September 17, 2026

ಮಹಿಷಾ ದಸರಾ ದಿನವೇ ಚಾಮುಂಡಿ ಬೆಟ್ಟಕ್ಕೆ ಬಿಜೆಪಿಯಿಂದ ಜಾಥಾ 

ಮೈಸೂರು: ಮಹಿಷಾ ದಸರಾ ಒಂದು ರೀತಿ ಅಸಹ್ಯ, ಅನಾಚಾರ. ಮಹಿಷಾ ದಸರಾ ಮೂಲಕ ದೆವ್ವವನ್ನು ದೇವರು ಮಾಡಲು ಹೊರಟ್ಟಿದ್ದಾರೆ. ಮಹಿಷಾ ದಸರಾ ಆಸ್ತಿಕರ ಭಾವನೆಗೆ ನೋವು ತರುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ನಾಡಹಬ್ಬದ ಹಿನ್ನೆಲೆ ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟದಲ್ಲಿ  ಮಹಿಷಾಸುರನ ಪ್ರತಿಮೆ ಮುಂದೆ ಮಹಿಷಾ ದಸರಾ ಆಯೋಜನೆ ಮಾಡಲಾಗಿದೆ. ಇದಕ್ಕೆ ತಿರುಗೇಟಾಗಿ ಬಿಜೆಪಿ ಚಲೋ ಚಾಮುಂಡಿ ಬೆಟ್ಟ ಜಾಥಾ ಹಮ್ಮಿಕೊಂಡಿದೆ. ಮಹಿಷಾ ದಸರಾ ದಿನವೇ ಚಾಮುಂಡಿ ಬೆಟ್ಟಕ್ಕೆ ಜಾಥಾ ಹಮ್ಮಿಕೊಳ್ಳಲಾಗಿದೆ. ಮಹಿಷಾ ದಸರಾ […]

ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ – ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

ಕೊಪ್ಪಳ: ಗಂಗಾವತಿ ನಗರದ ಗಾಂಧಿ ಸರ್ಕಲ್‌ ಸಮೀಪ ಇರುವ ದೊಡ್ಡ ಜಾಮಿಯಾ ಮಸೀದಿ ಮುಂದೆ ಗಣೇಶ ವಿಸರ್ಜನೆ ಮಾಡುವ ಮೆರವಣಿಗೆ ವೇಳೆ ಮಸೀದಿ ಮುಂದೆ ಪೂಜೆ ಮಾಡಿದ ಕಾರಣ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಸೆ.28 ರಂದು ಗಂಗಾವತಿಯ ಹಿಂದೂ ಮಹಾ ಮಂಡಳಿ ವತಿಯಿಂದ ನಡೆಯುತ್ತಿದ್ದ ಗಣೇಶ ವಿಸರ್ಜನೆ ವೇಳೆಯಲ್ಲಿ ಯುವಕರು ಮಸೀದಿ ಎದುರು ಮಂಗಳಾರತಿ ಮಾಡಿ, ‘ಗವಿ ಗಂಗಾಧರೇಶ್ವರ ಮಹಾ ರಾಜಕೀ ಜೈ’ ಎಂದು ಘೋಷಣೆ ಕೂಗಿದ ವೀಡಿಯೋ ವೈರಲ್ ಆಗಿತ್ತು. ಇದು ಕೋಮು ಗಲಭೆಗೆ ಪ್ರಚೋದನೆ […]

ಶಿವಮೊಗ್ಗ ಈದ್‌ ಮಿಲಾದ್‌ ಹಬ್ಬಕ್ಕೆ 5 ಕೋಟಿ ಸಂಗ್ರಹ ಫಂಡಿಂಗ್‌ ಮಾಡಿದವರ ಹಿಂದೆ ಬಿದ್ದ ಖಾಕಿ

ಶಿವಮೊಗ್ಗ: ಈ ಬಾರಿ ಈದ್ ಮಿಲಾದ್ ಹಬ್ಬವನ್ನು ಶಿವಮೊಗ್ಗದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ಹಬ್ಬದ ಮೆರವಣಿಗೆ ವೇಳೆ ಕಪ್ಪು ಚುಕ್ಕೆ ಎಂಬಂತೆ ಕಲ್ಲು ತೂರಾಟ ನಡೆದು, ಕೋಮು ಗಲಭೆ ಸಹ ಉಂಟಾಗಿದೆ. ಅಷ್ಟಕ್ಕೂ ಅದ್ದೂರಿ ಹಬ್ಬ ಆಚರಣೆಗೆ 5 ಕೋಟ ರೂ.ಗೂ ಅಧಿಕ ಹಣ ಸಂಗ್ರಹವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಮಲೆನಾಡಿನ ಹಿಂದೂಗಳ ಹಬ್ಬ ಆಗಿರಬಹುದು, ಮುಸ್ಲಿಮರ ಹಬ್ಬ ಆಗಿರಬಹುದು ಬಹಳ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ. ಆದರೆ ಈ ಬಾರಿ ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬವನ್ನುಬಹಳ ಅದ್ದೂರಿಯಾಗಿ […]

