September 16, 2026

ಎಡಿಟಿಂಗ್ ಮಾಸ್ಟರ್ ಸಿದ್ದರಾಮಯ್ಯಬಿಜೆಪಿ ವ್ಯಂಗ್ಯ

ಬೆಂಗಳೂರು:ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿ ಸೃಷ್ಟಿಸುವುದು, ಇದೆಲ್ಲವೂ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಚೆನ್ನಾಗಿಯೇ ‘ಸಿದ್ದಿ’ಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ರಾಜ್ಯ ಬಿಜೆಪಿ, ನಕಲಿ ಸುದ್ದಿಗಳನ್ನು ರಚಿಸುತ್ತಾ ಕಾಲಹರಣ ಮಾಡುವ ಬದಲು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಸಿಎಂ ಯೋಚಿಸಿದ್ದರೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿರಲಿಲ್ಲ, ಮಹಿಳೆಯರ ಮೇಲೆ ಹಲ್ಲೆ ನಡೆಯುತ್ತಿರಲಿಲ್ಲ ಎಂದು ಉಲ್ಲೇಖಿಸಿದೆ. ಜತೆಗೆ ಎಡಿಟಿಂಗ್ ಮಾಸ್ಟರ್ ಎಂದು ಸಿದ್ದರಾಮಯ್ಯ ಅವರನ್ನು ಕುಹಕವಾಡಿದೆ.ಎಲ್ಲೆಂದರಲ್ಲಿ ನಿದ್ದೆಗೆ […]

ಜ.19ರಂದು ಕರ್ನಾಟಕಕ್ಕೆ ಮೋದಿ ಭೇಟಿ

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿಯವರು ಜನವರಿ 19 ರಂದು ಶುಕ್ರವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.35ಕ್ಕೆ ದೆಹಲಿಯಿಂದ ಹೊರಟು ನೇರವಾಗಿ ಕಲಬುರಗಿಗೆ ತೆರಳಲಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಿಂದ 9.40ಕ್ಕೆ ಹೆಲಿಕಾಫ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಹೋಗುತ್ತಾರೆ. ಬಳಿಕ ಮಧ್ಯಾಹ್ನ 12.10ಕ್ಕೆ ಹೆಲಿಕಾಫ್ಟರ್ ಮೂಲಕ ಸೊಲ್ಲಾಪುರದಿಂದ ಪುನಃ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬರುತ್ತಾರೆ.1.05ಕ್ಕೆ ವಿಶೇಷ ವಿಮಾನದ ಮೂಲಕ ಕಲಬುರಗಿಯಿಂದ ಹೊರಟು ಮಧ್ಯಾಹ್ನ 2.10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲಪುತ್ತಾರೆ. 2.15ಕ್ಕೆ ಕೆಂಪೇಗೌಡ […]

ಓಮಿನಿ ಕಾರು-ಟ್ರ‍್ಯಾಕ್ಟರ್ ನಡುವೆ ಡಿಕ್ಕಿ;ಮೂವರು ಸಾವು

ದಾವಣಗೆರೆ:ಭತ್ತದ ಹುಲ್ಲು ತುಂಬಿಕೊAಡು ಹೋಗುತ್ತಿದ್ದ ಟ್ರ‍್ಯಾಕ್ಟರ್‌ಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಳ್ಳೇನಹಳ್ಳಿ ಬಳಿಯ ಬೀರೂರು-ಸಮ್ಮಸ್ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರು ಹಾಗೂ ಗಾಯಾಳುಗಳು ಚನ್ನಗಿರಿ ತಾಲೂಕಿನ ನಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಸಂತೆಬೆನ್ನೂರು ಕಡೆಯಿಂದ ಚನ್ನಗಿರಿಗೆ ಒಮಿನಿಯಲ್ಲಿ ಒಂದೇ ಕುಟುಂಬಸ್ಥರು ಹೋಗುವಾಗ ಎದುರಿಗೆ ಭತ್ತದ ಹುಲ್ಲು ತುಂಬಿಕೊAಡು […]

