November 4, 2026

ನಟ ಬ್ಯಾಂಕ್ ಜನಾರ್ದನ್ ಅವರಿಗೆ ಹೃದಯಾಘಾತ

ಕನ್ನಡ ಸಿನಿಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ನಿನ್ನೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಕನ್ನಡದ ಅಷ್ಟೂ ಹೆಸರಾಂತ ನಟರೊಂದಿಗೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ದನ್. ಹಾಸ್ಯ ನಟರಾಗಿ […]

ಬೆಂಗಳೂರು ಬಂದ್ ಎಫೆಕ್ಟ್- ಕೊನೆ ಕ್ಷಣದಲ್ಲಿ 13 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕಾವೇರಿ ಉಳಿವಿಗಾಗಿ ಬೆಂಗಳೂರು ಗ್ರಾಮಾಂತರ-ಬೆಂಗಳೂರು ಬಂದ್‍ನ ಪರಿಣಾಮ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಪರಿಣಾಮ ಬೀರಿದೆ. ಬೆಂಗಳೂರು ಬಂದ್ (Bengaluru Bandh) ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಪ್ರಯಾಣಿಕರು ಬೆಂಗಳೂರು ಪ್ರಯಾಣ ರದ್ದು ಮಾಡಿರುವ ಹಿನ್ನೆಲೆಯಲ್ಲಿ 13 ದೇಶೀಯ ವಿಮಾನಗಳ ಆಗಮನ ಕೊನೆ ಕ್ಷಣದಲ್ಲಿ ರದ್ದಾಗಿದೆ. ದೆಹಲಿ, ಕೊಚ್ಚಿ, ಮಂಗಳೂರು, ಮುಂಬೈ ಸೇರಿದಂತೆ ಇತರೆ 13 ವಿಮಾನಗಳ ಹಾರಾಟವನ್ನ ಏರ್ ಲೈನ್ಸ್ ನವರು ಕೊನೆ ಕ್ಷಣದಲ್ಲಿ ರದ್ದು ಮಾಡಿದ್ದಾರೆ. ಹೀಗಾಗಿ ಸಹಜವಾಗಿ ಏರ್‌ಪೋರ್ಟ್‌ ನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ […]

ಬೆಂಗಳೂರು ಬಂದ್‌ – ಪ್ರತಿಕ್ರಿಯೆ ನೀಡದೇ ತೆರಳಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸಕ್ಕೆ ತೆರಳಿದ್ದಾರೆ. ಮಾಧ್ಯಮಗಳು ಬೆಂಗಳೂರು ಬಂದ್‌ಗೆ ಸಂಬಂಧಿಸಿದ್ದಂತೆ ಳಿದ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೇ ಸಿಎಂ ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸಕ್ಕೆ ತೆರಳಿದರು.  ಹೆಚ್‌ಎಎಲ್‌ನಿಂದ ವಿಶೇಷ ವಿಮಾನ ಮೂಲಕ ಮೈಸೂರಿಗೆ ಸಿಎಂ ಪ್ರಯಾಣಿಸಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ಕಾವೇರಿ ಸಮಸ್ಯೆ ಪರಿಹರಿಸಲು ಎಲ್ಲ ಪಕ್ಷದ ನಾಯಕರಿಗೆ ನಟ ಕಿಚ್ಚ ಸುದೀಪ್​ ಬಹಿರಂಗ ಪತ್ರ

ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ನೀರು ಹಂಚಿಕೆ ಕುರಿತಂತೆ ಬಿಕ್ಕಟ್ಟು ನಿರ್ಮಾಣ ಆಗಿದೆ. ಕನ್ನಡ ಚಿತ್ರರಂಗದ ಅನೇಕ ಕಲಾವಿದರು ರೈತರ ಪರವಾಗಿ ಹೋರಾಟ ಮಾಡುತ್ತಿದ್ದಾರೆ. ಈಗಾಗಲೇ ದರ್ಶನ್​, ಅಭಿಷೇಕ್​ ಅಂಬರೀಷ್​ ಸೇರಿದಂತೆ ಅನೇಕರು ಹೋರಾಟದಲ್ಲಿ ಭಾಗಿ ಆಗಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಹಲವು ಸೆಲೆಬ್ರಿಟಿಗಳು ತಮ್ಮ ಬೆಂಬಲ ಸೂಚಿಸಿದ್ದಾರೆ. ಕಿಚ್ಚ ಸುದೀಪ್​ ಅವರು ಕಾವೇರಿ ನೀರಿನ ಸಮಸ್ಯೆ ಕುರಿತು ಬಹಿರಂಗ ಪತ್ರ ಬರೆದಿದ್ದಾರೆ. ಈ ಸಮಸ್ಯೆ ಪರಿಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲ ಪಕ್ಷದ ನಾಯಕರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ. ಸುದೀಪ್​ ಬರೆದ […]

ಕುರುಬೂರು ಶಾಂತಕುಮಾರ್ ಪೊಲೀಸ್ ವಶಕ್ಕೆ

ಬೆಂಗಳೂರು: ಬೆಂಗಳೂರು ಬಂದ್‌ಗೆ ಕರೆ ನೀಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾವೇರಿಗಾಗಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಬೆಂಗಳೂರು ಬಂದ್ ಹಿನ್ನೆಲೆ ಬೆಳ್ಳಂಬೆಳಗ್ಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ಆರಂಭಗೊಂಡಿದೆ. ಈ ವೇಳೆ ಕುರುಬೂರು ಶಾಂತಕುಮಾರ್ ಹಾಗೂ ಇತರೆ ಕೆಲವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾ ಮೆರವಣಿಗೆಗೂ ಮುನ್ನವೇ ಶಾಂತಕುಮಾರ್ ಹಾಗೂ ಇತರರನ್ನು ಖಾಕಿ ಪಡೆ ವಶಕ್ಕೆ ಪಡೆದಿದ್ದಾರೆ.  ಈ […]

ಕುಮಾರಸ್ವಾಮಿ ಒಬ್ಬರೇ ದೇವತಾ ಮನುಷ್ಯ

ಕೋಲಾರ: ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರೊಬ್ಬರೇ ದೇವತಾ ಮನುಷ್ಯ ಇನ್ನೆಲ್ಲರೂ ಪಾಪಿಗಳು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ವ್ಯಂಗ್ಯವಾಡಿದ್ದಾರೆ. ಕೋಲಾರದಲ್ಲಿ (Kolar) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆಮನೆಗೂ ಮದ್ಯಭಾಗ್ಯ ಕೊಟ್ಟು ಸರ್ಕಾರ ದುಡ್ಡು ಮಾಡಲು ಮುಂದಾಗಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.  ಅಲ್ಲದೇ ಕಾವೇರಿ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿ ನೀರು ಬಿಡುವುದನ್ನ ನಿಲ್ಲಿಸಬಹುದು ಎಂಬ ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿ, ಸಂವಿಧಾನ ಬರೆದಿರುವುದು ಅಂಬೇಡ್ಕರ್ ಅವರೇ ಹೊರತು ಕುಮಾರಸ್ವಾಮಿ ಅಲ್ಲ. ಸಂವಿಧಾನದ ನಿಯಮಗಳು ಏನು […]

