September 16, 2026

ಕುಟುಂಬ ಸಹಿತ ನಾನು ಅಯೋಧ್ಯೆಗೆ ಹೋಗುತ್ತೇನೆ

ಹಾಸನ:ಕುಟುಂಬ ಸಹಿತವಾಗಿ ನಾನು ಅಯೋಧ್ಯೆ ರಾಮ ಮಂದಿರಕ್ಕೆ ಹೋಗುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಹೇಳಿದರು. ಹಾಸನದಲ್ಲಿ ಮಾತನಾಡಿದ ಅವರು, ನಾನು, ನನ್ನ ಪತ್ನಿ, ಮಗ ಹೆಚ್‌ಡಿ ಕುಮಾರಸ್ವಾಮಿ ಮತ್ತು ಅವರ ಪತ್ನಿ ಹಾಗೂ ನಿಖಿಲ್ ಹೋಗುತ್ತೇವೆ ಎಂದರು.ಜನವರಿ 22ಕ್ಕೆ ವಿಶೇಷ ವಿಮಾನ ಮಾಡಿದ್ದಾರೆ. ಅದರಲ್ಲೆ ಅಯೋಧ್ಯೆಗೆ ಹೋಗುತ್ತೇವೆ. ಸಂಜೆ ಒಕ್ಕಲಿಗರ ಒಂದು ಸಮಾವೇಶ ಇದೆ. ಎಸ್ ಎಂ ಕೃಷ್ಣ, ಡಿಕೆ ಶಿವಕುಮಾರ್, ನಾನು ನಮ್ಮ ಸ್ವಾಮಿಜಿ ಎಲ್ಲರೂ ಭಾಗಿಯಾಗುತ್ತೇವೆ ಎಂದರು.ಮೀಸಲಾತಿ ಬಗ್ಗೆ […]

ವಿವಿ, ಕಾಲೇಜುಗಳಲ್ಲಿ ಯುನಿಪೈಢ್ ಯುನಿವರ್ಸಿಟಿ ಕಾಲೇಜು ಮ್ಯಾನೇಜ್ಮೆಂಟ್ ಸಿಸ್ಟಮ್ ಅಳವಡಿಕೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಕ್ಷತೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಮಹತ್ವದ ನಿರ್ಧಾರದಲ್ಲಿ, ಉನ್ನತ ಶಿಕ್ಷಣ ಇಲಾಖೆಯು ಸಚಿವ ಎಚ್‌ಕೆ ಪಾಟೀಲ್ ನೇತೃತ್ವದಲ್ಲಿ ಯುನಿಪೇಯ್ಡ್ ವಿಶ್ವವಿದ್ಯಾಲಯ ಕಾಲೇಜು ನಿರ್ವಹಣಾ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದಾಗಿ ಘೋಷಿಸಿದೆ. ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ಕ್ಯಾಬಿನೆಟ್ ಅನುಮೋದಿಸಿದ ಈ ಕಾರ್ಯತಂತ್ರದ ಕ್ರಮವು ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳು ತಮ್ಮ ಕಾರ್ಯಾಚರಣೆಗಳನ್ನು ನಿರ್ವಹಿಸುವ ರೀತಿಯಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಸಿದ್ಧವಾಗಿದೆ. ಶಿಕ್ಷಣ ಆಡಳಿತವನ್ನು ಆಧುನೀಕರಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಯುನಿಪೇಯ್ಡ್ […]

ಫೆಬ್ರವರಿ 16 ರಂದು ರಾಜ್ಯ ಬಜೆಟ್

ಬೆಂಗಳೂರು:ಫೆಬ್ರವರಿ 16 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ.ಈ ಸಂಬAಧ ಇಂದಿನ ಸಚಿವ ಸಂಪುಟಲ್ಲಿ ಚರ್ಚೆ ನಡೆದಿದ್ದು, ಮುಂದಿನ ತಿಂಗಳು ಅಂದರೆ ಫೆಬ್ರವರಿ 12 ರಿಂದ ಫೆಬ್ರವರಿ ೨೩ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಹಾಗೂ ಫೆಬ್ರವರಿ 16 ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡುವುದಾಗಿ ತೀರ್ಮಾನಿಸಲಾಗಿದೆ.ವಿಧಾನಮಂಡಲ ಅಧಿವೇಶನ ಅಧಿವೇಶನದ ಮೊದಲ ದಿನ ಅಂದರೆ ಫೆ.12 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಮುಂದೆ ಲೋಕಸಭಾ ಚುನಾವಣೆ […]

