ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿಗೆ ಶ್ರಮಿಸುತ್ತೇವೆ
ಕಲಬುರಗಿ:ಇಂಡಿಯಾ ಮೈತ್ರಿಕೂಟ ಒಟ್ಟಾಗಿರಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮೈತ್ರಿಕೂಟವು ಒಗ್ಗಟ್ಟು ಕಾಯ್ದುಕೊಳ್ಳುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲರಿಗೂ ಪತ್ರ ಬರೆದಿದ್ದೇನೆ. ಹೀಗಾಗಿ ಇನ್ನು ಆ ವಿಚಾರದ ಬಗ್ಗೆ ಈಗ ಹೇಳಿಕೆ ಕೊಟ್ಟರೆ ಗೊಂದಲ ಆಗುತ್ತದೆ ಎಂದರು.ಡೆಹ್ರಾಡೂನ್‌ಗೆ ಹೋಗಿ ಮಾಹಿತಿ ಪಡೆದುಕೊಂಡು ನಂತರ ಮಾತನಾಡುತ್ತೇನೆ. ಇಂಡಿಯಾ ಒಕ್ಕೂಟದಿಂದ ಎಲ್ಲರೂ ಸ್ಪರ್ಧೆ ಮಾಡಿದರೆ ಒಳ್ಳೆಯದಾಗಲಿದೆ ಎಂದು ಅವರು […]







































































































































































































































































































































































































































































































































































































































































































































































































































































































































































































































































































































