ರಾಜ್ಯ ಸರ್ಕಾರದ್ದು ಹುಲಿ ಉಗುರು ಎಂಬ ಸದಾರಮೆ ನಾಟಕ: ಸಿ.ಟಿ. ರವಿ ವಾಗ್ದಾಳಿ
ಚಿಕ್ಕಮಗಳೂರು: ರಾಜ್ಯ ಸರ್ಕಾರದ್ದು ಹುಲಿ ಉಗುರು ಎಂಬ ಸದಾರಮೆ ನಾಟಕ. ರಾಜ್ಯದ ಜನರ ದಾರಿ ತಪ್ಪಿಸಲು ಕಾಂಗ್ರೆಸ್ ಹುಲಿ ಉಗುರಿನ ನಾಟಕವಾಡುತ್ತಿದೆ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಮಾಧ್ಯಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಸಿ.ಟಿ.ರವಿ ಅವರು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಐಟಿ ದಾಳಿಯಲ್ಲಿ ಪತ್ತೆಯಾದ ಕೋಟ್ಯಂತರ ಹಣದ ಚರ್ಚೆಯ ದಾರಿ ತಪ್ಪಿಸುವ ನಾಟಕವನ್ನು ಕಾಂಗ್ರೆಸ್ ಆಡಿದೆ. ಜನರ ಆಕ್ರೋಶಕ್ಕೆ ವಿರಾಮ ಹಾಕಲು, ಕಮಿಷನ್ ಕಲೆಕ್ಟರ್, ಡೆಪ್ಯೂಟಿ ಕಮಿಷನ್ ಕಲೆಕ್ಟರ್ ಅವರ […]







































































































































































































































































































































































































































































































































































































































































































































































































































































































































































































































































































































