೆಕ್ಟರ್‍ನಲ್ಲಿ ಗಡಿಯಿಂದ ಈ ಕಡೆಗೆ ನುಸುಳುತ್ತಿರುವುದನ್ನು ಗಮನಿಸಿದಾಗ ಕಾರ್ಯಾಚರಣೆ ನಡೆದಿದೆ. ಡಿ.23ರ ಮುಂಜಾನೆ ಭಯೋತ್ಪಾದಕರ ಚಲನವಲನಗಳು ಕಂಡು ಬಂದಿದೆ. ಈ ದೃಶ್ಯ ಗಡಿಯಲ್ಲಿನ ಸೇನೆಯ ಕ್ಯಾಮೆರಾಗಳಲ್ಲಿ […]

ಹಿಜಬ್ ವಿಚಾರ ಸುಪ್ರೀಂ ಕೋರ್ಟ್‍ನಲ್ಲಿರುವಾಗ ಅನುಮತಿ ಕೊಡೋದು ಎಷ್ಟು ಸರಿ?

ಬೆಂಗಳೂರು: ಬ್ರಿಟೀಷರು ದೇಶ, ರಾಜ್ಯವನ್ನು ವಿಭಜಿಸಿ ಆಳಿದ ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ, ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಿಜಬ್ ವಿಷಯ ಇದೀಗ ಸುಪ್ರೀಂ ಕೋರ್ಟಿನಲ್ಲಿದೆ. ಇಂತಹ ಸಂದರ್ಭದಲ್ಲಿ ಹಿಜಬ್‍ಗೆ ಅನುಮತಿ ಕೊಡುವುದು ಎಷ್ಟು ಸರಿ […]