November 4, 2026

ಗ್ರಾಮಗಳಲ್ಲಿ ಹೊಸ ಮದ್ಯದಂಗಡಿ ತೆರೆಯುವ ವಿಚಾರ ಚರ್ಚಾ ಹಂತದಲ್ಲಿದೆ

ಬಾಗಲಕೋಟೆ ಸೆ.25: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದಂಗಡಿ ತೆರೆಯುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಹಾಗೇ ಸಾರ್ವಜನಿಕ ವಲಯದಿಂದಲೂ ವಿರೋಧಗಳು ವ್ಯಕ್ತವಾಗುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಯಾಗುತ್ತಿದೆ. ಈ ಬಗ್ಗೆ ಸ್ವತಃ ಅಬಕಾರಿ ಇಲಾಖೆ ಸಚಿವರೇ ಸ್ಪಷ್ಟನೆ ನೀಡಿದ್ದಾರೆ. ನಮ್ಮ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲಿ ಪಾಕೇಟ್​​​ನಲ್ಲಿಟ್ಟು ಕದ್ದುಮುಚ್ಚಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಗ್ರಾಹಕರಿಗೆ ಹೊರೆ ಆಗುತ್ತಿದೆ. ಇದನ್ನು ತಪ್ಪಿಸುವುದು ಹೇಗೆ ಎಂಬುವುದರ ಬಗ್ಗೆ ವಿಚಾರ ಮಾಡುತ್ತಿದ್ದಾಗ, ಆ ಏರಿಯಾದಲ್ಲಿ ಮದ್ಯದ ಅಂಗಡಿ ತರೆಯಲು ಅನುಮತಿ […]

ಬೆಂಗಳೂರಿನಲ್ಲಿ ನಾಳೆ ಚಿತ್ರೋದ್ಯಮ ಬಂದ್

ಕಾವೇರಿ ನದಿ ನೀರು ವಿಚಾರವಾಗಿ ಹೋರಾಟ ಮಾಡುತ್ತಿರುವ ರೈತರ ಪರ ನಿಲ್ಲಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ. ನಾಳೆ ನಡೆಯುತ್ತಿರುವ ಬೆಂಗಳೂರು ಬಂದ್ ಗೆ ಬೆಂಬಲವನ್ನೂ ನೀಡಿರುವ ವಾಣಿಜ್ಯ ಮಂಡಳಿಯು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೂ ಚಿತ್ರಮಂದಿರಗಳು ತೆರೆಯುವುದಿಲ್ಲ. ಬೆಂಗಳೂರಿನಲ್ಲಿ ಯಾವುದೇ ಸಿನಿಮಾ ಚಿತ್ರೀಕರಣ ಕೂಡ ಇರುವುದಿಲ್ಲ ಎಂದಿದ್ದಾರೆ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಮ್. ಸುರೇಶ್. ಕಾವೇರಿ ವಿಚಾರ  ಗಂಭೀರವಾದ ವಿಚಾರ. ಇದಕ್ಕಾಗಿ ನಮ್ಮ ಸಂಪೂರ್ಣ ಬೆಂಬಲ ಇರುತ್ತೆ. ಚಿತ್ರರಂಗದ ಎಲ್ಲಾ ಅಂಗ […]

ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಸರ್ಕಾರ ತಯಾರಿ ನಡೆಸಿದ್ದು, ಇದೀಗ ವಾರ್ಡ್ ಪುನರ್ ವಿಂಗಡಣೆಯ ಅಂತಿಮ ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕ ಆಕ್ಷೇಪಣೆ ಬಳಿಕ 225 ವಾರ್ಡಗಳನ್ನು ಅಧಿಕೃತಗೊಳಿಸಿ ಇಂದು (ಸೆಪ್ಟೆಂಬರ್ 25) ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ ಈ ಹಿಂದೆ ಬಿಜೆಪಿ ಸರ್ಕಾರ ಮಾಡಿದ್ದ  243 ವಾರ್ಡ್​ಗಳನ್ನು ಕಾಂಗ್ರೆಸ್ ಸರ್ಕಾರ ಇದೀಗ 225ಕ್ಕೆ ಇಳಿಸಿದೆ. ಇದರೊಂದಿಗೆ  224 ವಾರ್ಡ್​ಗಳಿಗೆ ಚುನಾವಣೆ ನಡೆಯಲಿದೆ. ವಾರ್ಡ್​ಗಳ ಸಂಖ್ಯೆಯನ್ನು 243ರಿಂದ 225ಕ್ಕೆ ಇಳಿಸಿ ಸರ್ಕಾರ ಆಗಸ್ಟ್ 4ರಂದು ಅಧಿಸೂಚನೆ ಹೊರಡಿಸಿತ್ತು. ಇದಾದ […]

ಮಳೆ ಬರುವುದಕ್ಕೂ ಸರ್ಕಾರಕ್ಕೂ ಸಂಬಂಧ ಇದೆಯಾ? 

ರಾಮನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಗಳವಾರ ಬೆಂಗಳೂರು ಹಾಗೂ ರಾಮನಗರ ಬಂದ್ ವಿಚಾರದ ಬಗ್ಗೆ ರಾಮನಗರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಭಾಷೆ, ಜಲ, ರಾಜ್ಯದ ಬಗ್ಗೆ ಅನ್ಯಾಯವಾದ ವೇಳೆ ಸಂಘಟನೆಗಳು ಬಂದ್ ಮಾಡುವುದು ಸಹಜ. ಹೀಗಾಗಿ ಅವರಿಗೆ ನಮ್ಮಿಂದ ಯಾವುದೇ ಧಕ್ಕೆ ಉಂಟಾಗುವುದಿಲ್ಲ. ಮಳೆ ಬರುವುದಕ್ಕೂ ಸರ್ಕಾರಕ್ಕೂ ಸಂಬಂಧ ಇದೆಯಾ? ಇದೊಂದು ನೈರ್ಸಗಿಕ ವಿಕೋಪ. ಕಳೆದ ವರ್ಷ 660 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೇವೆ. ಈಗ ರಾಜ್ಯದಲ್ಲಿ ಮಳೆ ಇಲ್ಲ. ಈ ಬಗ್ಗೆ ಮಾನಿಟರಿಂಗ್ […]

ಬಂದ್ ಬಿಸಿ ನಡುವೆ ಮಂಗಳವಾರ CWRC ಸಭೆ 

ನವದೆಹಲಿ: ಕಾವೇರಿ ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ಕಾವೇರಿ ನೀರು ಹರಿಸುವಂತೆ ತಮಿಳುನಾಡು ರೈತರು ಪ್ರತಿಭಟನೆ ನಡೆಸುತ್ತಿದ್ದರೇ ಇತ್ತ ಕರ್ನಾಟಕದಲ್ಲಿ ನೀರು ಹರಿಸದಂತೆ ಒತ್ತಾಯಿಸಿ ಮಂಡ್ಯ ಬಂದ್ ಬಳಿಕ ಬೆಂಗಳೂರು ಬಂದ್‌ಗೂ ಕರೆ ನೀಡಲಾಗಿದೆ. ಎರಡೂ ರಾಜ್ಯಗಳಲ್ಲಿ ರೈತರ ಹೋರಾಟ ತೀವ್ರವಾಗುತ್ತಿರುವ ಹೊತ್ತಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಮಂಗಳವಾರ ಸಭೆ ಕರೆದಿದೆ. ಮಂಗಳವಾರದ ಸಭೆಯಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಹೇಳಲು ಕರ್ನಾಟಕ ನಿರ್ಧರಿಸಿದೆ. ನೀರಿನ ಕೊರತೆ ನಡುವೆ CWRC, […]

ಸೂಕ್ತ ಬಂದೋಬಸ್ತ್ ಕೈಗೊಳ್ಳುವಂತೆ ಪೊಲೀಸ್​ ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು ಸೆ.25: ನಿತ್ಯ ಐದು ಸಾವಿರ ಕ್ಯೂಸೆಕ್​​ನಂತೆ 15 ದಿನಗಳ ಕಾಲ ತಮಿಳುನಾಡಿಗೆ  ಕಾವೇರಿ ​​ನದಿ ನೀರು ಬಿಡುವ ಸಿಡಬ್ಲ್ಯುಎಂಎ ಮತ್ತು ಸಿಡಬ್ಲ್ಯುಆರ್‌ಸಿ ಆದೇಶವನ್ನು ಸುಪ್ರಿಂಕೋರ್ಟ್ ಎತ್ತಿ ಹಿಡಿದಿದೆ. ನ್ಯಾಯಾಲಯದ ಈ ನಿರ್ಧಾರವನ್ನು ವಿರೋಧಿಸಿ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು, ರೈತರು ಮತ್ತು ಬಿಜೆಪಿ ಪ್ರತಿಭಟನೆ ಮಾಡುತ್ತಿವೆ. ಮಂಗಳವಾರ (ಸೆ.26) ರಂದು ಬೆಂಗಳೂರು ಬಂದ್​​ಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿದರು. ಬಂದ್​ ವೇಳೆ ಯಾವುದೇ […]

ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಬಿಜೆಪಿ-ಜೆಡಿಎಸ್ ಶಾಸಕರು ಚರ್ಚೆ ಮಾಡಿದ್ದಾರೆ

