ಇಲಿ ಜ್ಚರಕ್ಕೆ ಮಡಿಕೇರಿಯಲ್ಲಿ ಯುವಕ ಬಲಿ
ಮಡಿಕೇರಿ: ಇಲಿ ಜ್ಚರಕ್ಕೆ ಯುವಕನೋರ್ವ ಬಲಿಯಾದ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಸಮೀಪದ ಚೆಂಬೇರಿ ಆನೆಪಾರೆಯ ಯುವಕನೋರ್ವ ಲಿಬೀನ್ ಇಲಿ ಜ್ವರಕ್ಕೆ ಬಲಿಯಾಗಿದ್ದಾನೆ. ಆನೆಪಾರೆ ನಿವಾಸಿ ಕೂಲಿ ಕಾರ್ಮಿಕರಾದ ಬಾಲನ್ ಅವರ ಪುತ್ರ ಲಿಬೀನ್ ಜ್ವರ ಪೀಡಿತನಾಗಿ ಕೇರಳದ ಪೆರಿಯಾರಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಜಾಂಡೀಸ್ ಕಾಯಿಲೆ ಇದೆ ಎಂದು ವೈದ್ಯರು ತಿಳಿಸಿದ್ದರು.ನಂತರ ಇದರೊಂದಿಗೆ ಇಲಿ ಜ್ವರ ಕೂಡ ಬಾಧಿಸಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಇಲಿ ಜ್ವರದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸದ್ಯ […]







































































































































































































































































































































































































































































































































































































































































































































































































































































































































































































































































































































