November 4, 2026

ಮಹಿಳಾ ಮೀಸಲಾತಿ ಅಂಗೀಕಾರ – ಇದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ

ಹುಬ್ಬಳ್ಳಿ: ಮೋದಿ ಅವರ ಉದಾತ್ತ ಚಿಂತನೆಯಲ್ಲಿ ಮೂಡಿ ಬಂದ ಕಲ್ಪನೆ ಮಹಿಳಾ ಮೀಸಲಾತಿ ಇವತ್ತು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ನಾರಿ ಶಕ್ತಿ ವಂದನ್ ಅಧಿನಿಯಮ ಅಂಗೀಕಾರದ ಬಳಿಕ ತಮ್ಮ ದೆಹಲಿ ಕಚೇರಿಯಿಂದ ಹೇಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿರುವ ಅವರು, ಜಗತ್ತಿನ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಮಹಿಳಾ ಮೀಸಲಾತಿ ಇಲ್ಲ. ಭಾರತದಲ್ಲಿ ಮೋದಿ ಅವರ ನಾಯಕತ್ವದಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಬಂದಿದೆ. 1980-90ರ ದಶಕದಿಂದ ಮಹಿಳಾ ಮೀಸಲಾತಿ […]

ಪ್ರತಿಭಟನಾಕಾರರಿಗೆ ಎಚ್ಚರಿಕೆ ಕೊಟ್ಟ ಗೃಹಸಚಿವ ಜಿ.ಪರಮೇಶ್ವರ್

ಬೆಂಗಳೂರು/ಮಂಡ್ಯ: ಕಾವೇರಿಗಾಗಿ ನಾಳೆ ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಮಂಡ್ಯ ಬಂದ್ ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕೆಆರ್‌ಎಸ್ , ಮಂಡ್ಯ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿ ಕೆಎಸ್‌ಆರ್‌ಪಿ, ಆರ್‌ಎಎಫ್ ತುಕಡಿಯನ್ನ ನಿಯೋಜನೆ ಮಾಡಲಾಗಿದೆ. ಪ್ರತಿಭಟನೆ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಪ್ರತಿಭಟನೆ ಮಾಡೂರು ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು. ಒಂದು ವೇಳೆ ಆ ರೀತಿ ಮಾಡಿದ್ರೆ […]

ಬಿಜೆಪಿ, ಕಾಂಗ್ರೆಸ್ ಒಂದೊಂದು ದಿಕ್ಕಿನಲ್ಲಿದೆ

ನವದೆಹಲಿ: ಕಾವೇರಿ ರಕ್ಷಣೆಗಾಗಿ ರೈತರ ಹೋರಾಟ ಭುಗಿಲೇಳುತ್ತಿದ್ದಂತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸಹ ದನಿ ಎತ್ತಿದ್ದಾರೆ. ದೆಹಲಿಯಲ್ಲಿಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಒಗ್ಗಟ್ಟು ಎಲ್ಲಿದೆ? ಕಾಂಗ್ರೆಸ್, ಬಿಜೆಪಿ ಒಂದೊಂದು ದಿಕ್ಕಿನಲ್ಲಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕಾವೇರಿ ವಿಚಾರದಲ್ಲಿ ನಾನು ಏನೂ ಮಾತನಾಡಿಲ್ಲ. ಆದ್ರೆ ಕುಮಾರಸ್ವಾಮಿ ದೊಡ್ಡ ಅನಾಹುತ ಆಗುವ ಮುನ್ನವೇ ಎಚ್ಚರಿಕೆ ನೀಡಿದ್ದರು. ಅಧಿಕಾರಿಗಳು ಎಲ್ಲಾ ಸರಿಯಾಗುತ್ತೆ ಅಂತಾರೆ. ಈಗಾಗಲೇ ಎಲ್ಲಾ ಮುಗಿದುಹೋಗಿದೆ, ಸುಪ್ರೀಂ ಕೋರ್ಟ್ ಆದೇಶ ನೀಡಿ ಆಗಿದೆ. ಈಗ ನಾನೇನು […]

ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

ಬೆಂಗಳೂರು: ಇಲ್ಲಿನ ಯಶವಂತಪುರ ಯಾರ್ಡ್ ಬಳಿ ನಡೆದ ಬಿಎಂಡಬ್ಲ್ಯೂ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ.PauseUnmute ಮನಮೋಹನ್ (31) ನಿಖಿಲ್ (25) ಮೃತ ದುರ್ದೈವಿಗಳು. ಮುಂಜಾನೆ 3:30ರ ಸಮಯದಲ್ಲಿ ಘಟನೆ ನಡೆದಿದೆ.  ಅತಿವೇಗವಾಗಿ ಬಿಎಂಡಬ್ಲೂ ಬೈಕ್ ಚಾಲನೆ ಮಾಡುತ್ತಿದ್ದ ಯುವಕರು ಯಶವಂತಪುರದಿಂದ ಆರ್‌ಎಂಸಿ ಯಾರ್ಡ್ ರೋಡ್ ಕಡೆಗೆ ಡ್ರೈವ್‌ ಮಾಡಿಕೊಂಡು ಬರುತ್ತಿದ್ದರು. ಮದ್ಯ ಸೇವಿಸಿ ಬೈಕ್ ಚಲಾಯಿಸುತ್ತಿದ್ದದ್ದು ಮಾತ್ರವಲ್ಲದೇ ಹೆಲ್ಮೆಟ್ ಸಹ ಧರಿಸಿರಲಿಲ್ಲ. ಕೊನೆಗೆ ಬೈಕ್ ನಿಯಂತ್ರಣಕ್ಕೆ ಸಿಗದೇ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರು ಬೈಕ್‌ನಿಂದ ಕೆಳಗೆ ಬಿದ್ದು […]