ನಮ್ಮವರು ಖಡ್ಗ ತೆಗೆದುಕೊಂಡರೆ ಡೈರೆಕ್ಟ್ ಪಾಕಿಸ್ತಾನಕ್ಕೆ ಹೋಗುತ್ತೀರಿ

SHARE ಯಾದಗಿರಿ: ನಮಗೆ ಖಡ್ಗ ತೋರಿಸುತ್ತೀರಾ? ನಮ್ಮವರು ಖಡ್ಗ ತೆಗೆದುಕೊಂಡರೆ ಡೈರೆಕ್ಟ್ ಆಗಿ ಪಾಕಿಸ್ತಾನಕ್ಕೆ ಹೋಗುತ್ತೀರಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಯಾದಗಿರಿಯ ಶಹಾಪುರದಲ್ಲಿ ಹಿಂದೂ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಮಾತನಾಡಿದ ಶಾಸಕ ಯತ್ನಾಳ್, ನೀವು ತಾಲಿಬಾನ್‌ಗಳಿಗೆ ಸಪೋರ್ಟ್ ಮಾಡುವ ವಾತಾವರಣ ರಾಜ್ಯದಲ್ಲಿ ನಿರ್ಮಾಣವಾಗಿದೆ. ನಾವು ಶಾಂತಿಯುತ ಗಣೇಶ ವಿಸರ್ಜನೆ ಮಾಡುತ್ತಿದ್ದೇವೆ. ಆದರೆ ಕೋಲಾರದಲ್ಲಿ ಖಡ್ಗ ಪ್ರದರ್ಶನ ಮಾಡಿದರು. ಶಿವಮೊಗ್ಗದಲ್ಲಿ ಔರಂಗಜೇಬ್, ಟಿಪ್ಪುವಿನ ಭಾವಚಿತ್ರ ಹಾಕಿ ನಮ್ಮ ಸಮಾಜಕ್ಕೆ ಸವಾಲು ಹಾಕಿದ್ದಾರೆ. ರಾಜ್ಯದಲ್ಲಿ ಮುಸ್ಲಿಂ […]

ಮಹಿಳೆಯರ ರಾಜಕೀಯ ಮೀಸಲಾತಿಗೆ ಮುನ್ನುಡಿ ಬರೆದದ್ದು ಕಾಂಗ್ರೆಸ್

ಬೆಂಗಳೂರು: ಈಗ ಕೇಂದ್ರ ಸರ್ಕಾರ ಜಾರಿ ಮಾಡಿದ್ದೀವಿ ಎಂದು ಹೇಳಿಕೊಳ್ಳುತ್ತಿರುವ ಮಹಿಳೆಯರ ರಾಜಕೀಯ ಮೀಸಲಾತಿಗೆ ಮುನ್ನುಡಿ ಬರೆದದ್ದು ಕಾಂಗ್ರೆಸ್ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಮಹಾತ್ಮ ಗಾಂಧಿ ಅವರ […]

ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ

ದಾವಣಗೆರೆ: ರಾಜ್ಯ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪಅವರು ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯನವರು, ನಮ್ಮ ಸರ್ಕಾರದಲ್ಲಿ 7 ಮಂದಿ ಲಿಂಗಾಯತರೇ ಸಚಿವರಿದ್ದಾರೆ. ನಮ್ಮ ಸರ್ಕಾರ ಯಾವ ಸಮುದಾಯಕ್ಕೂ ಅನ್ಯಾಯ ಮಾಡಿಲ್ಲ. ನನ್ನ ಬಳಿ ಅಂಕಿಅಂಶಗಳಿವೆ ಎಂದು ತಿರುಗೇಟು ನೀಡಿದ್ದರು. ಸದ್ಯ ಈಗ ಮತ್ತೆ ಶಾಸಕ ಶಾಮನೂರು ಶಿವಶಂಕರಪ್ಪ […]

ಟ್ರ್ಯಾಕ್ ಮೇಲೆ ಕಲ್ಲು, ರಾಡ್‌ಗಳನ್ನಿಟ್ಟ ಕಿಡಿಗೇಡಿಗಳು – ವಂದೇ ಭಾರತ್ ರೈಲು ತುರ್ತು ನಿಲುಗಡೆ

ಜೈಪುರ: ರೈಲ್ವೆ ಹಳಿಯ ಮೇಲೆ ದುಷ್ಕರ್ಮಿಗಳು ಕಲ್ಲು  ಹಾಗೂ ರಾಡ್‌ಗಳನ್ನಿಟ್ಟು  ಅಡಚಣೆಗೆ ಪ್ರಯತ್ನಿಸಿದ್ದು, ತಕ್ಷಣವೇ ಎಚ್ಚೆತ್ತುಕೊಂಡ ವಂದೇ ಭಾರತ್ ರೈಲಿನ ಪೈಲಟ್‌ಗಳು ರೈಲನ್ನು ತುರ್ತಾಗಿ ನಿಲ್ಲಿಸಿ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. ಘಟನೆ ಸೋಮವಾರ ಬೆಳಗ್ಗೆ 9:55ರ ವೇಳೆಗೆ ನಡೆದಿದೆ. ಉದಯಪುರದಿಂದ ಜೈಪುರಕ್ಕೆ ವಂದೇ ಭಾರತ್ ರೈಲು ಚಲಿಸುತ್ತಿತ್ತು. ಈ ವೇಳೆ ಹಳಿಯ ಮೇಲೆ ಕೆಲವು ಕಲ್ಲುಗಳನ್ನಿಟ್ಟಿರುವುದನ್ನು ಪೈಲಟ್‌ಗಳು ಗಮನಿಸಿದ್ದಾರೆ. ದೊಡ್ಡ ಅಪಘಾತವನ್ನು ತಡೆಯಲು ಪೈಲಟ್‌ಗಳು ತಕ್ಷಣವೇ ರೈಲನ್ನು ನಿಲ್ಲಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿದಾಡುತ್ತಿದೆ. ಹಳಿಯ […]

