November 3, 2026

ಜ.6 ರಿಂದ ಬೆಂಗ್ಳೂರು ಸೇರಿದಂತೆ ಪ್ರಮುಖ ನಗರಗಳಿಗೆ ವಿಮಾನ ಹಾರಾಟ ಶುರು

ಲಕ್ನೋ (ಅಯೋಧ್ಯೆ): ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಡಿಸೆಂಬರ್‌ 30 ರಂದು ಉದ್ಘಾಟನೆಯಾಗಲಿದ್ದು, ಜನವರಿ 6ರಿಂದ ಪ್ರಮುಖ ನಗರಗಳಿಗೆ ವಿಮಾನ ಹಾರಾಟ ಸಂಪರ್ಕ ಕಲ್ಪಿಸಲಾಗಿದೆ. ಡಿಸೆಂಬರ್‌ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಅಂದು ದೆಹಲಿಗೆ ಏರ್‌ ಇಂಡಿಯಾದ ಮೊದಲ ವಿಮಾನ ಹಾರಾಟ ನಡೆಸಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಅಯೋಧ್ಯೆ ಏರ್ಪೋರ್ಟ್‌ನಲ್ಲಿ ಡಿಸೆಂಬರ್‌ 22ರಂದು ಭಾರತೀಯ ವಾಯುಪಡೆಯ ಏರ್‌ಬಸ್‌ A320 ಅನ್ನು ಇತ್ತೀಚೆಗೆ ಯಶಸ್ವಿಯಾಗಿ ಲ್ಯಾಂಡಿಂಗ್‌ ಮಾಡಲಾಗಿತ್ತು. […]

ಹಿಜಬ್ ನಿಷೇಧ ವಾಪಸ್ಸಿಗೆ ವಿಜಯೇಂದ್ರ ಕಿಡಿ

ಬೆಂಗಳೂರು: ಸಮವಸ್ತ್ರ ಇರುವುದು ವಿಷಬೀಜ ಬಿತ್ತುವುದಕ್ಕಲ್ಲ. ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಪು ನಮ್ಮ ಮುಂದೆ ಇದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ್ದು ಒಡೆದಾಳುವ ನೀತಿ. ರಾಜ್ಯದ ಕಾನೂನು ಸುವ್ಯವಸ್ಥೆ ಒಳ್ಳೆಯದಾಗಿ ಇರಬಾರದಾ.?, ನಿಮ್ಮ ಉದ್ದೇಶ ಏನು ಹಾಗಾದ್ರೆ..?, ನಿಮ್ಮನ್ನೇನು ಬಂದು ಮಕ್ಕಳು ಕೇಳಿದ್ರಾ..?, ಯಾರೋ ಸಭೆಯಲ್ಲಿ ಕೇಳಿದ್ರಂತೆ ಇವರು ಹೇಳಿಬಿಟ್ರಂತೆ ಎಂದು ಹಿಜಬ್ ನಿಷೇಧ ವಾಪಸ್ ಪಡೆದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ. Advertisement: 2:40Close Player ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) […]

