September 16, 2026

ಯಾವುದೇ ಕಾರಣಕ್ಕೂ ಮಲ ಹೊರುವ ಪದ್ಧತಿ ಇರಕೂಡದು

ಬೆಂಗಳೂರು:ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಲ ಹೊರುವ ಪದ್ಧತಿ ಇರಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಗುರುತಿಸಿರುವ ಮಲ ಹೊರುವವರಿಗೆ ಸಹಾಯಧನ ವಿತರಣೆ ಮತ್ತು ಪುನರ್ವಸತಿ ಸಮಾವೇಶವನ್ನು ಉದ್ಘಾಟಿಸಿ, ತಲಾ ೪೦ ಸಾವಿರ ರೂ ಸಹಾಯಧನ ವಿತರಿಸಿ ಮಾತನಾಡಿದ ಅವರು ಯಾರಾದರೂ ಈ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.ಪೌರ ಕಾರ್ಮಿಕರು ಘನತೆಯಿಂದ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ನಮ್ಮ ಪಕ್ಷದ ಮತ್ತು ನಮ್ಮ ಬದ್ಧತೆ. ಹೀಗಾಗಿ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ […]

ಲೋಕಸಭೆಯಲ್ಲಿ ಜನ ಮತ ಹಾಕಿಲ್ಲ ಎಂದರೆ ಗ್ಯಾರಂಟಿ ಅವಶ್ಯಕತೆ ಇಲ್ಲಾ ಎಂದರ್ಥ

ಬೆಂಗಳೂರು:ನಾವು ಗ್ಯಾರಂಟಿ ಕೊಟ್ಟಿದ್ದು ಚುನಾವಣೆಗಾಗಿಯೇ. ಲೋಕಸಭೆಯಲ್ಲಿ ಜನ ಮತ ಹಾಕಿಲ್ಲ ಎಂದರೆ ಗ್ಯಾರಂಟಿ ಅವಶ್ಯಕತೆ ಇಲ್ಲಾ ಎಂದರ್ಥ ಎಂದು ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ ಹೇಳಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಗ್ಯಾರಂಟಿಗಳು ರದ್ದಾಗಬಹುದು ಎಂಬ ಬಾಲಕೃಷ್ಣ ಅವರ ಹೇಳಿಕೆ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಬದಲು ಅಭಿವೃದ್ಧಿಗೆ ಹಣ ಬಳಸಲಿ ಅನ್ನೋದು ನನ್ನ ವೈಯುಕ್ತಿಕ ಅಭಿಪ್ರಾಯ. ನಾವು ಗ್ಯಾರಂಟಿ ಕೊಟ್ಟಿರೋದೇ ಚುನಾವಣೆ ಗೆಲ್ಲೋಕೆ. ಅವರು ದೇವಸ್ಥಾನ ಉದ್ಘಾಟನೆ ಮಾಡಿದ್ದು, […]

ಕಾಂಗ್ರೆಸ್ ಘೋಷಣೆಗಳು ಬೋಗಸ್ ಭರವಸೆ

ಬೆಂಗಳೂರು:ಕಾಂಗ್ರೆಸ್ ಘೋಷಣೆ ಮಾಡಿರುವ ಭರವಸೆಗಳು ಬೋಗಸ್ ಭರವಸೆಗಳು ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಶಾಸಕ ಬಾಲಕೃಷ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಘೋಷಣೆ ಮಾಡಿರುವ ಭರವಸೆಗಳು ಬೋಗಸ್. ಅವರು ಆಕಸ್ಮಿಕವಾಗಿ ಅಧಿಕಾರಕ್ಕೆ ಬಂದಿದ್ದಾರೆ. ಕೇವಲ ೫ ಭರವಸೆಯಲ್ಲ ಸಾಕಷ್ಟು ಭರವಸೆ ಕೊಟ್ಟಿದ್ದಾರೆ. ಅವೆಲ್ಲವೂ ಬೋಗಸ್ ಭರವಸೆಗಳು ಎಂದು ಕಿಡಿಕಾರಿದ್ದಾರೆ.ಅನ್ನಭಾಗ್ಯ ಯೋಜನೆಯಲ್ಲಿ ಮೋಸ ಆಗಿದೆ. ಗೃಹಲಕ್ಷ್ಮೀ ೬೦% ಮಹಿಳೆಯರಿಗೆ ತಲುಪಿಲ್ಲ. ಯುವನಿಧಿ ೫ ಲಕ್ಷ ಎಂದಿದ್ದರು, ಆದರೆ ೩ ಸಾವಿರ […]

