November 3, 2026

ಹೈಕಮಾಂಡ್ ನೀನು ಸಿಎಂ ಆಗು ಅಂದ್ರೆ ನಾನು ಸಿದ್ಧ: ಪ್ರಿಯಾಂಕ್ ಖರ್ಗೆ

ಮೈಸೂರು: ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಾಲ್ಕು ಜನ ಕುಳಿತು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ. ಜಿಲ್ಲಾ ಪಂಚಾಯತ್ ಸದಸ್ಯರಿಂದ ಹಿಡಿದು ಶಾಸಕರವರೆಗೆ ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರವಿದೆ. ಇದರಲ್ಲಿ ತಪ್ಪು ಏನು ಇಲ್ಲ. […]

ಮೂರ್ನಾಲ್ಕು ದಿನದಲ್ಲಿ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಸಿದ್ಧ: ಡಿಸಿಎಂ

ಹುಬ್ಬಳ್ಳಿ: ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿತ್ತು. 75% ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರನ್ನು ಭೇಟಿ ಆಗಿ ಬಂದಿದ್ದಾರೆ. ಅವರೆಲ್ಲರೂ ಈಗಾಗಲೇ ಅಭ್ಯರ್ಥಿಗಳ ವರದಿ ತಯಾರಿ ಮಾಡಿಕೊಂಡಿದ್ದಾರೆ. ವೀಕ್ಷಕರು ಇನ್ನೂ ಅಭ್ಯರ್ಥಿಗಳ ವರದಿ ಕೊಟ್ಟಿಲ್ಲ, ಈ ಬಗ್ಗೆ ನಮ್ಮ ವರಿಷ್ಠರು ಸಹ ಕೆಲವು ಸಲಹೆ ನೀಡಿದ್ದಾರೆ ಎಂದಿದ್ದಾರೆ. ಕರ್ನಾಟಕಕ್ಕೆ 50ನೇ ವರ್ಷ, […]

ಗಂಡನಿಗೆ ಹೆಂಡ್ತಿ ಮೇಲೆ ಸಂಶಯ, ಮಾವನಿಗೆ ಸೊಸೆ ಮೇಲೆ ಅನುಮಾನ- ಸಿಕ್ಕ ಫಲಿತಾಂಶ ಆತ್ಮಹತ್ಯೆ

ಬೆಂಗಳೂರು: ಕುಟುಂಬದಲ್ಲಿ ಹಣಕಾಸಿಗೇನು ಕೊರತೆ ಇರಲಿಲ್ಲ. ಕೋಟಿ ಕೋಟಿಯಷ್ಟು ಹಣ ಇದ್ರೂ ಹಣದ ದಾಹ ತೀರಲಿಲ್ಲ. ಹಣದ ದಾಹದ ಜೊತೆಗೆ ಗಂಡನಿಗೆ ಹೆಂಡತಿ ಮೇಲೆ ಸಂಶಯ. ಮಾವನಿಗೆ ಸೊಸೆ ಮೇಲೆ ಅನುಮಾನ. ಕೊನೆಗೆ ಸಿಕ್ಕ ಫಲಿತಾಂಶ ಆತ್ಮಹತ್ಯೆ. ಅಮೇರಿಕಾದಲ್ಲಿ ಚೆನ್ನಾಗಿ ಓದಿ ಉನ್ನತ ವ್ಯಾಸಂಗ ಮಾಡಿದ್ದ ಐಶ್ವರ್ಯ ಚಂದ್ರಲೇಔಟ್ ನ ನಿವಾಸಿ ಸುಬ್ರಹ್ಮಣಿಯವರ ಏಕೈಕ ಪುತ್ರಿ. ಸುಬ್ರಹ್ಮಣಿಯೂ ಆಸ್ತಿ ಅಂತಸ್ತಿನಲ್ಲಿ ಸ್ವಲ್ಪ ಚೆನ್ನಾಗಿಯೇ ಇದ್ದರು. ತನ್ನ ಮಗಳನ್ನ ತನಗಿಂತ ಸಿರಿವಂತನಿಗೆ ಕೊಟ್ಟು ಮದುವೆ ಮಾಡಬೇಕು ಅನ್ನೋ ಆಸೆ ಇತ್ತು. […]

ಪಬ್‌ನಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಹಲ್ಲೆ

ಬೆಂಗಳೂರು: ಪಬ್‌ವೊಂದರಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಆರ್‌ಆರ್ ನಗರದ ಐಡಿಯಲ್ ಹೋಮ್ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಐಡಿಯಲ್ ಹೋಮ್ ಬಳಿಯ ಪಬ್‌ನಲ್ಲಿ ಅಕ್ಟೋಬರ್ 25ರಂದು ಘಟನೆ ನಡೆದಿದ್ದು, ಪಬ್‌ನಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶ್ರೇಯಸ್ ಹಾಗೂ ಆತನ ಸ್ನೇಹಿತರು ರಾತ್ರಿ 10:45ರ ಸುಮಾರಿಗೆ ಪಬ್‌ಗೆ ಬಂದಿದ್ದರು. ಈ ವೇಳೆ ಪಬ್‌ನಲ್ಲಿ ಕನ್ನಡ ಹಾಡು ಹಾಕಲಾಗಿತ್ತು. […]

ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ; ಹಮಾಸ್‌ ಕಮಾಂಡರ್‌ ಸೇರಿ 60ಕ್ಕೂ ಹೆಚ್ಚು ಮಂದಿ ಬಲಿ

ಟೆಲ್‌ ಅವೀವ್‌: ಗಾಜಾಪಟ್ಟಿಯ ಅತಿದೊಡ್ಡ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ಸೇನೆಯು ಬುಧವಾರ ಭೀಕರ ದಾಳಿ ನಡೆಸಿದೆ. ಇಸ್ರೇಲ್‌ ನಡೆಸಿದ ವಾಯುದಾಳಿಯಲ್ಲಿ ಹಮಾಸ್‌ ಉಗ್ರರ ಟಾಪ್‌ ಕಮಾಂಡರ್‌ ಇಬ್ರಾಹಿಂ ಬ್ಯಾರಿ ಹತ್ಯೆಗೀಡಾಗಿದೆ. ಇಸ್ರೇಲ್‌ ಮೇಲೆ ನಡೆದ ಅಕ್ಟೋಬರ್ 7ರ ಹಮಾಸ್‌ ದಾಳಿಯಲ್ಲಿ ಈತ ಪ್ರಮುಖ ಮಾರ್ಗದರ್ಶಕನೂ ಆಗಿದ್ದ ಎನ್ನಲಾಗಿದೆ. ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ಬಾಂಬ್ ದಾಳಿಯಲ್ಲಿ ಹತ್ತಾರು ಮಂದಿ ಸಾವನ್ನಪ್ಪಿದ್ದಾರೆ. ಬ್ಯಾರಿಯನ್ನು ತೊಡೆದುಹಾಕಲು ನಿರಾಶ್ರಿತರ ಶಿಬಿರವನ್ನು ಧ್ವಂಸ ಮಾಡಿರುವುದಾಗಿ ಇಸ್ರೇಲ್‌ನ ರಕ್ಷಣಾ ಪಡೆಗಳು […]

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌, ಕುಡಿಯುವ ನೀರು: ಸಿಎಂ ಘೋಷಣೆ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌ ಮತ್ತು ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ನಗರದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಉತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಕನ್ನಡ ರಾಜ್ಯೋತ್ಸವಕ್ಕೆ ಸರ್ಕಾರಿ ಶಾಲೆಗಳಿಗೆ ಉಚಿತ ಘೋಷಣೆಯ ಉಡುಗೊರೆ ನೀಡಿದರು.  ಉಚಿತ ವಿದ್ಯುತ್, ಕುಡಿಯುವ ನೀರು ಬೇಕು ಎಂದು ಶಿಕ್ಷಣ ಇಲಾಖೆ ಬೇಡಿಕೆ ಇಟ್ಟಿತ್ತು. ಇಂದಿನಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್‌, ಕುಡಿಯುವ ನೀರನ್ನು ಉಚಿತವಾಗಿ ನೀಡಲಾಗುವುದು ಎಂದು ವೇದಿಕೆಯಲ್ಲೇ ಸಿಎಂ ಘೋಷಿಸಿದರು. […]

ಕರ್ನಾಟಕ ಆಧುನಿಕ ಉದ್ಯಮದ ತೊಟ್ಟಿಲು – ರಾಜ್ಯೋತ್ಸವಕ್ಕೆ ಶುಭಕೋರಿದ ಮೋದಿ, ಸಿಎಂ

ಬೆಂಗಳೂರು: ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಕನ್ನಡ ಸಾಧಕರ ಭಾವಚಿತ್ರಗಳನ್ನಿಟ್ಟು ಹಲವು ಕನ್ನಡ ಗೀತೆಗಳನ್ನು ಮೇಳೈಸುವ ಮೂಲಕ ಜನ ಸಂಭ್ರಮಿಸುತ್ತಿದ್ದಾರೆ. ಸಂಭ್ರಮವನ್ನು ಮತ್ತಷ್ಟು ಇಮ್ಮಡಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರೂ ಕನ್ನಡದಲ್ಲೇ ಶುಭ ಹಾರೈಸಿದ್ದಾರೆ. ಟ್ವಿಟ್ಟರ್‌ ಎಕ್ಸ್‌ ಖಾತೆಯಲ್ಲಿ ಶುಭ ಹಾರೈಸಿರುವ ಮೋದಿ ಅವರು, ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ […]

ಬಹಿರಂಗ ಹೇಳಿಕೆ ನೀಡದಂತೆ ವಾರ್ನಿಂಗ್- ಕಾಂಗ್ರೆಸ್‍ನಲ್ಲಿ ಪಟ್ಟದ ಫೈಟ್‍ಗೆ ಬಿತ್ತಾ ಬ್ರೇಕ್?