ಚಿಕ್ಕಬಳ್ಳಾಪುರದ ಕೆರೆಯೊಂದರಲ್ಲಿ ತಾಯಿ, ಇಬ್ಬರು ಮಕ್ಕಳ ಶವ ಪತ್ತೆ

ಚಿಕ್ಕಬಳ್ಳಾಪುರ:ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಬಳಿಯ ಕೆರೆಯೊಂದರಲ್ಲಿ ತಾಯಿ ಹಾಗೂ ತನ್ನ ಇಬ್ಬರು ಮಕ್ಕಳ ಶವ ಪತ್ತೆಯಾಗಿದ್ದು, ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಕೆರೆಯಲ್ಲಿ ಶವಗಳು ತೇಲಾಡುತ್ತಿದ್ದನ್ನು ಕಂಡ ಸ್ಥಳೀಯರು ಪೊಲೀಸರು ಹಾಗೂ ಆಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸದ್ಯ ತಾಯಿ ಹಾಗೂ ಇಬ್ಬರ ಮಕ್ಕಳ ಮೃತದೇಹ ಮೇಲೆತ್ತಲಾಗಿದ್ದು, ಮೃತ ತಾಯಿ ಚಿಂತಾಮಣಿ ತಾಲೂಕು ಯಗವಕೋಟೆ ನಿವಾಸಿ ರಾಧ ಎಂದು ತಿಳಿದುಬಂದಿದೆ.ಮೃತ ಮಕ್ಕಳನ್ನು 4 ವರ್ಷದ ಮಗಳು ಪೂರ್ವಿತಾ ಎಂದು ಗುರುತಿಸಲಾಗಿದ್ದು, ಒಂದೂವರೆ […]

ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತುಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಅಸ್ತು

ಬೆಂಗಳೂರು:ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಲಿ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ.ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಟಪುದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಂಪುಟ ಸಭೆ ಬಳಿಕ ಎಚ್‌ಕೆ ಪಾಟೀಲ್ ಹಾಗೂ ಹೆಚ್‌ಸಿ ಮಹಾದೇವಪ್ಪ ಜಂಟಿ ಸುದ್ದಿಗೋಷ್ಠಿ ನಡೆಸಿ ನ್ಯಾಯಮೂರ್ತಿ ಸದಾಶಿವ ಆಯೋಗದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರದಿ ಬಗ್ಗೆ ವಿವರಿಸಿದರು.ನ್ಯಾಯಮೂರ್ತಿ ಸದಾಶಿವ ಆಯೋಗದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರದಿ ಮೇರೆಗೆ ಒಳ […]

ಗೃಹಜ್ಯೋತಿ ನಿಯಮದಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ನಿಯಮದಲ್ಲಿ ಮಹತ್ವದ ಬದಲಾವಣೆಯಾಗಿದೆ. ಶೇಕಡವಾರು 10ರಷ್ಟು ಬದಲು 10 ಯುನಿಟ್‌ ಫ್ರೀ ವಿದ್ಯುತ್ ನೀಡಲು ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸಚಿವ ಹೆಚ್‌.ಕೆ.ಪಾಟೀಲ್‌ ಮಾಹಿತಿ ನೀಡಿದ್ದಾರೆ. ಈ ಮೊದಲು ಗೃಹ ಜ್ಯೋತಿ ಯೋಜನೆ ಅಡಿ ಬಳಸಿದ ಯುನಿಟ್​ಗಿಂತ ಶೇ. 10ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು  ಬದಲಾಗಿ 10 ಯುನಿಟ್ ನೀಡಲು […]

