ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ: ಯಡಿಯೂರಪ್ಪ
ಶಿವಮೊಗ್ಗ: ವಿಪಕ್ಷ ನಾಯಕನ ಆಯ್ಕೆ ಈಗಾಗಲೇ ವಿಳಂಬ ಆಗಿದೆ. ಎಲ್ಲರೂ ವಿಪಕ್ಷ ನಾಯಕನ ಆಯ್ಕೆ ಯಾವಾಗ ಎಂಬ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಆದಷ್ಟು ಬೇಗ ವಿಪಕ್ಷ ನಾಯಕನ ಆಯ್ಕೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಬಿಜೆಪಿ ವತಿಯಿಂದ ಇಂದಿನಿಂದ ಬರ ಅಧ್ಯಯನ ಪ್ರವಾಸ ಆರಂಭವಾಗಿದೆ ಎಂದು ಹೇಳಿದರು. ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯ ಶತಮಾನೋತ್ಸವ ಸಮಾರಂಭ ಇರುವ ಹಿನ್ನೆಲೆಯಲ್ಲಿ ನಾನು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ಹೀಗಾಗಿ […]







































































































































































































































































































































































































































































































































































































































































































































































































































































































































































































































































































