ಟೂರಿಂಗ್ ಟಾಕೀಸ್‌ನಲ್ಲಿ ಗೊಂಬೆ ಇಟ್ಟಿದ್ದಾರೆ ಅನ್ನಿಸ್ತುಸಚಿವ ರಾಜಣ್ಣ ಶ್ರೀರಾಮನಿಗೆ ಅಪಮಾನ

ತುಮಕೂರು:ಅಯೋಧ್ಯೆ ರಾಮಮಂದಿರ ವಿಚಾರವಾಗಿ ಬಿಜೆಪಿ ನಡೆಯನ್ನು ಟೀಕಿಸುವ ಭರದಲ್ಲಿ ಭಗವಾನ್ ಶ್ರೀರಾಮನನ್ನು ಕಾಂಗ್ರೆಸ್ ಸಚಿವ ಕೆ.ಎನ್.ರಾಜಣ್ಣ ಅವಮಾನಿಸಿದ್ದಾರೆ.ತುಮಕೂರಿನಲ್ಲಿ ಮಂಗಳವಾರ ನಡೆದ ಹಿಂದುಳಿದ ವರ್ಗಗಳ ಒಕ್ಕೂಟ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಬಾಬ್ರಿ ಮಸೀದಿ ಬೀಳಿಸಿದ್ದಾಗ ಅಲ್ಲಿಗೆ ಹೋಗಿದ್ದೆ. ಒಂದು ಟೆಂಟ್ ಅಲ್ಲಿ ಎರಡು ಗೊಂಬೆ ಇಟ್ಟು ಇದೇ ಶ್ರೀರಾಮ ಅಂತಾ ಹೇಳ್ತಿದ್ರು. ಟೂರಿಂಗ್ ಟಾಕೀಸ್ ಅಲ್ಲಿ ಗೊಂಬೆ ಇಟ್ಟಿದ್ದಾರೆ ಅನಿಸ್ತು ಎಂದು ಹೇಳಿಕೆ ನೀಡಿದ್ದಾರೆ.ಈಗೆಲ್ಲಾ ಶ್ರೀರಾಮನ ದೇವಸ್ಥಾನ ಕಟ್ಟಿಸ್ತಿದ್ದಾರೆ ಅಲ್ಲಿ. ಇನ್ನೊಂದು ಐದಾರು ತಿಂಗಳು ಕಳೀಲಿ ಏನೇನ್ […]

ಲೋಕಸಭಾ ಚುನಾವಣೆ ಗೆದ್ದರೇ ಸಿದ್ದರಾಮಯ್ಯರೇ ಪೂರ್ಣಾವಧಿ ಸಿಎಂಯತೀಂದ್ರ ಹೊಸ ಬಾಂಬ್!

ಹಾಸನ:2024ರ ಲೋಕಸಭಾ ಚುನಾವಣೆ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಎಂದು ಮಾಜಿ ಶಾಸಕ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ. ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೇ, ೫ ವರ್ಷ ಸಿಎಂ ಆಗಿರುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.ಚುನಾವಣೆಗೂ ಮೊದಲು 5 ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ […]

ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ

ಬೆಂಗಳೂರು:ಹಿಟ್ ಅಂಡ್ ರನ್ ನಯಾ ರೂಲ್ಸ್ ಜಾರಿಗೆ ಮುಂದಾದ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರೋ ಲಾರಿ ಓನರ್ಸ್ ಅಸೋಸಿಯೇಷನ್ ಕಾನೂನು ರದ್ದತಿಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇಂದು ಮಧ್ಯರಾತ್ರಿಯಿಂದಲೇ ಲಾರಿ ಸಂಘಟನೆಗಳು ಮುಷ್ಕರ ಕೈಗೊಳ್ಳಲಿದ್ದಾರೆ. ಮುಷ್ಕರ ಹಿನ್ನೆಲೆ 2 ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.ಕೇಂದ್ರದ ಹಿಟ್ ಅಂಡ್ ರನ್ ಕಾನೂನು ವಿರೋಧಿಸಿ ಮತ್ತು ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘಗಳು ಮುಷ್ಕರಕ್ಕೆ ಕರೆಕೊಟ್ಟಿವೆ. ಕರ್ನಾಟಕ ಲಾರಿ […]

ಮದ್ವೆಯಾಗಲು ಯಾರೂ ಹೆಣ್ಣು ಕೊಡ್ತಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ

ವಿಜಯನಗರ: ಮದುವೆಯಾಗಲುಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಮನನೊಂದು ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ.PauseUnmute ಗ್ರಾಮದ ಬಿ.ಮಧುಸೂಧನ್ (26) ಮೃತ ಯುವಕ ಎಂದು ತಿಳಿದು ಬಂದಿದೆ. ಆತ ಜ.5 ರಂದೇ ವಿಷ ಸೇವಿಸಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ. ಯುವಕ ಯಾಕೆ ವಿಷ ಸೇವಿಸಿದ್ದಾನೆ ಎಂಬ ವಿಚಾರ ಮೊದಲಿಗೆ ತಿಳಿದು ಬಂದಿರಲಿಲ್ಲ. ಆತ ಮೃತಪಟ್ಟ ಬಳಿಕ ಪೊಲೀಸರು ಆತನ ಸ್ನೇಹಿತರನ್ನು ವಿಚಾರಿಸಿದಾಗ ಯುವಕನ ಸಾವಿಗೆ […]

ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲು ಕೊಪ್ಪಳಕ್ಕೆ ಬಂದರೆ ರೆಡ್ ಕಾರ್ಪೆಟ್ ಸ್ವಾಗತ

ಬೆಂಗಳೂರು: ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿಯವರು ಸ್ಪರ್ಧೆ ಮಾಡಲು ಮುಂದಾದರೆ ರೆಡ್ ಕಾರ್ಪೆಟ್ ಹಾಕಿ ಸ್ವಾಗತ ಮಾಡುತ್ತೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ. ಪ್ರಿಯಾಂಕಾ ಗಾಂಧಿಯವರು ಕೊಪ್ಪಳದಿಂದ ಸ್ಪರ್ಧೆ ಮಾಡುವ ಸುದ್ದಿ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿಯವರು ಕೊಪ್ಪಳಕ್ಕೆ ಬರುವುದಾದರೆ ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸುತ್ತೇವೆ. ಇಲ್ಲಿಂದ ಅವರು ಸ್ಪರ್ಧಿಸಿದರೆ ಹೆಚ್ಚು ಅಂತರದಿಂದ […]

ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿ

ರಾಯಚೂರು: ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿಯಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಜಿಲ್ಲೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬರ ಪರಿಹಾರ, ಅತೀವೃಷ್ಟಿ ಪರಿಹಾರ ನೀಡುವಲ್ಲಿ ಸಾಕಷ್ಟು ನ್ಯೂನ್ಯತೆಗಳಿದ್ದವು. ಎಷ್ಟೋ ಜನ ಬೆಳೆಯನ್ನೇ ಇಡದಿದ್ದರೂ ಅವರಿಗೂ ಪರಿಹಾರ ಸಿಗುತ್ತಿತ್ತು. ಬೆಳೆ ಹಾನಿಯಾದವರಿಗೆ ಪರಿಹಾರ ಸಿಗುತ್ತಿರಲಿಲ್ಲ ಎಂದರು. ಹಿಂದಿನ ಸರ್ಕಾರ ಇದ್ದಾಗ, ನಾನು ಕೃಷಿ ಸಚಿವನಿದ್ದಾಗಲೂ ನೋಡಿದ್ದೇನೆ. ಯಾರದ್ದೋ ಜಮೀನು ಮತ್ತೊಬ್ಬರಿಗೆ ಹಣ ಪಾವತಿಯಾಗಿತ್ತಿತ್ತು. ರೈತರ ಬೆಳೆಯೇ ಬೇರೆ ಪರಿಹಾರ ಬರುವುದೇ ಬೇರೆ […]

ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ನಡೆಯುತ್ತಲೇ ಇದ್ದು, 20 ದಿನಗಳ ಅಂತರದಲ್ಲಿ ಮೂರನೇ ಪ್ರಕರಣ ನಡೆದಿದೆ. ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಬೆಂಗಳೂರು ಮೂಲದ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದರು. ಇದನ್ನು ಗಮನಿಸಿ ಜೋಡಿಯನ್ನು ತಡೆದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು, ಪೊಲೀಸರು ಜೋಡಿಯನ್ನು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ದಕ್ಷಿಣ ಕನ್ನಡ […]