ಕನ್ಯೆ ಸಿಗದಿದ್ದಕ್ಕೆ ಮನನೊಂದು ರೈತ ಆತ್ಮಹತ್ಯೆ
ಹಾವೇರಿ: ರಾಜ್ಯದಲ್ಲಿ ರೈತರನ್ನು ಮದುವೆಯಾಗಲು ವಧುವೇ ಸಿಗುತ್ತಿಲ್ಲ ಎಂಬ ವಿಷಯ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದೇ ಕಾರಣಕ್ಕೆ ಸಾಕಷ್ಟು ರೈತರು ಹಳ್ಳಿಗಳನ್ನು ತೊರೆದು ಉದ್ಯೋಗ ಅರಸಿ ಪಟ್ಟಣದತ್ತ ಮುಖ ಮಾಡುತ್ತಿದ್ದಾರೆ. ಇದೀಗ ರೈತರೊಬ್ಬರು ಮದುವೆಯಾಗಲು ಹೆಣ್ಣು ಸಿಗಲಿಲ್ಲ ಎಂಬ ಕಾರಣಕ್ಕೆ ಮನ ನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಡೆದಿದೆ.. ಮಂಜುನಾಥ ನಾಗನೂರು ಆತ್ಮಹತ್ಯೆಗೆ ಶರಣಾದ ರೈತ. ಮಂಜುನಾಥನಿಗೆ ಮದುವೆ ಮಾಡಲು ಕುಟುಂಬಸ್ಥರು ಕಳೆದ ಏಳೆಂಟು ವರ್ಷಗಳಿಂದ ಹುಡುಗಿಯನ್ನು ಹುಡುಕುತ್ತಿದ್ದರಂತೆ. […]







































































































































































































































































































































































































































































































































































































































































































































































































































































































































































































































































































































