ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಾಫಿಕ್ ಜಾಮ್ – 3 ಕಿಮೀ ವರೆಗೆ ನಿಂತ ವಾಹನಗಳು; 2 ಗಂಟೆ ಪ್ರಯಾಣಿಕರ ಪರದಾಟ
ಮೈಸೂರು: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚಾರ ದಟ್ಟಣೆ ಉಂಟಾಗಿ, ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಬೆಂಗಳೂರು ಕಡೆಯಿಂದ ಶನಿವಾರ ಸಾವಿರಾರು ವಾಹನಗಳು ಮೈಸೂರು ಕಡೆಗೆ ಪ್ರಯಾಣಿಸಿದವು. ಇದರಿಂದಾಗಿ ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಟೋಲ್ ಬಳಿ ಸುಮಾರು 3 ಕಿ.ಮೀ.ನಷ್ಟು ಟ್ರಾಫಿಕ್ ಜಾಮ್ ಆಯಿತು. ಸುಮಾರು 2 ಗಂಟೆಗಳ ವರೆಗೆ ವಾಹನ ಸವಾರರು ಸಂಚಾರ ದಟ್ಟಣೆಯಲ್ಲಿ ಸಿಲುಕಿ ಪರದಾಡಿದರು. ರಸ್ತೆಯುದ್ದಕ್ಕೂ ವಾಹನಗಳು ಕಿಕ್ಕಿರಿದು ನಿಂತಿದ್ದ ದೃಶ್ಯದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ […]







































































































































































































































































































































































































































































































































































































































































































































































































































































































































































































































































































