ಸಾರ್ವಜನಿಕ ಸ್ಥಳಗಳಲ್ಲಿ ಹಿಜಬ್‌ ನಿಷೇಧಿಸಿರಲಿಲ್ಲ

ಚಿಕ್ಕಮಗಳೂರು: ವಿದ್ಯಾರ್ಥಿಗಳ ಮನಸ್ಸಿನಲ್ಲಿ ಏಕತೆ ಬೆಳೆಯಲಿ ಎಂಬ ಕಾರಣಕ್ಕೆ ಶಾಲೆಗಳಲ್ಲಿ ಮಾತ್ರ ಸಮವಸ್ತ್ರ ಕಡ್ಡಾಯಗೊಳಿಸಿ ಹಿಜಬ್‌ ನಿಷೇಧಿಸಲಾಗಿತ್ತು. ಆದ್ರೆ ಸಾರ್ವಜನಿಕ ಸ್ಥಳಗಳಲ್ಲಿ ಹಿಜಬ್‌ಗೆ ನಿಷೇಧ ಹೇರಿರಲಿಲ್ಲ ಎಂದು ಮಾಜಿ ಸಚಿವ ಸಿ.ಟಿ ರವಿ   ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಜಬ್ ನಿಷೇಧ ಮಾಡಿರಲಿಲ್ಲ. ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಲಾಗಿತ್ತು. ಸಿದ್ದರಾಮಯ್ಯ ಸಮವಸ್ತ್ರಕ್ಕೆ ಹಿಜಬ್ ಜೋಡಿಸುತ್ತಾರೋ ಅಥವಾ ಸಮವಸ್ತ್ರ ಕಡ್ಡಾಯ ಅನ್ನೋದನ್ನೇ ತೆಗೆಯುತ್ತಾರೋ ಗೊತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಹಿಜಬ್ ನಿಷೇಧ ಆಗಿರಲಿಲ್ಲ. ಕೇವಲ ಶಾಲೆ-ಕಾಲೇಜುಗಳಲ್ಲಿ 1964 ಶಿಕ್ಷಣ […]

ಬೆಂಗ್ಳೂರಲ್ಲಿ ಧರೆಗಿಳಿದ ಕೇಕ್ ಲೋಕ

ಬೆಂಗಳೂರು: ಕ್ರಿಸ್ಮಸ್ ಗೆ ಕೇವಲ ಎರಡೇ ದಿನಗಳು ಬಾಕಿ ಉಳಿದಿವೆ. ಕ್ರಿಸ್ಮಸ್ ಅಂದಾಕ್ಷಣ ನೆನಪಾಗೋದು ಕೇಕ್ ಶೋ. ಸಿಲಿಕಾನ್ ಸಿಟಿಯಲ್ಲಿ ಕೇಕ್‍ಗಳ ಲೋಕ ಧರೆಗಿಳಿದಿದ್ದು, ಎಲ್ಲರನ್ನೂ ಕೈ ಬೀಸಿ ಕರೆಯುತ್ತಿವೆ. ಹೌದು. ಕ್ರಿಸ್ಮಸ್ ಹಾಗೂ ನ್ಯೂ ಇಯರ್ ಅನ್ನು ಬರ ಮಾಡಿಕೊಳ್ಳೋಕೆ ಬೆಂಗಳೂರಿಗರು ಸಜ್ಜಾಗಿದ್ದಾರೆ. ಕ್ರಿಸ್ಮಸ್ ಹಬ್ಬದ ಅಂದ ತಕ್ಷಣ ಬೆಂಗಳೂರಿಗರಿಗೆ ನೆನಪಾಗೋದು ಕೇಕ್ ಶೋ. ಪ್ರತಿ ವರ್ಷದಂತೆ ಈ ವರ್ಷವೂ ಸಂತ ಜೋಸೆಫ್ ಸ್ಕೂಲ್ ಗ್ರೌಂಡ್ ನ ಆವರಣದಲ್ಲಿ 49ನೇ ವರ್ಷದ ಕೇಕ್ ಶೋ ಆರಂಭವಾಗಿದೆ. ಇನ್ಸ್ಟಿಟ್ಯೂಟ್ […]

ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಯಲ್ಲಿ ಸಿದ್ದರಾಮಯ್ಯಗೆ ಸ್ಥಾನ

ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ತಯಾರಿ ಶುರು ಮಾಡಿರುವ ಕಾಂಗ್ರೆಸ್‌ ಪಕ್ಷವು ಹಿರಿಯ ನಾಯಕ ಪಿ.ಚಿದಂಬರಂ ನೇತೃತ್ವದಲ್ಲಿ 16 ಜನರ ಪ್ರಣಾಳಿಕೆ ಸಮಿತಿಯನ್ನ ಪ್ರಕಟ ಮಾಡಿದೆ. ಪ್ರಣಾಳಿಕೆಯಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಲಾಗಿದೆ. ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಟಿ.ಎಸ್ ಸಿಂಗ್‌ದೇವ್ ಅವರನ್ನು ಚುನಾವಣಾ ಪ್ರಣಾಳಿಕೆ ಸಮಿತಿಯ ಸಂಚಾಲಕರನ್ನಾಗಿ ಮಾಡಲಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಶಶಿ ತರೂರ್, ಜೈರಾಮ್ ರಮೇಶ್, ಆನಂದ್ ಶರ್ಮಾ, ರಂಜಿತ್ ರಂಜನ್, ಜಿಗ್ನೇಶ್ ಮೇವಾನಿ ಸೇರಿದಂತೆ […]