ಶಾಸಕ ನಾರಾಯಣಸ್ವಾಮಿ, ಸಂಸದ ಮುನಿಸ್ವಾಮಿ ನಡುವೆ ಜಟಾಪಟಿ

ಕೋಲಾರ: ಅದು ಜಿಲ್ಲಾಡಳಿತದಿಂದ ಆಯೋಜನೆ ಮಾಡಲಾಗಿದ್ದ, ಉಸ್ತುವಾರಿ ಸಚಿವ ಬೈರತಿ ಸುರೇಶ್ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಜನತಾ ದರ್ಶನ ಕಾರ್ಯಕ್ರಮ. ಆದರೆ ಅಲ್ಲಿ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಎಸ್‌ಎನ್ ನಾರಾಯಣಸ್ವಾಮಿ ನಡುವೆ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಟಾಪಟಿ ಕೆಲಕಾಲ ಅಲ್ಲೋಕ ಕಲ್ಲೋಲ ಸೃಷ್ಟಿ ಮಾಡಿದೆ. ಜನತಾ ದರ್ಶನ ವೇದಿಕೆ ಮೇಲೆ ಶಾಸಕ ಎಸ್‌ಎನ್ ನಾರಾಯಣಸ್ವಾಮಿ ಹಾಗೂ ಸಂಸದ ಮುನಿಸ್ವಾಮಿ ನಡುವೆ ಜಟಾಪಟಿ ನಡೆದಿದೆ. ಸಂಸದ ಮುನಿಸ್ವಾಮಿಯನ್ನು ಹಿಡಿದು ವೇದಿಕೆಯಿಂದ ಕರೆದೊಯ್ಯುತ್ತಿರುವ ಎಸ್‌ಪಿ ನಾರಾಯಣ್, ಇನ್ನೊಂದೆಡೆ ವೇದಿಕೆ ಎದುರು ಕುಳಿತಿರುವ […]

ಕೇಂದ್ರವೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿ

ಬೆಂಗಳೂರು : ಕಾವೇರಿ ವಿಚಾರವಾಗಿ ಕನ್ನಡ ನಾಡಿಗೆ 60 ವರ್ಷಗಳಿಂದ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರವು 5 ಜನರ ಸಮಿತಿ ರಚಿಸಿ ಕಾವೇರಿಯ ಕೆಆರ್‌ಎಸ್‌ ಆಣೆಕಟ್ಟೆ ಪರಿಶೀಲನೆ ಮಾಡಿಸಿ, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಕನ್ನಡ ನಾಡಿಗೆ ನ್ಯಾಯ ಕೊಡಿಸುವಂತೆ ರಾಜ್ಯಸಭೆ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದರು.  ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗೊ ನಾನು ಪ್ರಧಾನ ಮಂತ್ರಿ ಗಳಿಗೆ ಪತ್ರ ಬರೆದಿದ್ದೇನೆ. ಇದರ ವಿವರಗಳನ್ನು ನಿಮ್ಮ ಮುಂದೆ ಚಿಕೊಳ್ಳಲಿದ್ದೇನೆ. ನಾನು […]

ಐಪಿಎಸ್ ಅಮೃತ್ ಪಾಲ್​ಗೆ ಜಾಮೀನು

ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿ​ಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 5 ಲಕ್ಷ ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸಬೇಕು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ ಎಂದು ಷರತ್ತು ವಿಧಿಸಿದೆ. ನೇಮಕಾತಿ ಪ್ರಕರಣ ಸಂಬಂಧ ಕಿರಿಯ ತನಿಖಾಧಿಕಾರಿಗಳು ಅಮೃತ್ ಪಾಲ್ ಅವ​ರನ್ನು ತನಿಖೆ ನಡೆಸುತ್ತಿದ್ದಾರೆ. ಇವರಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸುವಂತೆ ಎಸ್​ಪಿಪಿ ಪ್ರಸನ್ನ ಕುಮಾರ್​ ಅವರು ಹೈಕೋರ್ಟ್​ಗೆ ಮನವಿ ಮಾಡಿದ್ದರು. […]

ಕಾಂಗ್ರೆಸ್​ನವರಿಗೆ ಕರ್ನಾಟಕದ ಬಗ್ಗೆ ಚಿಂತೆಯಿಲ್ಲ

ವಿಜಯಪುರ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಲು ತಯಾರಿಲ್ಲ. ಕಾವೇರಿ ನೀರನ್ನು ಅವ್ಯಾಹತವಾಗಿ ಬಿಡುತ್ತಿದ್ದಾರೆ. ಅವರಿಗೆ ಕರ್ನಾಟಕದ ಬಗ್ಗೆ ಚಿಂತನೆಯೇ ಇಲ್ಲ. ಅವರು ಕೇವಲ ಒಬ್ಬ ಜೋಕರ್​​​ನನ್ನು ಪ್ರಧಾನಮಂತ್ರಿ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಜೋಕರ್​​ಗೆ ಹೋಲಿಸಿದ್ದಾರೆ. ರಾಹುಲ್‌ ಗಾಂಧಿ […]