November 4, 2026

ಕರ್ನಾಟಕಕ್ಕೆ ಮತ್ತೆ ಶಾಕ್‌ ಕೊಟ್ಟ ಸುಪ್ರೀಂ ಕೋರ್ಟ್‌!

ನವದೆಹಲಿ: ಕರ್ನಾಟಕದಿಂದ ತಮಿಳುನಾಡಿಗೆ 5,000 ಕ್ಯೂಸೆಕ್ಸ್‌ ನೀರು ಬಿಡುವಂತೆ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ. ಈ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ತಲಾ 5 ಸಾವಿರ ಕ್ಯೂಸೆಕ್ಸ್‌ ನೀರು ಹರಿಸಬೇಕು ಎಂದು ತಿಳಿಸಿದೆ. ಕನ್ನಡ ನಾಡಿನಲ್ಲಿ ತೀವ್ರ ಮಳೆ ಅಭಾವದ ಹಿನ್ನೆಲೆಯಲ್ಲಿಯೂ ತಮಿಳುನಾಡು ನಮಗೆ ಸಾಮಾನ್ಯ ವರ್ಷಗಳಂತೆ ನೀರು ಹರಿಸುವಂತೆ ಪಟ್ಟು ಹಿಡಿದಿದ್ದು, ಕರ್ನಾಟಕ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಈ ಬಗ್ಗೆ ಕರ್ನಾಟಕ […]

ಭಾರತ ವಿರೋಧಿ ಪ್ರಚಾರಕ್ಕೆ ಖಲಿಸ್ತಾನ್ ಉಗ್ರರ ಜೊತೆ ಕೈ ಜೋಡಿಸಿದ ಪಾಕ್

ನವದೆಹಲಿ: ಭಾರತ ವಿರೋಧಿ ಪ್ರಚಾರಕ್ಕೆ ಸಂಚು ರೂಪಿಸಲು ಕೆನಡಾದಲ್ಲಿರುವ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಏಜೆಂಟ್‍ಗಳು ಮತ್ತು ಖಲಿಸ್ತಾನ್ ಭಯೋತ್ಪಾದಕ ಗುಂಪುಗಳ ಮುಖ್ಯಸ್ಥರು ಇತ್ತೀಚೆಗೆ ವ್ಯಾಂಕೋವರ್‌ನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿವೆ. ಇದೇ ವಾರ ಸಭೆ ನಡೆದಿದ್ದು, ಸಿಖ್ಸ್ ಫಾರ್ ಜಸ್ಟಿಸ್ (ಎಸ್‍ಎಫ್‍ಜೆ) ಮುಖ್ಯಸ್ಥ ಗುರುಪತ್‍ವಂತ್ ಸಿಂಗ್ ಪನ್ನುನ್ ಮತ್ತು ಖಲಿಸ್ತಾನಿ ಸಂಘಟನೆಗಳ ಇತರ ಮುಖ್ಯಸ್ಥರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಭಾರತದ ವಿರುದ್ಧ ನಕಾರಾತ್ಮಕ ಪ್ರಚಾರ ಮಾಡಲು ತಿರ್ಮಾನಿಸಲಾಗಿದೆ. ಅಲ್ಲದೇ ಸಾಧ್ಯವಾದಷ್ಟು ಈ ಯೋಜನೆಯನ್ನು […]

ರಾಜ್ಯದೆಲ್ಲೆಡೆ 1 ವಾರ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ 1 ವಾರದ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಲ್ಲಿ ಮಳೆಯ ಸೂಚನೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.  ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. 

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಹಲವರಿಗೆ ನೋಟಿಸ್ ಜಾರಿ

ಬೆಂಗಳೂರು: ಚೈತ್ರಾ ಕುಂದಾಪುರ ಮತ್ತು ತಂಡ ಎಸಗಿದ ವಂಚನೆ ಪ್ರಕರಣ ಸಂಬಂಧ ಸಿಸಿಬಿ  ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈಗಾಗಲೇ ಅಭಿನವ ಹಾಲಶ್ರೀ ತನಿಖೆ ಆರಂಭಿಸಿದ ತನಿಖಾಧಿಕಾರಿಗಳು ಮತ್ತಷ್ಟು ಮಂದಿಗೆ ನೋಟಿಸ್ ಜಾರಿ ಮಾಡಿ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಪ್ರಕರಣದ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀ ಅವರನ್ನು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಕೋರ್ಟ್ ನೀಡಿದೆ. ಇದರ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ ತನಿಖಾಧಿಕಾರಿಗಳು, ಸ್ವಾಮೀಜಿ ಕಡೆಯಿಂದ ಹಣ ಜಪ್ತಿ ಮಾಡುವ ಹಿನ್ನೆಲೆ ಕರೆದುಕೊಂಡು ಹೋಗಿದ್ದರು. ಇದರ […]