ಕೊರೊನಾ ಆತಂಕದ ನಡುವೆಯೂ ವೈಕುಂಠ ಏಕಾದಶಿ ಸಂಭ್ರಮ – ಮಾಸ್ಕ್‌ ಮರೆತ ಜನ

ಬೆಂಗಳೂರು: ಸ್ವರ್ಗದ ಬಾಗಿಲು ತೆರೆಯುವ ಪುಣ್ಯದಿನವಾದ ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ಈ ದಿನ ಭಕ್ತರು ವೆಂಕಟೇಶ್ವರನ ದೇಗುಲಕ್ಕೆ ಭೇಟಿ ಕೊಟ್ಟು ಸ್ವರ್ಗದ ದ್ವಾರ ಹಾದು ಹೋಗಿ, ಪುನೀತರಾಗುವ ಕ್ಷಣ ಎಂದೇ ಈ ದಿನವನ್ನ ಭಾವಿಸಲಾಗಿದೆ. ಕೊರೊನಾ ಆತಂಕದ ನಡುವೆಯೂ ಭಕ್ತರು ದೇಗುಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಕೊರೊನಾ ಇರೋದ್ರಿಂದ ಏಕಾದಶಿಯ ಸಂಭ್ರಮದ ಜೊತೆಗೆ ಮುನ್ನೆಚ್ಚರಿಕಾ ಕ್ರಮಗಳನ್ನ ಪಾಲಿಸಲಾಗುತ್ತಿದೆ. ಆದ್ರೆ ಕೆಲ ಭಕ್ತರು ಮಾಸ್ಕ್‌ ಧರಿಸದೇ ದೇವಸ್ಥಾನಕ್ಕೆ ಆಗಮಿಸಿದ್ದ ದೃಶ್ಯಗಳು ಕಂಡುಬಂದಿವೆ. ಈಗಾಗಲೇ […]

ಕೆರೆ ಏರಿ ಮೇಲಿಂದ ಉರುಳಿ ಬಿದ್ದ ಬಸ್- 20ಕ್ಕೂ ಹೆಚ್ಚು ಮಂದಿಗೆ ಗಾಯ

ಆನೇಕಲ್: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಕೆರೆ ಏರಿ ಮೇಲಿಂದ ಕೆಳಗೆ ಉರುಳಿ ಬಿದ್ದ ಘಟನೆ ಬೆಂಗಳೂರು ಹೊರವಲಯ ಆನೇಕಲ್‍ನಲ್ಲಿ   ನಡೆದಿದೆ. ಆನೇಕಲ್ ತಾಲೂಕಿನ ಅತ್ತಿಬೆಲೆ- ಸರ್ಜಾಪುರ ಮುಖ್ಯ ರಸ್ತೆಯ ಬಿದರಗುಪ್ಪೆ ಕೆರೆ ಏರಿ ಮೇಲೆ ಘಟನೆ ನಡೆದಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.  ಖಾಸಗಿ ಬಸ್ ಚಿಕ್ಕ ಬೆಳಂಡೂರಿನಿಂದ ಓಂ ಶಕ್ತಿಗೆ ಹೋಗುತ್ತಿತ್ತು. ಈ ಬಸ್ಸಿನಲ್ಲಿ ಸುಮಾರು 50 ಮಂದಿ ಪ್ರಯಾಣ ಮಾಡುತ್ತಿದ್ದರು. ಕೆರೆ ಏರಿ ಮೇಲೆ ಬರುತ್ತಿದ್ದಾಗ […]