ಗ್ಯಾರಂಟಿ ಯೋಜನೆ 5 ವರ್ಷಗಳ ಕಾಲ ಮುಂದುವರಿಯಲಿದೆ

ಬೆಂಗಳೂರು:ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುವುದಿಲ್ಲ. 5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಕೊಡುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆ ರದ್ದಾಗುತ್ತದೆ ಎಂಬ ಶಾಸಕ ಬಾಲಕೃಷ್ಣ ಅವರ ವಿವಾದಿತ ಹೇಳಿಕೆಗೆ ವಿವರಣೆ ನೀಡಿ ತೇಪೆ ಹಚ್ಚಿದ್ದಾರೆ. ಲೋಕಸಭಾ ಚುನಾವಣೆ ಆದ ಮೇಲೆ ಗ್ಯಾರಂಟಿ ಯೋಜನೆ ಕೊಡಲ್ಲ ಎಂಬುದನ್ನು ಬಾಲಕೃಷ್ಣ ಹೇಳಿರೋದಲ್ಲ. ಬಿಜೆಪಿಯವರು ಹಾಗೆ ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ […]

ಕಾರವಾರದಲ್ಲಿ ಮತಾಂತರ ಮಾಡಲು ಯತ್ನಿಸಿದ: ಆರು ಮಂದಿ ಬಂಧನ

ಕಾರವಾರ:ಮತಾಂತರ ಮಾಡಲು ಬಂದಿದ್ದ ಆರು ಜನ ಆರೋಪಿಗಳನ್ನು ಬಂಧಿಸಿರುವ ಘಟನೆ ಜಿಲ್ಲೆಯ ಶಿರಸಿ ತಾಲೂಕಿನ ಜಗಳಮನೆ ಗ್ರಾಮದಲ್ಲಿ ನಡೆದಿದೆ.ಹಾವೇರಿ ಜಿಲ್ಲೆಯ ಪರಮೇಶ್ವ ನಾಯ್ಕ್, ಸುನೀತಾ ನಾಯ್ಕ್, ಧನಂಜಯ್ ಶಿವಣ್ಣ, ಶಾಲಿನಿ ರಾಣಿ, ಮುಂಡಗೊಡ ತಾಲೂಕಿನ ಕುಮಾರ ಲಮ್ಮಾಣಿ, ತಾರಾ ಲಮ್ಮಾಣಿ ಮತಾಂತರ ಮಾಡಲು ಬಂದಿದ್ದ ಆರೋಪಿಗಳು. ಜಗಳಮನೆ ಗ್ರಾಮದ ಆದರ್ಶ ನಾಯ್ಕ ಎಂಬವರ ಮನೆಗೆ ತಂಡ ಬಂದಿತ್ತು.ತಾಲೂಕಿನ ಜಗಳಮನೆ ಗ್ರಾಮದಲ್ಲಿ ಆರೋಪಿಗಳು ಗ್ರಾಮದ ಜನರನ್ನು ಮತಾಂತರ ಮಾಡಲು ಬಂದಿದ್ದಾರೆ. ಆದರ್ಶ ಎಂಬವರ ಮನೆಗೆ ಹೋಗಿ ನಿಮ್ಮ ಆರ್ಥಿಕ […]