ರಾಜ್ಯದ ಜನರಿಗೆ ಅನ್ಯಾಯವಾಗ್ತಿದೆ; ಸರ್ಕಾರ ಸ್ಪಷ್ಟ ನಿಲುವಿಗೆ ಬರಲಿ

ಮಂಡ್ಯ: ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೊದಲಿನಿಂದಲೂ ಎಡವಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡುವೆ ಬಹಳ ವ್ಯತ್ಯಾಸ ಇದೆ. ಆದ್ದರಿಂದ ರಾಜ್ಯದ ಜನರಿಗೆ ಅನ್ಯಾಯವಾಗ್ತಿದೆ ಎಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಕಾವೇರಿ ವಿಚಾರವಾಗಿ ಇನ್ನೂ ಸುಪ್ರೀಂಕೋರ್ಟ್​ಗೆ ಅರ್ಜಿ ಹಾಕಿಲ್ಲ. ಜನರ ರಕ್ಷಣೆ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಸರ್ಕಾರ ಸ್ಪಷ್ಟ ನಿಲುವಿಗೆ ಬರಲಿ, ನಾವು ಸಹಕಾರ ನೀಡುತ್ತೇವೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದರು. ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ಮಾಜಿ […]

ಉದಯನಿಧಿ ಸ್ಟಾಲಿನ್​​ನನ್ನು ಗಲ್ಲಿಗೇರಿಸಿ: ಕಾಂಗ್ರೆಸ್​ ಶಾಸಕ

ಕೋಲಾರ ಅ.02: ಹಿಂದೂ ಧರ್ಮ ಇಲ್ಲ ಎಂದು ಹೇಳುವವರನ್ನು ಗಲ್ಲಿಗೇರಿಸಬೇಕು. ಉದಯನಿಧಿ ಸ್ಟಾಲಿನ್ ಅವರಿಗೆ ದುಡ್ಡು ಜಾಸ್ತಿ ಆಗಿ ಹುಚ್ಚರಾಗಿದ್ದಾರೆ. ಅವರಿಗೆ ಎರಡೂ, ಮೂರು ಹುಚ್ಚು ನಾಯಿ ಕಚ್ಚಿದೆ ಹೀಗಾಗಿ ಹುಚ್ಚರಾಗಿದ್ದಾರೆ. ನಾವು ಇರುವುದು ಭಾರತ ದೇಶದಲ್ಲಿ. ನಿನ್ನ ಧರ್ಮವನ್ನು ನೀನು ಪಾಲನೆ ಮಾಡು. ಧರ್ಮವನ್ನು ಪಾಲನೆ ಮಾಡಬೇಡ ಎಂದು ಹೇಳುವುದಕ್ಕೆ ಯಾರಿಗೂ ಹಕ್ಕಿಲ್ಲ. ನನ್ನ ಧರ್ಮವನ್ನು ಇಲ್ಲ ಎಂದು ಹೇಳುವುದಕ್ಕೆ ನೀನು ಯಾರು? ಎಂದು ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹರಿಹಾಯ್ದರು. ಕೋಲಾರದ ಗಾಂದಿವನದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ […]

ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ ಬಿಜೆಪಿ ಕಿಡಿ

ಬೆಂಗಳೂರು: ಶಿವಮೊಗ್ಗ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ ಜಿ ಪರಮೇಶ್ವರ್ ನೀಡಿರುವ ಬೇಜವಾಬ್ದಾರಿ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶಕ್ಕೆ ಕಾರಣವಾಗಿದೆ. ಶಿವಮೊಗ್ಗ ಘಟನೆಗೆ ಕಾರಣ ಬಹಿರಂಗಪಡಿಸಲ್ಲ ಎಂಬ ಗೃಹ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಡಿಸಿಎಂ ಡಾ. ಅಶ್ವಥ್ ನಾರಾಯಣ, ಯಾರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿಸಬೇಕು. ಇದು ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ. ರಕ್ಷಣೆ ಮಾಡುವುದು, ಮುಚ್ಚಿ ಹಾಕುವ ಗೃಹ ಇಲಾಖೆ ಮತ್ತು ಸರ್ಕಾರ ಪ್ರಯತ್ನ ಖಂಡನೀಯ ಎಂದು ಮಾಜಿ ಡಿಸಿಎಂ […]