ಸಿಎಂ, ಸಚಿವರು ಜೆಟ್‍ನಲ್ಲಿ, ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ.. ಇದೇನಾ ನಿಮ್ಮ ಸಮಾಜವಾದ?: ಅಶೋಕ್ ಕಿಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ , ಕೃಷ್ಣಬೈರೇಗೌಡ ಐಷಾರಾಮಿ ಜೆಟ್‍ನಲ್ಲಿ ಪ್ರಯಾಣ ಮಾಡುತ್ತಾರೆ. ಇತ್ತ ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇನಾ ನಿಮ್ಮ ಸಮಾಜವಾದ..?, ಈ ರೀತಿಯ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಜಮೀರ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಜೆಟ್ ವಿಮಾನ ಪ್ರಯಾಣದ ವೀಡಿಯೋ ಕುರಿತು ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಬರದ ಸಂಕಷ್ಟಕ್ಕೆ ರೈತರು ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ. 60 […]

ಮಕ್ಕಳ ಕೈಯಲ್ಲೇ ಶೌಚಾಲಯ ಕ್ಲೀನ್ ಮಾಡಿಸಿದ ಶಿಕ್ಷಕರು; ಪಾಲಕರು ಗರಂ

ಕೋಲಾರ: ಜಿಲ್ಲೆಯಲ್ಲಿ ಶೌಚಗುಂಡಿಗೆ ಮಕ್ಕಳನ್ನ ಇಳಿಸಿದ ಪ್ರಕರಣ ಮಾಸುವ ಬೆನ್ನೆಲ್ಲೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ. ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಯಲ್ಲಿ ಮತ್ತೊಂದು ಘಟನೆ ನಡೆದಿದೆ. ಈ ಪ್ರಕಾರ ಮಕ್ಕಳ ಕೈಯಲ್ಲೇ ಶೌಚಾಲಯ ಕ್ಲೀನ್​ ಮಾಡಿಸಲಾಗಿದೆ. ಯಶವಂತ ವಿಧಾನಸಭಾ ಕ್ಷೇತ್ರದ ಆಂದ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕೈಯಿಂದ ಟಾಯ್ಲೇಟ್ ಕ್ಲೀನಿಂಗ್ ಮಾಡಿಸಿದ ಬಗ್ಗೆ ವರದಿಯಾಗಿದೆ.  ಪೋಷಕರಿಗೆ ವಿಷಯ ಗೊತ್ತಾಗಿ, ಶಾಲೆಯ ಮುಂದೆ ಪ್ರತಿಭಟನೆ ಮಾಡಲಾಗುತ್ತಿದೆ.  ಮಕ್ಕಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಕ್ಕೆ ಪೋಷಕರು ಅಸಮಾಧಾನಗೊಂಡಿದ್ದಾರೆ.  […]

ಬಿಜೆಪಿಯಲ್ಲಿ ಸೈಲೆಂಟಾಗಿ ಅತೃಪ್ತರ ಟೀಮ್ ಫುಲ್ ಆಕ್ಟಿವ್

ಬೆಂಗಳೂರು: ಬಿಜೆಪಿಯಲ್ಲಿ ಒಂದು ಕಡೆ ಜೆಡಿಎಸ್ ಜೊತೆಗಿನ ದೋಸ್ತಿ ಜೋರಾದ್ರೆ, ಮತ್ತೊಂದು ಕಡೆ ಅತೃಪ್ತರ ಬಣದ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ‌ ನೇಮಕದಿಂದ ಅಸಮಧಾನಗೊಂಡಿರುವ ನಾಯಕರು ತಮ್ಮದೇ ಹೊಸ ತಂಡ ಕಟ್ಟಿಕೊಳ್ಳುವಂತೆ ಕಾಣಿಸುತ್ತಿದೆ. ರಮೇಶ್‌ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್, ವಿ.ಸೋಮಣ್ಣ, ಸಿಪಿ ಯೋಗೇಶ್ವರ್ ಸೇರಿದಂತೆ ಹಲವರ ತಂಡದ ಸದಸ್ಯರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕಾಂಗ್ರೆಸ್ ತೊರೆದಿರುವ ಮಾಜಿ ಸಚಿವ ರೋಷನ್​ ಬೇಗ್ ಅವರನ್ನು ವಿ.ಸೋಮಣ್ಣ ಭೇಟಿಯಾಗಿ […]