ಎಸ್‌ಸಿ ಒಳಮೀಸಲಾತಿ ಪುನರ್ ಪರಿಶೀಲನೆ
ಬೆಂಗಳೂರು:ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಗೆ ನೀಡಲಾಗಿದ್ದ ಒಳಮೀಸಲಾತಿಯ ಬಗ್ಗೆ ಪುನರ್ ಪರಿಶೀಲನೆ ಮಾಡ್ತೇವೆ ಎಂದು ಗೃಹಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಪರಿಶಿಷ್ಟ ಜಾತಿಗೆ ನೀಡಿದ್ದ ಒಳಮೀಸಲಾತಿಯ ಬಗ್ಗೆ ಪುನರ್ ಪರಿಶೀಲನೆ ಮಾಡ್ತೇವೆ. ಏಕೆಂದರೆ ಬಿಜೆಪಿ ಸರ್ಕಾರ ಕಾನೂನಾತ್ಮಕವಾಗಿ ಒಳಮೀಸಲಾತಿ ಕೊಟ್ಟಿಲ್ಲ ಎಂದು ಟೀಕಿಸಿದ್ದಾರೆ.ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬಗ್ಗೆ ಒಂದು ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ನಮ್ಮ ಹಿಂದಿನ ಸರ್ಕಾರದಲ್ಲಿ ಚಿತ್ರದುರ್ಗ ಸಮಾವೇಶದಲ್ಲಿ ಸದಾಶಿವ ಆಯೋಗದ ನಿರ್ಣಯ ಕೈಗೊಳ್ಳಲು ತೀರ್ಮಾನ ಮಾಡಿದ್ದೆವು. […]







































































































































































































































































































































































































































































































































































































































































































































































































































































































































































































































































































































