ನ್ಯಾಯಕ್ಕಾಗಿ ಧ್ವನಿ ಎತ್ತಿದ ದರ್ಶನ್
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸ್ಯಾಂಡಲ್ವುಡ್ ನಟ-ನಟಿಯರು ಮಾತುಬಿಚ್ಚುತ್ತಿಲ್ಲ ಎಂಬ ಸಂಗತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದೇ ತಡ, ಇದೀಗ ನಟ ದರ್ಶನ ಟ್ವೀಟ್ ಮಾಡಿದ್ದಾರೆ. ಟ್ವೀಟ್ನಲ್ಲಿ ಕಾವೇರಿ ನೀರು ಹಂಚಿಕೆ ಬಗ್ಗೆ ಬರೆದುಕೊಂಡಿದ್ದಾರೆ. ಟ್ವೀಟ್ನಲ್ಲಿ ದರ್ಶನ್ ತೂಗುದೀಪ, ‘‘ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ […]







































































































































































































































































































































































































































































































































































































































































































































































































































































































































































































































































































