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಎರಡು ಪಕ್ಷದ ಶಾಸಕರು, ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅನೇಕ ಬಿಜೆಪಿ-ಜೆಡಿಎಸ್ ನಾಯಕರು ದೋಸ್ತಿಗೆ ಅಸಮಾಧಾನ ವ್ಯಕ್ತಪಡಿಸಿ ನನ್ನ ಬಳಿ ಮಾತನಾಡಿದ್ದಾರೆ. ನಾನು ಸಿಎಂ, ಮಂತ್ರಿಗಳು, ಪ್ರಮುಖ ನಾಯಕರು ಈ ಬಗ್ಗೆ ಕುಳಿತು ಮಾತಾಡಬೇಕಿದೆ. ಚರ್ಚೆ ಮಾಡಿ ಅಸಮಾಧಾನ ಇರೋರ ಜೊತೆ ನಾನು ಮಾತನಾಡುತ್ತೇನೆ ಎಂದರು. ಬಹಳಷ್ಟು ನಾಯಕರು ಕಾಂಗ್ರೆಸ್‌ಗೆ ಬರುತ್ತೇವೆ ಎಂದು […]

ದಲಿತ ಮಹಿಳೆಗೆ ಮೂತ್ರ ಕುಡಿಸಿದ ದುಷ್ಕರ್ಮಿಗಳು

ಪಾಟ್ನಾ: ತಂದೆ-ಮಗ ದಲಿತ ಮಹಿಳೆಯ ಬಳಿ ಸಾಲ ವಾಪಸ್ ಪಡೆದು ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟಿದ್ದು, ಮಹಿಳೆ ಹಣ ಕೊಡಲು ನಿರಾಕರಿಸಿದ ಬಳಿಕ ಆಕೆಯನ್ನು ವಿವಸ್ತ್ರಗೊಳಿಸಿ, ಅಮಾನುಷವಾಗಿ ಹಲ್ಲೆ ನಡೆಸಿ, ಮೂತ್ರ ಕುಡಿಸಿದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಘಟನೆಯಿಂದ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪೊಲೀಸರ ಪ್ರಕಾರ, ಆರೋಪಿಗಳಾದ ಪ್ರಮೋದ್ ಸಿಂಗ್ ಮತ್ತು ಆತನ ಮಗ ಅಂಶು ಮತ್ತು ಇತರ ನಾಲ್ವರು ಶನಿವಾರ ರಾತ್ರಿ 10 ಗಂಟೆಯ ಸುಮಾರಿಗೆ […]

ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದ ನಟ ದರ್ಶನ್

ಮೈಸೂರು: ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ ಗರಂ ಆಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಈ ಬಗ್ಗೆ ಮಾತನಾಡಿರೋ ನಟ ದರ್ಶನ್, ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದಿದ್ದು ನಟರು ಹೋರಾಟಕ್ಕೆ ಬರುತ್ತಿಲ್ಲ ಎಂಬ ಕೂಗಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ದರ್ಶನ್, ಸುದೀಪ್, ಶಿವಣ್ಣ, ಯಶ್, ಅಭಿ ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ ಎಂದು ಪ್ರಶ್ನಿಸಿದ್ದಾರೆ.  ಮೊನ್ನೆ ಬಂದ ತಮಿಳು ಚಿತ್ರದಲ್ಲಿ ಕರ್ನಾಟಕದಲ್ಲೇ ಕೋಟಿ ಕೋಟಿ ಮಾಡಿದವನು ನಿಮಗೆ ಕಾಣ್ತಿಲ್ವ? ಕರ್ನಾಟಕದಲ್ಲೇ ಒಬ್ಬ […]

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ

ಬೆಂಗಳೂರು: ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯಾದ್ಯಂತ ಏಕ ಕಾಲಕ್ಕೆ ಜನತಾ ದರ್ಶನಕ್ಕೆ ನಾಡು ಇಂದು ಸಾಕ್ಷಿಯಾಗಲಿದೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ ಹೊಣೆಗಾರಿಕೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್‌ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಕಾಳಜಿ ಈ ಜನತಾ ದರ್ಶನದ ಹಿಂದಿದೆ. ಮುಖ್ಯಮಂತ್ರಿಗಳ ಸೂಚನೆ ಏನು?ಆಡಳಿತಕ್ಕೆ ಚುರುಕು ಮುಟ್ಟಿಸಿ, ಸರ್ಕಾರಿ ಯಂತ್ರಾಂಗವನ್ನು ಕ್ರಿಯಾಶೀಲಗೊಳಿಸುವ ಪ್ರಯತ್ನವಾಗಿ […]