ಯಾವುದೇ ಕಾರಣಕ್ಕೂ ಭಾರತವನ್ನ ಪ್ರಚೋದಿಸುವುದಿಲ್ಲ

ಒಟ್ಟಾವಾ: ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಆರೋಪ ಮಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಈಗ ಭಾರತದ ಪರ ಮೃದುವಾಗಿ ಮಾತನಾಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ಭಾರತವು ಅಭಿವೃದ್ಧಿ ಪ್ರಧಾನ ದೇಶವಾಗಿದೆ, ನಾವು ಯಾವುದೇ ಕಾರಣಕ್ಕೂ ಭಾರತವನ್ನು ಪ್ರಚೋದಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಜಸ್ಟಿನ್‌ ಟ್ರುಡೋ ತಿಳಿಸಿದ್ದಾರೆ.  ಮುಂದುವರಿದು, ಭಾರತ ಅಭಿವೃದ್ಧಿ ಪ್ರಧಾನ ದೇಶ ಎಂಬುದರಲ್ಲಿ ಎರಡು ಮಾತಿಲ್ಲ. ಅಂತಹ ದೇಶದೊಂದಿಗೆ ನಾವು ಜೊತೆಗೂಡಿ ಪ್ರಾದೇಶಿಕ ಹಾಗೂ ಜಾಗತಿಕ ಏಳಿಗೆ […]

ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಹಾಲಶ್ರೀ

ಬೆಂಗಳೂರು: ಚೈತ್ರಾ ಅಂಡ್‌ ಗ್ಯಾಂಗ್‌ನ ವಂಚನೆ ಪ್ರಕರಣ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದೆ. ಸ್ವಾಮೀಜಿ ಬಂಧನದ ಬಳಿಕ ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಗಿದಿದ್ದು, ಅಭಿನವ ಹಾಲಶ್ರೀ ಸಿಸಿಬಿ ತನಿಖಾಧಿಕಾರಿ (CCB Investigation Officer) ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. Advertisement: 0:08Close Player ಉದ್ಯಮಿ ಗೋವಿಂದ ಬಾಬು ಪೂಜಾರಿಯಿಂದ ಹಣ ಪಡೆದಿದ್ದು ನಿಜ. ಎಂಎಎಲ್‌ಎ ಟಿಕೆಟ್ ವಿಚಾರವಾಗಿ ಹಣ ಪಡೆದಿದ್ದೆ, ಆದರೆ ಟಿಕೆಟ್ ಸಿಗಲಿಲ್ಲವಾದ್ದರಿಂದ ಹಣ ವಾಪಸ್ ಕೊಡೋದಾಗಿ ಹೇಳಿದ್ದೆ. ಈಗಾಗಲೆ 50 ಲಕ್ಷ ಹಣ ವಾಪಸ್‌ ಕೊಟ್ಟಿದ್ದೇನೆ. ಉಳಿದ ಹಣ […]

ಬಳುಕುವ ಬಳ್ಳಿಯಂತೆ ಮಿಂಚಿದ ಶ್ರೀಲೀಲಾ

ಕನ್ನಡದ ನಟಿಮಣಿ ಶ್ರೀಲೀಲಾ ತೆಲುಗು ನೆಲದಲ್ಲಿ ಮೋಡಿ ಮಾಡ್ತಿದ್ದಾರೆ. ಸದ್ಯ ಶೋಲ್ಡರ್‌ಲೆಸ್ ಡ್ರೆಸ್ ಫೋಟೋ ಶೇರ್ ಮಾಡುವ ಮೂಲಕ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಶೂಟ್ ಪಡ್ಡೆಹುಡುಗರ ನಿದ್ದೆ ಕೆಡಿಸಿದೆ.  ಪಿಂಕ್ ಮತ್ತು ಬ್ಲ್ಯಾಕ್ ಮಿಶ್ರಿತ ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಕಿಸ್ ಬೆಡಗಿ ಶ್ರೀಲೀಲಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಚೆಂದದ ಡ್ರೆಸ್‌ಗೆ ಸಿಂಪಲ್ ಜ್ಯುವೆಲ್ಲರಿ ಹಾಕಿ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ಸಖತ್ ಗ್ಲ್ಯಾಮರಸ್‌ ಆಗಿ ಪೋಸ್ ಕೊಟ್ಟಿದ್ದಾರೆ. ಇತ್ತೀಚೆಗೆ ದುಬೈನಲ್ಲಿ ಸೈಮಾ ಅವಾರ್ಡ್ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. […]