ಟ್ರೆಕ್ಕಿಂಗ್‌ಗೆ ತಾತ್ಕಾಲಿಕ ಬ್ರೇಕ್ ಹಾಕಿದ ಸರ್ಕಾರ

ಬೆಂಗಳೂರು:ಅನಧಿಕೃತ ಚಾರಣಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಪ್ರಮಾಣಿತ ಕಾರ್ಯ ವಿಧಾನ ಜಾರಿಯಾಗುವವರೆಗೂ ಚಾರಣಕ್ಕೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಆನ್‌ಲೈನ್ ಬುಕ್ಕಿಂಗ್ ಇಲ್ಲದ ಚಾರಣ ಪಾಯಿಂಟ್‌ಗಳಿಗೆ ನಿಷೇಧಿಸಲಾಗಿದೆ. ಆನ್‌ಲೈನ್ ಬುಕ್ಕಿಂಗ್ ವ್ಯವಸ್ಥೆ, ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಕಾರಣ ನಿಷೇಧಿಸಲಾಗಿದೆ. ಅರಣ್ಯ ವ್ಯಾಪ್ತಿಯ ಗಿರಿ ಶಿಬಿರಗಳಲ್ಲಿ ಚಾರಣ ಮಾಡುವರ ಹವ್ಯಾಸ ಏರಿಕೆಯಾಗಿದ್ದು, ವಾರಾಂತ್ಯದಲ್ಲಿ ಜನದಟ್ಟಣೆ ಹೆಚ್ಚಾಗುತ್ತಿದೆ.ಅಲ್ಲದೆ ಚಾರಣ ಹೋದವರು ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಬ್ಯಾಗ್, ಬಾಟಲಿ ಎಸೆಯುತ್ತಿದ್ದಾರೆ. ಇದು ವನ್ಯಜೀವಿಗಳಿಗೆ ಅಪಾಯ ತರುತ್ತಿರುವುದು ಸರ್ಕಾರದ […]

ಭಟ್ಕಳದಲ್ಲಿ ಸಾವರ್ಕರ್ ವೃತ್ತ ಮತ್ತು ಭಗವಾಧ್ವಜ ತೆರವು

ಕಾರವಾರ:ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸಿರುವ ಪ್ರಕರಣ ಮಾಸುವ ಮುನ್ನ ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ತರಹದ ಮತ್ತೊಂದು ಘಟನೆ ನಡೆದಿದೆ. ಭಟ್ಕಳ ತಾಲೂಕಿನ ತೆಂಗಿನಗುAಡಿ ಗ್ರಾಮದಲ್ಲಿನ ಸಮುದ್ರ ದಡದಲ್ಲಿದ್ದ ಸಾವರ್ಕರ್ ವೃತ್ತ ಮತ್ತು ಭಗವಾಧ್ವಜವನ್ನು ತೆರವುಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ತೆಂಗಿನಗುAಡಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.ಬಿಜೆಪಿ ಮುಖಂಡರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರಾದ ಗೋವಿಂದ್ ನಾಯ್ಕ್, ಸುಬ್ರಾಯ ದೇವಾಡಿಗ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸಾವರ್ಕರ್ ನಾಮಫಲಕ ಅಳವಡಿಕೆಗೆ ಒಪ್ಪಿಗೆ ನೀಡಲಾಗಿತ್ತು. ಈಗ […]