ಬೆಂಗಳೂರು: ಕಾಂಗ್ರೆಸ್‍ನಲ್ಲಿ ನಡೆಯುತ್ತಿರುವ ಸಿಂಹಾಸನ ಸಮರಕ್ಕೆ ಕದನ ವಿರಾಮ ಘೋಷಣೆ ಆಯ್ತಾ..?, ಡೆಲ್ಲಿಯ ಆ ಸಂದೇಶಕ್ಕೆ ಕಾಂಗ್ರೆಸ್‍ನ ಇಬ್ಬರು ನಾಯಕರು ಒಪ್ಪಿದ್ರಾ ಅನ್ನೋ ಕುತೂಹಲ ಮೂಡಿದೆ. ಅಧಿಕಾರ ಹಂಚಿಕೆ ಬಗ್ಗೆ ಮಾತನಾಡುವರ ಬಾಯಿ ಮುಚ್ಚಿಸಿ ಅಂತ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸಂದೇಶ ರವಾನಿಸಿದೆ ಎನ್ನಲಾಗಿದೆ. ವಿಧಾನಸಭೆ ಚುನಾವಣೆಯಲ್ಲೂ ಕುರ್ಚಿ ಕದನ ಜೋರಾಗಿಯೇ ಇತ್ತು. ಸಿದ್ದರಾಮಯ್ಯ, ಡಿಕೆಶಿ ಬಣಗಳ ನಡುವೆ ಕಾದಾಟ ಬೂದಿ ಮುಚ್ಚಿದ ಕೆಂಡದಂತಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋಗ್ತಿದೆ ಅಂದಾಗ ಡೆಲ್ಲಿಗೆ ಕರೆಸಿ ರಾಹುಲ್ […]

ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ MESನಿಂದ ಕರಾಳ ದಿನ ಆಚರಣೆ

ಚಿಕ್ಕೋಡಿ: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ ) ಕರಾಳ ದಿನ ಆಚರಿಸಲಾಗುತ್ತಿದೆ. ಬೆಳಗಾವಿ ಜಿಲ್ಲಾಡಳಿತ ನಿಷೇಧದ ಮಧ್ಯೆಯೂ ಕರಾಳ ದಿನಾಚರಣೆಗೆ ಎಂಇಎಸ್ ತಯಾರಿ ನಡೆಸಿದ್ದು, ಶಿವಸೇನೆ ಉದ್ಧವ್ ಠಾಕ್ರೆ ಬಣದಿಂದ ಬೆಳಗಾವಿ ಚಲೋಗೆ ಕರೆ ನೀಡಲಾಗಿದೆ.  ಶಿವಸೇನೆ ಉದ್ಧವ್ ಠಾಕ್ರೆ ಬಣದ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ, ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಳಗಾವಿ ಚಲೋಗೆ ಕರೆ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ಕೊಲ್ಹಾಪುರ ಜಿಲ್ಲೆ ಕಾಗಲ್ ಬಳಿ ಜಮಾವಣೆಯಾಗಲು ಕರೆ ನೀಡಿದ್ದು, ಈಗಾಗಲೇ ಚಲೋ ಯಾತ್ರೆ ಆರಂಭಿಸಿದ್ದಾರೆ.  ಭಗವಾ […]

ಕೇಂದ್ರ ನೀರಾವರಿ ಸಚಿವರ ಉತ್ತರಕ್ಕೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ನಿಮ್ಮ ಸರ್ಕಾರಕ್ಕೆ ಮುಖಭಂಗವಾಗುವುದನ್ನು ತಪ್ಪಿಸುವ ಸಲುವಾಗಿ ತಾವು ವ್ಯರ್ಥ ಕಸರತ್ತು ಮಾಡುತ್ತಿದ್ದೀರಿ. ಜನತೆಯ ಬಾಯಾರಿಕೆಯನ್ನು ತಣಿಸಬೇಕಾದ ಕೇಂದ್ರ ಸರ್ಕಾರ ಬದಲಿಗೆ ತನ್ನ ಸುಳ್ಳುಗಳ ದಾಹ ತಣಿಸಿಕೊಳ್ಳಲು ಮುಂದಾಗಿ ನೀರಿನ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ ನಡೆಸಿರುವುದು ಬೇಸರದ ಸಂಗತಿ. ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿರುವುದು ನೀವು ಮತ್ತು ನಿಮ್ಮ ಸರ್ಕಾರ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಕೇಂದ್ರ ಜಲಸಂನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ತಿರುಗೇಟು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಸೋಮವಾರ ಗಜೇಂದ್ರ […]