ಬೆಂಗಳೂರಿನ ಹಲವೆಡೆ ಇಂದು ಮದ್ಯ ನಿಷೇಧ

ಬೆಂಗಳೂರು: ದೇಶದೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಏರಿಯಾ ಏರಿಯಾಗಳಲ್ಲಿ ಗಣೇಶ ಕೂರಿಸಿ ಅದ್ದೂರಿ ಪೂಜೆ ಮಾಡಿ, ಪ್ರಸಾದ ಹಂಚಿ ಡಿಜೆಗೆ ಡ್ಯಾನ್ಸ್ ಮಾಡಿ ಕುಣಿದು ಕುಪ್ಪಳಿಸಿದ್ದಾಗಿದೆ. ಸದ್ಯ ಪ್ರತಿಷ್ಟಾಪನೆ ಮಾಡಿದ್ದ ಗಣೇಶನಿಗೆ ಮೆರವಣಿಗೆ ಮೂಲಕ ವಿಸರ್ಜನೆ ಮಾಡುವ ಸಮಯ ಬಂದಿದೆ. ಇಂದು ಬೆಂಗಳೂರಿನ ಹಲವೆಡೆ ಗಣೇಶ ವಿಸರ್ಜನೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಇಂದು ಮದ್ಯ ನಿಷೇಧ ಹೇರಲಾಗಿದೆ. ಬೆಂಗಳೂರಿನ ಕೇಂದ್ರ, ಉತ್ತರ, ಪೂರ್ವ ಮತ್ತು ಈಶಾನ್ಯ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧ ವಿಧಿಸಲಾಗಿದೆ. ಗಣೇಶ […]

ಗೃಹಿಣಿ ಅನುಮಾನಾಸ್ಪದ ಸಾವು – ಪತಿ ಪರಾರಿ

ರಾಯಚೂರು: ಮನೆಯ ಎರಡನೇ ಮಹಡಿಯಿಂದ ಬಿದ್ದು ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಬದ್ರಿನಾಥ ಕಾಲೋನಿಯಲ್ಲಿ ನಡೆದಿದೆ. ಶಿಲ್ಪಾ (28) ಮೃತ ಮಹಿಳೆ. ಈಕೆ ಮನೆಯ ಎರಡನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತಳ ಪತಿ ಶರತ್ ಹಾಗೂ ಅತ್ತೆ-ಮಾವ ಸೇರಿ ಆಕೆಯನ್ನು ಹತ್ಯೆ ಮಾಡಿದ್ದಾರೆ ಎಂದು ಶಿಲ್ಪಾ ಸಂಬಂಧಿಕರು ಆರೋಪಿಸಿದ್ದಾರೆ.  ಘಟನೆ ಹಿನ್ನೆಲೆ ಆಕ್ರೋಶದಲ್ಲಿ ಶರತ್ ತಂದೆಗೆ ಶಿಲ್ಪಾ ಸಂಬಂಧಿಕರು ಥಳಿಸಿದ್ದಾರೆ. ಮಂಗಳವಾರ ರಾತ್ರಿ ಜಗಳ ಮಾಡಿ ಎರಡನೇ ಮಹಡಿಯಿಂದ […]

ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ ಸ್ಯಾಂಡಲ್ ವುಡ್ 

ಹಲವು ದಿನಗಳಿಂದ ಮಂಡ್ಯ ಭಾಗದ ರೈತರು ಕಾವೇರಿ ಹೋರಾಟದಲ್ಲಿ ತೊಡಗಿಕೊಂಡಿದ್ದಾರೆ. ರೈತರು, ರೈತ ಸಂಘಗಳು ಮತ್ತು ಕನ್ನಡಪರ ಹೋರಾಟಗಾರು ಈ ಕಾವೇರಿ ಹೋರಾಟದಲ್ಲಿ ಪಾಲ್ಗೊಂಡಿದ್ದರೂ, ಕನ್ನಡ ಸಿನಿಮಾ ರಂಗದವರು ಮಾತ್ರ ಮೌನವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಇವತ್ತು ಹಲವು ಕಡೆ ಚಿತ್ರರಂಗದವರ ವಿರುದ್ಧ ಪ್ರತಿಭಟನೆ ಕೂಡ ಮಾಡಿದ್ದರು. ವಿರೋಧದ ಹೋರಾಟ ಹೆಚ್ಚಾಗುತ್ತಿದ್ದಂತೆಯೇ ಒಬ್ಬೊಬ್ಬ ನಟರು ಸೋಷಿಯಲ್ ಮೀಡಿಯಾ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ. ಹಿರಿಯ ನಟಿ, ಮಂಡ್ಯ ಕ್ಷೇತ್ರದ ಸಂಸದೆಯೂ ಆಗಿರುವ ಸುಮಲತಾ ಅಂಬರೀಶ್ ಅವರು […]