ಅತೃಪ್ತಿ ಶಮನಕ್ಕೆ ಕೊಡುತ್ತೇವೆ ಎಂದಿದ್ದ ೨೫ ಕೋಟಿ ಅನುದಾನ ಎಲ್ಲಿ

ಬೆಂಗಳೂರು:ಅತೃಪ್ತಿ ಶಮನಕ್ಕೆ 25 ಕೋಟಿ ರೂಪಾಯಿ ಅನುದಾನ ಕೊಡುವುದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಹೇಳಿತ್ತು. ಆದರೆ, ಈವರೆಗೂ ಅನುದಾನ ಕೊಟ್ಟಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಿಗೆ ಅನುದಾನ ಕೊಟ್ಟರೆ, ನಮ್ಮ ಶಾಸಕರಿಗೂ ಕೊಡಬೇಕು. ನಾನು ಸಿಎಂ ಆಗಿದ್ದಾಗ ೨೫ ಕೋಟಿ ರೂ. ಅನುದಾನವನ್ನು ಕೊಟ್ಟಿದ್ದೇನೆ. ಹಾಗಾದರೆ ಇವರು ಈಗ ಎಷ್ಟು ಕೊಡಬೇಕು ಕಾಂಗ್ರೆಸ್ ಶಾಸಕರಿಗೆ? ಇವರ ಯೋಗ್ಯತೆಗೆ ಸಣ್ಣ ಬೋರ್‌ವೆಲ್ ಹಾಕಿಲ್ಲ ಎಂದು […]

ಮಠಗಳು ಸಾಮರಸ್ಯ ಬೆಳೆಸುವ ಕೇಂದ್ರವಾಗಲಿ

ಉಡುಪಿ:ಕೃಷ್ಣ ಮಠ ಸಾಮಾಜಿಕವಾಗಿ, ಧಾರ್ಮಿಕವಾಗಿ ತೊಡಗಿಸಿಕೊಂಡ ಕೇಂದ್ರ. ಪುತ್ತಿಗೆ ಮಠದ ಪರ್ಯಾಯದಲ್ಲಿ ಭಾಗಿಯಾಗಿರೋದು ಪುಣ್ಯದ ಕೆಲಸ ಎಂದು ವಿಧಾನಸಭೆ ಸಭಾಪತಿ ಯು.ಟಿ ಖಾದರ್ ಹೇಳಿದರು.ಉಡುಪಿ ಕೃಷ್ಣ ಮಠದ ಪುತ್ತಿಗೆ ಪರ್ಯಾಯ ದರ್ಬಾರ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಧಾರ್ಮಿಕ ಕೇಂದ್ರಗಳಿಗೆ ಸಮಾಜವನ್ನು ತಿದ್ದುವ ಶಕ್ತಿಯಿದೆ. ಸಮಾಜ ಒಡೆದು ಹೋಗುವ ಸಂದರ್ಭದಲ್ಲಿ ಮಠಾಧೀಶರು ಜೋಡಿಸಬೇಕು. ಪುತ್ತಿಗೆ ಶ್ರೀಗಳು ಧಾರ್ಮಿಕವಾಗಿ ದೇಶ-ವಿದೇಶದಲ್ಲಿ ತೊಡಗಿಸಿಕೊಂಡವರು ಎಂದರು.ರಾಜ್ಯ, ದೇಶದಲ್ಲಿ ಸಾಮರಸ್ಯ ಬೆಳೆಯಲು ಮಠಗಳು ದಾರಿದೀಪವಾಗಬೇಕು. ಹಿಂದಿನಿAದಲೂ ನಾನು ಕೃಷ್ಣ ಮಠಕ್ಕೆ ಸಂಬAಧಪಟ್ಟ ಎಲ್ಲಾ ಧಾರ್ಮಿಕ […]

ಸಂಸದ ಅನಂತಕುಮಾರ್ ಹೆಗಡೆಗೆ ಬಿಜೆಪಿ ಕಾರ್ಯಕರ್ತರ ಕ್ಲಾಸ್

ಬೆಳಗಾವಿ:ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಸಭೆಯಲ್ಲಿ ಅನಂತ್ ಕುಮಾರ್ ಹೆಗಡೆಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಕಾರ್ಯಕರ್ತರ ಕೈಗೆ ನೀವು ಸಿಕ್ಕಿಲ್ಲ. ನಿಮ್ಮ ಪಿಎಗಳು ಕೂಡ ಸರಿಯಾಗಿ ಸ್ಪಂದಿಸಿಲ್ಲ, ಹೇಗೆ ಮಾಡಬೇಕು. ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಕೂಡ ಕುಂಠಿತಗೊAಡಿವೆ. ಖಾನಾಪುರದಲ್ಲಿ ಸಂಸದರ ಕಾರ್ಯಾಲಯ ಓಪನ್ ಮಾಡಿ ಎಂದು ಒತ್ತಾಯಿಸಿದ್ದಾರೆ.ಖಾನಾಪುರ ಪಟ್ಟಣದಲ್ಲಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿತ್ತು. ಈ […]

ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ನೇಣಿಗೆ ಶರಣು

ಶಿವಮೊಗ್ಗ:ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ 2023ರ ಮಾರ್ಚ್ನಲ್ಲಿ […]