ಹನುಮ ಧ್ವಜ ತೆರವು ಪ್ರಕರಣಗ್ರಾಮಸ್ಥರ ವಿರುದ್ಧ ಮತ್ತೆರಡು ಎಫ್‌ಐಆರ್

ಮಂಡ್ಯ:ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜವನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇದೀಗ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಮತ್ತೆ ಎರಡು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಮಂಡ್ಯದ ಪಶ್ಚಿಮ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿವೆ. ಅಲ್ಲದೇ ಸೋಮವಾರ ಕೆರಗೋಡು ಗ್ರಾಮದಿಂದ ಮಂಡ್ಯ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿವರೆಗು ನಡೆದ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದವರ ವಿರುದ್ಧವೂ ಮೊಕದ್ದಮೆ ಹೂಡಲಾಗಿದೆ. ಡಿವೈಎಸ್‌ಪಿ ಶಿವಮೂರ್ತಿ ಅವರು ನೀಡಿದ ದೂರಿನ ಮೇರೆಗೆ ದೂರು ದಾಖಲಾಗಿದೆ.ಮೆರವಣೆಗೆ ವೇಳೆ ಪಾದಯಾತ್ರೆ ವೇಳೆ […]

ಬೆಂಗಳೂರಿನ ಶಿವಾಜಿನಗರದಲ್ಲಿ ಹಸಿರು ಬಾವುಟ ತೆರವು

ಬೆಂಗಳೂರು:ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ಹಾಗೂ ರಾಷ್ಟ್ರ ಧ್ವಜ ವಿವಾದ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿ ಹಾರಿಸಲಾದ ಹಸಿರು ಬಾವುಟ ವೈರಲ್ ಆಗಿದ್ದು, ಹಸಿರು ಬಾವುಟ ತೆಗೆಸುವ ತಾಕತ್ ನಿಮಗೆ ಇಲ್ಲವಾ ಎಂದು ಬಿಜೆಪಿ ನಾಯಕರು ಟ್ವೀಟ್ ಮಾಡಿ ಸವಾಲು ಹಾಕಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು, ಚಾಂದಿನಿ ಚೌಕ್‌ನ ಬಿಬಿಎಂಪಿ ಧ್ವಜಸ್ತಂಭದಲ್ಲಿದ್ದ ಹಸಿರು ಬಾವುಟ ತೆರವು ಮಾಡಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ.ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿನ […]

ಸವದಿಯರಿಗೆ ಬಿಜೆಪಿ ಸೇರ್ಪಡೆ ಆಗುವಂತೆ ಆಹ್ವಾನ ಕೊಟ್ಟಿದ್ದೇವೆ

ಬೆಳಗಾವಿ:ಲಕ್ಷ್ಮಣ ಸವದಿಯವರನ್ನು ಕರೆದುಕೊಂಡು ಬರುವ ಜವಾಬ್ದಾರಿ ಎಲ್ಲರ ಹೆಗಲಿಗಿದೆ. ನಾನಿರಬಹುದು, ಈರಣ್ಣಾ ಕಡಾಡಿ, ಮಹಾಂತೇಶ್ ದೊಡ್ಡಗೌಡರ, ರಮೇಶ್ ಕತ್ತಿ ಸೇರಿ ಜಿಲ್ಲೆಯ ಎಲ್ಲ ನಾಯಕರ ಮೇಲಿದ್ದು ಸವದಿ ಬಿಜೆಪಿ ಬಂದ್ರೆ ಅನುಕೂಲ ಆಗುತ್ತದೆ ಎಂದ ಸಂಸದ ಅಣ್ಣಾಸಾಹೇಬ ಹೇಳಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ ಸವದಿಯನ್ನ ಕರೆದುಕೊಂಡು ಬರುವ ಜವಾಬ್ದಾರಿ ಎಲ್ಲರ ಹೆಗಲಿಗಿದೆ. ಈ ಬಗ್ಗೆ ಸವದಿ ಅವರು ಒಪ್ಪಿಗೆ ಕೊಡಬೇಕು. ಕೇಂದ್ರದರ ಮುಖಂಡರ ಜೊತೆಗೆ ಚರ್ಚೆ ಆಗಬೇಕು. ಸವದಿಯವರು ಬರಲಿ ಅನ್ನೋದು ನಮ್ಮ ಆಶಯ ಬಂದರೆ […]