ಶಿವಕುಮಾರ್ ಒಬ್ಬ ನೀರಿನ ಕಳ್ಳ, ಆಯೋಗ್ಯ

ಶಿವಮೊಗ್ಗ: ರಾಜ್ಯದ ರೈತರ ಹಿತವನ್ನು ಬಲಿಕೊಟ್ಟು ತಮಿಳುನಾಡಿಗೆ ನೀರು ಹರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಒಬ್ಬ ನೀರಿನ ಕಳ್ಳ, ಅಯೋಗ್ಯ ಉಪಮುಖ್ಯಮಂತ್ರಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಾಗದೇ ಭೀಕರ ಬರಗಾಲ ಎದುರಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಹ ಎದುರಾಗಲಿದೆ. ಹೀಗಿರುವಾಗ ಕಾಂಗ್ರೆಸ್ ಸರ್ಕಾರ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿ ರಾಜ್ಯದ ಜನರಿಗೆ ದ್ರೋಹ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ ಕಾಂಗ್ರೆಸ್‍ನವರು ಈ ಬಾರಿ ಲೋಕಸಭೆ […]

ಕಾವೇರಿ ವಿಚಾರದಲ್ಲಿ ಒಗ್ಗಟ್ಟು, ಸರ್ವಪಕ್ಷ ಸಂಸದರ ಬೆಂಬಲ

ನವದೆಹಲಿ: ರಾಜಕೀಯ ಭಿನ್ನಾಭಿಪ್ರಾಯಗಳು ಇದ್ದರೂ ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ರಾಜ್ಯದ ಪರ ನಿಲ್ಲುವುದಾಗಿ ಸರ್ವಪಕ್ಷಗಳ ಸಂಸದರು ಮಾತುಕೊಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ಸರ್ವಪಕ್ಷ ಸಂಸದರ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಸಂಸತ್ ಅಧಿವೇಶನದಲ್ಲಿ ದನಿ ಎತ್ತುವುದಾಗಿ ಎಲ್ಲಾ ಸಂಸದರು ಭರವಸೆ ನೀಡಿದ್ದಾರೆ ಎಂದರು. ಮಂಗಳವಾರ ತಡ ರಾತ್ರಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರನ್ನು ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ. ಅವರು […]

ನೂತನ ಟ್ರಾಮಾ ಕೇರ್ ಸೆಂಟರ್ ಉದ್ಘಾಟನೆ

ತುಮಕೂರು, ಸೆಪ್ಟೆಂಬರ್​ 20: ಜಿಲ್ಲೆಯಲ್ಲಿ ಅಪಘಾತ ಪ್ರಕರಣ ನಿತ್ಯ ಆಗುತ್ತಿರುವುದನ್ನು ನೋಡುತ್ತಿದ್ದೇವೆ. ಗಾಯಾಳುಗಳನ್ನು 70 ಕಿ.ಮೀ. ದೂರದ ಬೆಂಗಳೂರಿಗೆ ಕಳಿಸಬೇಕಿತ್ತು. ಹೀಗಾಗಿ ಜಿಲ್ಲೆಯಲ್ಲಿ ಟ್ರಾಮಾ ಸೆಂಟರ್ ಆರಂಭಿಸಬೇಕೆಂಬ​ ಬೇಡಿಕೆ ಇತ್ತು. ಬಹಳ ದಿನಗಳಿಂದ ಇದ್ದ ಬೇಡಿಕೆ ಈಗ ಈಡೇರಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನೂತನ ಟ್ರಾಮಾ ಕೇರ್ ಸೆಂಟರ್ ಉದ್ಘಾಟನೆ ಬಳಿಕ ಮಾತನಾಡಿದ ಅವರು, 2018-19ನೇ ಸಾಲಿನಲ್ಲಿ ಟ್ರಾಮಾ ಸೆಂಟರ್​​​ಗೆ ಮಂಜೂರಾತಿಯಾಗಿತ್ತು. 56 ಕೋಟಿ ವೆಚ್ಚದ ಆಧುನಿಕ ಟ್ರಾಮಾ ಸೆಂಟರ್​ಗೆ ಅಡಿಗಲ್ಲು ಹಾಕಿತ್ತು. ಮೂರು ತಿಂಗಳ ಹಿಂದೆ […]