ISIS ಉಗ್ರನೊಂದಿಗೆ ನಿರಂತರ ಸಂಪರ್ಕ ಹೊಂದಿದ್ದ ಯುವಕನಿಗೆ ಆರ್ಥಿಕ ಸಂಕಷ್ಟ

ಯಾದಗಿರಿ: ಉಗ್ರನೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಯಾದಗಿರಿ ಜಿಲ್ಲೆಯ ಶಹಾಪುರದ ವ್ಯಕ್ತಿಯೊಬ್ಬನನ್ನ ಜಾರ್ಖಂಡ್‌ನ ಎನ್‌ಐಎ ತಂಡ ವಿಚಾರಣೆ ನಡೆಸಿತ್ತು. ರಾಂಚಿಯ ಇನ್ಸ್ಪೆಕ್ಟರ್ ಸಚ್ಚಿದಾನಂದ ಶರ್ಮಾ ನೇತೃತ್ವದ ನಾಲ್ವರು ಅಧಿಕಾರಿಗಳ ತಂಡ ಶಹಾಪುರಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿತ್ತು. ಅಧಿಕಾರಿಗಳು ವಿಚಾರಣೆ ನಡೆಸಿ ತೆರಳಿದ ಬಳಿಕ ಆತ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದು ತಿಳಿದುಬಂದಿದೆ. ಉಗ್ರನೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 20 ರಂದು ರಾಂಚಿಯ NIA ಕಚೇರಿಗೆ ವಿಚಾರಣೆಗೆ ಬರುವಂತೆ ಅಧಿಕಾರಿಗಳು ಯುವಕನಿಗೆ ನೋಟಿಸ್ ಕಳುಹಿಸಿದ್ದರು. […]

2 ತಿಂಗಳ ಹಿಂದೆಯೇ ಚೈತ್ರಾ ಕುಂದಾಪುರ ವಿಚಾರ ನನ್ನ ಗಮನಕ್ಕೆ ಬಂದಿತ್ತು

ಮಂಗಳೂರು: ಚೈತ್ರಾ ಕುಂದಾಪುರ ಪ್ರಕರಣವು ಎರಡು ತಿಂಗಳ ಹಿಂದೆಯೇ ನನ್ನ ಗಮನಕ್ಕೆ ಬಂದಿತ್ತು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಜ್ರದೇಹಿ ಮಠದ ಸ್ವಾಮೀಜಿಗಳು ನನ್ನೊಂದಿಗೆ ಈ ವಿಚಾರವನ್ನ ಹಂಚಿಕೊಂಡಿದ್ರು. ನಿಮ್ಮ ಪಾತ್ರ ಇಲ್ಲವೆಂದ ಮೇಲೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಸ್ವಾಮೀಜಿಯವರಿಗೆ ಹೇಳಿದ್ದೆ. ಈ ರೀತಿ ಪ್ರಕರಣಗಳು ಎಲ್ಲಿ ಕೂಡ ಆಗಬಾರದು ಎಂದು ಹೇಳಿದರು. ಚೈತ್ರಾ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಚೈತ್ರಾ ಕುಂದಾಪುರ […]

ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆ ಕಡ್ಡಾಯವಲ್ಲ

ನವದೆಹಲಿ: ಹೊಸ ಮತದಾರರ ಪಟ್ಟಿ ದೃಢೀಕರಣಕ್ಕಾಗಿ ಮತದಾರರ ಆಧಾರ್ ಸಂಖ್ಯೆಯ ವಿವರಗಳನ್ನು ಕೇಳುವ 6 ಹಾಗೂ 6ಬಿ ನಮೂನೆಗಳಲ್ಲಿ (ಇ-ರೋಲ್‌ನಲ್ಲಿ ನೋಂದಣಿಗಾಗಿ) ಸೂಕ್ತವಾದ ಸ್ಪಷ್ಟ ಬದಲಾವಣೆಗಳನ್ನು ಮಾಡುವುದಾಗಿ ಭಾರತದ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ತಿಳಿಸಿದೆ. ಚುನಾವಣಾ ಆರೋಗದ ಪರ ಹಾಜರಾದ ಹಿರಿಯ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಹಾಗೂ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠಕ್ಕೆ ಮತದಾರರ ನೋಂದಣಿ (ತಿದ್ದುಪಡಿ) ನಿಯಮ 26-ಬಿ 2022ರ ಅಡಿಯಲ್ಲಿ ಆಧಾರ್ ಸಂಖ್ಯೆಯನ್ನು ಸಲ್ಲಿಸುವುದು […]