ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ – ಪ್ರೊ. ಭಗವಾನ್ ಮನೆಗೆ ಮುತ್ತಿಗೆಗೆ ಯತ್ನ
ಮೈಸೂರು: ನಗರದಲ್ಲಿ ಶುಕ್ರವಾರ (ಅ.13) ನಡೆದ ಮಹಿಷ ಉತ್ಸವದ ವೇಳೆ ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್ ಭಗವಾನ್ ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿಂದು ಪ್ರೊ.ಭಗವಾನ್ ನಿವಾಸಕ್ಕೆ ಮೈಸೂರು ಚಾಮರಾಜ ಕ್ಷೇತ್ರದ ಒಕ್ಕಲಿಗರ ಸಂಘದಿಂದ ಮುತ್ತಿಗೆಗೆ ಯತ್ನಿಸಲಾಯಿತು. ಅವಹೇಳನಕಾರಿ ಹೇಳಿಕೆಯಿಂದ ಆಕ್ರೋಶಗೊಂಡಿದ್ದ ಪ್ರತಿಭಟನಾಕಾರರು ಮನೆಗೆ ಮುತ್ತಿಗೆಹಾಕಲು ಯತ್ನಿಸಿದರು. ಬ್ಯಾರಿಕೇಡ್ ಕಿತ್ತು ಭಗವಾನ್ ಮನೆಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು (Mysuru City Police) ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ಹಾಗೂ ತಳ್ಳಾಟ ನೂಕಾಟವೂ ನಡೆದಿದ್ದು, […]







































































































































































































































































































































































































































































































































































































































































































































































































































































































































































































































































































































